ಸ್ವಚ್ಛ ಭಾರತಕ್ಕೆ ಗಾಂಧಿ, ಮೋದಿ ಸಾಕಾಗುವುದಿಲ್ಲ..
Team Udayavani, Oct 2, 2017, 1:17 PM IST
ಹೊಸದಿಲ್ಲಿ : ‘1 ಸಾವಿರ ಗಾಂಧಿ, 1 ಲಕ್ಷ ಮೋದಿ ಬಂದರೂ ಸ್ವಚ್ಛ ಭಾರತ ಸಾಧ್ಯವಾಗದು, ಅದು ಸಾಕಾರಗೊಳ್ಳಬೇಕಾದರೆ 125 ಕೋಟಿ ಭಾರತೀಯರ ಸಹಕಾರ ಅಗತ್ಯ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೆಹಲಿಯ ವಿಜ್ಞಾನ ಭವನದಲ್ಲಿ ಸೋಮವಾರ ನಡೆದ ಸ್ವಚ್ಛ ಭಾರತ ಮಿಶನ್ನಲ್ಲಿ ಮಾತನಾಡಿದ ಪ್ರಧಾನಿ ‘125 ಕೋಟಿ ಭಾರತೀಯರೂ ಸ್ವಚ್ಛ ಭಾರತ ಅಭಿಯಾನವನ್ನು ಅವರ ಹೃದಯಾಂತರಾಳದಿಂದ ಒಪ್ಪಿಕೊಂಡಿದ್ದಾರೆ’ ಎಂದರು.
‘1 ಸಾವಿರ ಗಾಂಧಿ, 1 ಲಕ್ಷ ಮೋದಿ,ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು , ಅಧಿಕಾರಿಗಳು ಜೊತೆಯಾದರೂ ಸ್ವಚ್ಛ ಭಾರತ ಸಾಧ್ಯವಾಗುವುದಿಲ್ಲ, ಇದಕ್ಕಾಗಿ 125 ಕೋಟಿ ಮಂದಿ ಭಾರತೀಯರು ಕೆಲಸ ಮಾಡಬೇಕಾಗಿದೆ’ ಎಂದರು.
‘ಭಾರತ ಇಂದು ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ನಾವದರಿಂದ ಪಲಾಯನ ಮಾಡುವುದಿಲ್ಲ. ನಾವು ಸವಾಲುಗಳನ್ನು ಎದುರಿಸಿ ಮೆಟ್ಟಿ ನಿಂತು ಯಶಸ್ಸು ಪಡೆಯುತ್ತೇವೆ’ ಎಂದರು.
‘ಅನೇಕ ಸಂಘ ಸಂಸ್ಥೆಗಳು ಸ್ವಚ್ಛತೆಗಾಗಿ ಕೆಲಸ ಮಾಡುತ್ತಿದ್ದು , ನಮ್ಮ ದೇಶವನ್ನು ಸ್ವಚ್ಛತೆಯ ಮೊದಲ ಶ್ರೇಣಿಯಲ್ಲಿ ನೋಡಬೇಕು’ ಎಂದರು.
‘ನಾವು ಸ್ವಚ್ಛ ಭಾರತ ಅಭಿಯಾನ ಪ್ರಾರಂಭ ಮಾಡಿದಾಗ ಟೀಕೆ ವ್ಯಕ್ತವಾಗಿತ್ತು, 3 ವರ್ಷಗಳ ಬಳಿಕ ನಾವು ಸಾಕಷ್ಟು ಪ್ರಗತಿ ಸಾಧಿಸಿದ್ದೇವೆ. ಈ ಅಭಿಯಾನಕ್ಕೆ ಮಾಧ್ಯಮಗಳು ಸಾಕಷ್ಟು ಕೊಡುಗೆ ನೀಡಿವೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.