3 ಲಕ್ಷ ರೈಲ್ವೆ ಖಾಲಿ ಹುದ್ದೆ ಭರ್ತಿಗೆ ಕೇಂದ್ರ ವಿಳಂಬ
Team Udayavani, Oct 3, 2017, 9:12 AM IST
ಕಲಬುರಗಿ: “ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ 3 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಸರ್ಕಾರ ದುರುದ್ದೇಶದಿಂದಲೇ ವಿಳಂಬ ಧೋರಣೆ ತೋರುತ್ತಿದೆ’ ಎಂದು ಲೋಕಸಭೆ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಖಾಲಿ ಇರುವ ಎಲ್ಲ ಹುದ್ದೆಗಳನ್ನು ನೇಮಕ ಮಾಡಿಕೊಂಡರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ರೋಸ್ಟರ್ ಪ್ರಕಾರ ಮೀಸಲಾತಿ ನೀಡಬೇಕಾಗಿದೆ. ಇದರಿಂದ
ಸಬೂಬು ಹೇಳಿ ನೇಮಕಕ್ಕೆ ಹಿಂದೇಟು ಹಾಕಲಾಗುತ್ತಿದೆ’ ಎಂದರು. “ನೇಮಕ ಮಾಡಿಕೊಳ್ಳದಿರುವ ಮೂಲಕ ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರ ನೌಕರಿ ಹಕ್ಕನ್ನು ಸಹ ಕೇಂದ್ರ ಸರ್ಕಾರ ಕಿತ್ತುಕೊಳ್ಳುತ್ತಿದೆ. ರೈಲ್ವೆ ಇಲಾಖೆಯಲ್ಲಿ 3 ಲಕ್ಷದಷ್ಟು ಹುದ್ದೆಗಳು ಖಾಲಿ ಇದ್ದರೂ ತುಂಬದಿರುವುದನ್ನು ನೋಡಿದರೆ ಇದರ ಹಿಂದೆ ವ್ಯವಸ್ಥಿತ ಹುನ್ನಾರವೇ ಅಡಗಿರುವುದು ಕಂಡು ಬರುತ್ತದೆ. ಈಗಲಾದರೂ ಕೇಂದ್ರ ಸರ್ಕಾರ ನೇಮಕ ಪ್ರಕ್ರಿಯೆ ಆರಂಭಿಸಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿಕೊಡಬೇಕು’ ಎಂದರು.
“ಶಾಸಕರಾದ ಡಾ.ಎ.ಬಿ. ಮಾಲಕರೆಡ್ಡಿ ಮತ್ತು ಬಾಬುರಾವ್ ಚಿಂಚನಸೂರ ಕಾಂಗ್ರೆಸ್ ತೊರೆಯುತ್ತಾರೆ ಎಂಬುದು ವದಂತಿ. ಯಾವುದೇ ಕಾರಣಕ್ಕೂ ಅವರು ಪಕ್ಷ ತೊರೆಯುವುದಿಲ್ಲ. ಮಂತ್ರಿ ಸ್ಥಾನ ಸಿಗದಿರುವುದಕ್ಕೆ ಅವರು ಅಸಮಾಧಾನಗೊಂಡಿರುವುದು
ನಿಜ. ಅದರೆ, ಪಕ್ಷ ಬಿಡುವ ಕೆಲಸ ಮಾಡಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.