ಬಿಎಸ್‌ವೈ ಸಿಎಂ ಮಾಡೋದು ಜನರ ಆಶಯ
Team Udayavani, Oct 2, 2017, 1:25 PM IST
ತಿ.ನರಸೀಪುರ: ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ 3 ವರ್ಷಗಳ ಕಾಲ ಬಡವರ ಪರವಾದ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದಕ್ಷ ಆಡಳಿತ ನೀಡಿದ್ದ ಬಿಜೆಪಿ ರಾಜಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮತ್ತೂಮ್ಮೆ ಮುಖ್ಯಮಂತ್ರಿಯಾಗುವುದು ರಾಜ್ಯದ ಸಮಸ್ತ ಜನರ ಆಶಯ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ವೆಂಕಟರಮಣಶೆಟ್ಟಿ ಹೇಳಿದರು.
ಪಟ್ಟಣದ ಹೆಳವರಹುಂಡಿಯಲ್ಲಿ ಬಿಜೆಪಿ ರಾಜಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಭಿಮಾನಿ ಬಳಗವನ್ನು ಉದ್ಘಾಟಿಸಿ ಮಾತನಾಡಿದರು. ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಎದುರು ನೋಡುತ್ತಿರುವ ರಾಜ್ಯದ ಜನರು, ಬಿಜೆಪಿಗೆ ಅಧಿಕಾರ ನೀಡಲು ಉತ್ಸುಕರಾಗಿದ್ದಾರೆ. ಯಡಿಯೂರಪ್ಪ ಅವರ ಮೂರು ವರ್ಷಗಳ ದಕ್ಷ ಆಡಳಿತ ನೋಡಿರುವ ಮತದಾರರು ಚುನಾವಣೆ ನಂತರ ಅವರನ್ನೇ ಮುಖ್ಯಮಂತ್ರಿ ಮಾಡಲು ಜನಾದೇಶ ನೀಡಲಿದ್ದಾರೆಂದು ಭವಿಷ್ಯ ನುಡಿದರು.
ರೈತಪರ ಹಾಗೂ ಜನಪರ ಹೋರಾಟದ ಮೂಲಕವೇ ರಾಜಕಾರಣವನ್ನು ಆರಂಭಿಸಿದ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ಪ್ರಥಮ ಬಾರಿಗೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಕಾರಣಕರ್ತರಾದರು. ಭಾಗ್ಯಲಕ್ಷಿ ಬಾಂಡ್ ಯೋಜನೆ ಸೇರಿದಂತೆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಹಾಗೂ ಸೈಕಲ್ ವಿತರಣೆ ಮಾಡುವ ಮೂಲಕ ಬಡವರ ಪರವಾದ ಸರ್ಕಾರ ಎಂಬುದನ್ನು ಆಡಳಿತದಲ್ಲಿ ತೋರಿಸಿಕೊಟ್ಟಿದ್ದಾರೆಂದರು.
ಯಡಿಯೂರಪ್ಪ ಅಭಿಮಾನಿಗಳ ಬಳಗದ ಅಧ್ಯಕ್ಷ ಬಿ.ಮಹೇಶ, ಉಪಾಧ್ಯಕ್ಷ ವಿಜಯ್, ಖಜಾಂಚಿ ಪ್ರಭು, ಬಿಜೆಪಿ ಮುಖಂಡರಾದ ನಾಗೇಂದ್ರ, ಮೋಹನ್, ಬಾಲಾಜಿ, ಅಡಿಗೆ ಪ್ರಭು, ಪಾಂಡು, ಯೋಗೇಶ, ಸೋಮ, ಅಭಿ, ಶಾಂತ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.