ಗಾಂಧಿ ಕನಸಿಗಾಗಿ ಸಮರ: ಸಿಎಂ
Team Udayavani, Oct 3, 2017, 6:00 AM IST
ಬೆಂಗಳೂರು: “ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನಾಲ್ಕು ವರ್ಷಗಳಲ್ಲಿ 31.60 ಲಕ್ಷ ಶೌಚಾಲಯಗಳನ್ನು ನಿರ್ಮಿಸಿ “ಶೌಚಾಲಯಕ್ಕಾಗಿ ಸಮರ’ ಎಂಬ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದ್ದು 2018ರ
ಮಾರ್ಚ್ ವೇಳೆಗೆ ಕರ್ನಾಟಕವನ್ನು ಸಂಪೂರ್ಣ “ಬಯಲು ಬಹಿರ್ದೆಸೆಮುಕ್ತ’ ಮಾಡಲಾಗುವುದು’ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಹಮ್ಮಿಕೊಂಡಿದ್ದ ಗ್ರಾಮೀಣ ಕರ್ನಾಟಕದ 1,937 ಗ್ರಾಮ
ಪಂಚಾಯತ್‌ಗಳನ್ನು ಬಯಲು ಬಹಿರ್ದೆಸೆಮುಕ್ತ ಘೋಷಣೆ ಹಾಗೂ ಗಾಂಧಿ ಗ್ರಾಮ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ನೈರ್ಮಲ್ಯ ಮತ್ತು ಶುಚಿತ್ವದ ಗಾಂಧೀಜಿ ಕನಸು ಸಾಕಾರಗೊಳಿಸುವುದು ನಮ್ಮ ಗುರಿ. ಇಡೀ ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತ ಮಾಡುವ ಸಂಕಲ್ಪ ನಮ್ಮದಾಗಿದೆ’ ಎಂದು ಹೇಳಿದರು.
“ಕಳೆದ ವರ್ಷ 1 ಸಾವಿರ ಗ್ರಾ.ಪಂ.ಗಳನ್ನು ಬಯಲು ಬಹಿರ್ದೆಸೆಮುಕ್ತ ಎಂದು ಘೋಷಣೆ ಮಾಡಲಾಗಿತ್ತು. ಈ ವರ್ಷ 1,937 ಗ್ರಾ.ಪಂ.ಗಳನ್ನು ಬಯಲು ಬಹಿರ್ದೆಸೆಮುಕ್ತ ಎಂದು ಘೋಷಿಸ ಲಾಗಿದೆ. ಇದೇ ವೇಳೆ 51 ತಾಲೂಕುಗಳು, 10,340 ಗ್ರಾಮಗಳು ಸಹ ಬಯಲು ಶೌಚ ಮುಕ್ತಗೊಂಡಿವೆ. ನಾಲ್ಕು ವರ್ಷಗಳಲ್ಲಿ 31.60 ಲಕ್ಷ ಶೌಚಾಲಯಗಳನ್ನು ನಿರ್ಮಿಸಿದ್ದೇವೆ. ಇಷ್ಟೆಲ್ಲ ಸಾಧನೆ ಕೇವಲ ನಮ್ಮಿಂದಲೇ ಆಯಿತು ಎಂದು ಹೇಳಲ್ಲ. ಪಂಚಾಯತ್ ಮಟ್ಟದಲ್ಲಿ ಕೆಲಸ ಮಾಡುವ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿ, ನೌಕರರ ಸಹಕಾರ ಮತ್ತು ಬೆಂಬಲದಿಂದ ಈ ಸಾಧನೆ ಸಾಕಾರಗೊಂಡಿದೆ. 2018ರ ಮಾರ್ಚ್ ವೇಳೆ ರಾಜ್ಯವನ್ನು ಸಂಪೂರ್ಣ ಬಯಲು ಬಹಿರ್ದೆಸೆಮುಕ್ತ ಮಾಡುವ ಸಂಕಲ್ಪ ಹೊಂದಿದ್ದೇವೆ ಎಂದರು.
ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ “ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿ, ಅದರ ಬಳಕೆ ಮಾಡಿ, ಅವುಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಇದನ್ನು ಮಾಡ ಲಿಕ್ಕೆ ಬಾರದಿರುವವರಿಗೆ ಸ್ವಾತಂತ್ರ್ಯ ಅನು ಭವಿಸುವ ಹಕ್ಕು ಇಲ್ಲ’ ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದರು. ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ಅತ್ಯಂತ ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಆಸಕ್ತಿ ಇಲ್ಲದಿದ್ದರೆ ಗುರಿ ಅಸಾಧ್ಯ
“ಶೌಚಾಲಯಕ್ಕಾಗಿ ಸಮರ’ ಎಂಬ ಸಂಕಲ್ಪದಲ್ಲಿ ಸಾಕಷ್ಟು ಸಾಧನೆ ಆಗಿದೆ. ಅನೇಕ ಜಿಲ್ಲೆಗಳು ಉತ್ತಮ ಪ್ರಗತಿ ಸಾಧಿಸಿವೆ. ಆದರೆ ಇನ್ನೂ ಕೆಲವು ಜಿಲ್ಲೆಗಳು ಹಿಂದೆ ಬಿದ್ದಿವೆ. ಈ ಬಗ್ಗೆ ಪಂಚಾಯತ್‌ಗಳ ಅಧ್ಯಕ್ಷರು ಹಾಗೂ ಅಧಿಕಾರಿಗಳು ಆಸಕ್ತಿ ವಹಿಸದೇ ಹೋದರೆ ಗುರಿ ಸಾಧನೆಗೆ ತೊಂದರೆ ಆಗುತ್ತದೆ.
ಹೀಗಾಗಿ 2018ರ ಗುರಿ ಇಟ್ಟುಕೊಂಡು ದೃಢ ನಿರ್ಧಾರದೊಂದಿಗೆ ಆ ದಿಕ್ಕಿನಲ್ಲಿ ಕೆಲಸ ಮಾಡಬೇಕು. ನಿಮ್ಮ ಜಿಲ್ಲೆ, ತಾಲೂಕು, ಗ್ರಾಮಗಳು ಬಯಲು ಶೌಚ ಮುಕ್ತ ಆದರೆ, ನಿಮಗೇ ಕಿರೀಟ. ಅದರಿಂದ ನಿಮಗೂ ಒಳ್ಳೆಯ ಹೆಸರು ಬರುತ್ತದೆ, ಸರಕಾರಕ್ಕೂ ಒಳ್ಳೆಯ ಹೆಸರು ಬರುತ್ತದೆ. ಮುಖ್ಯವಾಗಿ ಗಾಂಧೀಜಿಯವರ ಸ್ವತ್ಛತೆಯ ಕನಸು ಸಾಕಾರಗೊಳ್ಳುತ್ತದೆ ಎಂದು ಹೇಳಿದರು.
ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಎಚ್.ಕೆ.ಪಾಟೀಲ್, ಸುಲಭ್ ಇಂಟರ್‌ನ್ಯಾಷನಲ್ ಸಂಸ್ಥಾಪಕ ಡಾ| ಬಿಂದೇಶ್ವರ್ ಪಾಠಕ್, ನಗರಾಭಿವೃದ್ಧಿ ಸಚಿವ ಆರ್. ರೋಷನ್ ಬೇಗ್, ಮಾಜಿ ಸಂಸದ ಸಿ. ನಾರಾಯಣಸ್ವಾಮಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ| ಎನ್. ನಾಗಾಂಬಿಕಾದೇವಿ ಮತ್ತಿತರರು ಉಪಸ್ಥಿತರಿದ್ದರು.
ಆರು ಜಿಲ್ಲೆಗಳು ಬಯಲುಶೌಚ ಮುಕ್ತ
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಕೋಲಾರ
ತಾಲೂಕುಗಳು: 51
ಗ್ರಾ.ಪಂ.ಗಳು: 1,937
ಗ್ರಾಮಗಳು: 10,340
ಬಯಲು ಶೌಚದಿಂದ ಮುಕ್ತಿ ಪಡೆದ ಜನ: 1.57 ಕೋಟಿ ಜನಸಂಖ್ಯೆ.
ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ
ಯೋಜನೆಗಳ ಅನುಷ್ಠಾನ ಮತ್ತು ಪರಿಣಾಮಕಾರಿ ಆಡಳಿತ ನಿರ್ವಹಣೆಯಲ್ಲಿ ಉತ್ತಮ ಸಾಧನೆ ಮಾಡಿದ ರಾಜ್ಯದ 176 ಗ್ರಾ. ಪಂ.ಗಳಿಗೆ “ಗಾಂಧಿ ಗ್ರಾಮ ಪುರಸ್ಕಾರ’ ಪ್ರದಾನ ಮಾಡಲಾಯಿತು. ಪುರಸ್ಕಾರಕ್ಕೆ ಆಯ್ಕೆಯಾದ ಗ್ರಾ.ಪಂ.ಗಳ ಪಿಡಿಓ ಹಾಗೂ ಅಧ್ಯಕ್ಷರಿಗೆ ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್, ಸುಲಭ್ ಇಂಟರ್‌ನ್ಯಾಷನಲ್ ಸಂಸ್ಥಾಪಕ ಡಾ| ಬಿಂದೇಶ್ವರ್ ಪಾಠಕ್, ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ಪ್ರಶಸ್ತಿ ನೀಡಿ ಗೌರವಿಸಿದರು. ಇದಕ್ಕೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ ಪಂಚಾಯತ್‌ಗಳಿಗೆ ಅಭಿನಂದನೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.