ಗಾಂಧೀಜಿ-ಶಾಸ್ತ್ರೀ ತತ್ವ ಅಭಿವೃದ್ಧಿಗೆ ಪೂರಕ

Team Udayavani, Oct 3, 2017, 10:12 AM IST

gul-3.jpg

ಕಲಬುರಗಿ: ರಾಷ್ಟ್ರಪೀತ ಮಹಾತ್ಮಾಗಾಂಧೀಜಿ ಶಾಂತಿ, ಅಹಿಂಸಾ ಮಾರ್ಗ ಹಾಗೂ ಲಾಲ ಬಹಾದ್ದೂರ ಶಾಸ್ತ್ರೀ ಅವರ ಪ್ರಮಾಣೀಕತೆ, ಸರಳತೆ ಗುಣಗಳನ್ನು ನಾವು ಜೀವನುದ್ದಕ್ಕೂ ಅಳವಡಿಸಿಕೊಂಡರೆ ಯಶಸ್ಸು ಹೊಂದುವುದು ನಿಶ್ಚಿತ ಎಂದು ವೈದ್ಯಕೀಯ ಶಿಕ್ಷಣ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.

ನರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಹಾಗೂ ಭಾರತ ಸೇವಾ ದಳದ ಸಂಯುಕ್ತ ಆಶ್ರಯದಲ್ಲಿ ಗಾಂಧೀಜಿ ಜಯಂತಿ ಅಂಗವಾಗಿ ನಗರದ ಸರ್ವಧರ್ಮ ಪ್ರಾರ್ಥನೆ,
ಸದ್ಭಾವನಾ ಗೀತ ಗಾಯನ ಹಾಗೂ ಕರ್ನಾಟಕದಲ್ಲಿ ಗಾಂಧೀಜಿ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಸತ್ಯ, ಅಹಿಂಸೆ, ಜನಾಂದೋಲನ ಚಳವಳಿ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟು, ಇಡೀ ಮಾನವಕುಲಕ್ಕೆ ಶಾಂತಿ ಸಂದೇಶ ಸಾರಿದ ರಾಷ್ಟ್ರಪಿತ ಮಹಾತ್ಮ ಗಾಂಧಿಧೀಜಿ ಮಹಾನ ಪುರುಷರಾಗಿದ್ದಾರೆ. ಇಡೀ ದೇಶ ಶ್ರದ್ಧಾ ಭಕ್ತಿಯಿಂದ ಮಹಾತ್ಮ ಗಾಂಧೀಜಿ ಮತ್ತು ಲಾಲ್‌ ಬಹಾದ್ದೂರ ಶಾಸ್ತ್ರೀ ಅವರ ಜಯಂತಿ ಆಚರಿಸುತ್ತಿದೆ. ಇಡೀ
ವಿಶ್ವದಲ್ಲಿ ಅಹಿಂಸೆ ಮೂಲಕ ಸ್ವಾತಂತ್ರ್ಯ ಪಡೆದ ದೇಶ ಭಾರತವಾಗಿದ್ದು, ಗಾಂಧೀಜಿ ಅವರ ಅಹಿಂಸಾ ತತ್ವವೇ ಇದಕ್ಕೆ ಮೂಲ ಕಾರಣವಾಗಿದೆ. ಸ್ವಾತಂತ್ರ್ಯ ಸಮಯದಲ್ಲಿ ಅವರ ಮಾತಿಗೆ ಇಡೀ ದೇಶ ಜನರು ಬೆಂಬಲ ನೀಡಿ ಅವರ ಮಾರ್ಗದರ್ಶನದಲ್ಲಿ ನಡೆದಿದ್ದನ್ನು ಸಚಿವರು ಸ್ಮರಿಸಿದರಲ್ಲದೇ ಲಾಲ ಬಹಾದ್ದೂರ ಶಾಸ್ತ್ರೀ, ಮಹಾತ್ಮ ಗಾಂಧೀಜಿ ಸೇರಿದಂತೆ ಮಹಾನ್‌ ಪುರುಷರ ಜೀವನವನ್ನು ಇಂದಿನ ಯುವ ಪೀಳಿಗೆ ಅಧ್ಯಯನ ಮಾಡುವುದರೊಂದಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಸಾನಿಧ್ಯ ವಹಿಸಿದ್ದ ಶ್ರೀಶೈಲಂ ಸಾರಂಗಮಠದ ಡಾ|ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು, ಮಹ್ಮದ್‌ ಜಾವೀದ್‌ ಆಲಂ ಖಾಸ್ಮಿ, ಪೂಜ್ಯ ಸಂಗಾನಂದ ಭಂತೇಜಿ ಹಾಗೂ ಸೆಂಟ್‌ ಮೇರಿಚರ್ಚ್‌ ಫಾದರ್‌ ಸ್ಟ್ಯಾನಿ ಅವರು ಧಾರ್ಮಿಕ ಪಠಣ ಮಾಡಿದರು.

ಇದೇ ಸಂದರ್ಭದಲ್ಲಿ ಗಾಂಧಿಜಯಂತಿ ನಿಮಿತ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತಂದ ಜನಪದ, ಮಾರ್ಚ್‌ ಆಫ್‌ ಕರ್ನಾಟಕ ವಿಶೇಷ ಸಂಚಿಕೆ ಸಹ ಬಿಡುಗಡೆಗೊಳಿಸಿದರು.
 
ಕಲಾವಿದ ಸಿದ್ರಾಮಪ್ಪ ಪೊಲೀಸ್‌ಪಾಟೀಲ, ನಿವೃತ್ತ ವಾರ್ತಾಧಿಕಾರಿ ಜಿ. ಚಂದ್ರಕಾಂತ ಹಾಗೂ ಭಾರತ ಸೇವಾದಳದಿಂದ ಸರ್ವಧರ್ಮ ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮ ಕೊನೆಯಲ್ಲಿ ರಘುಪತಿ ರಾಘವಗಾಂಧಿ ಭಜನೆ ಹಾಗೂ ರಾಷ್ಟ್ರಗೀತೆಯೊಂದಿಗೆ ಕೊನೆಗೊಂಡಿತು. ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರು ಕರ್ನಾಟಕದಲ್ಲಿ ಗಾಂಧೀಜಿ ಕುರಿತ ಅಪೂರ್ವ ಛಾಯಚಿತ್ರ ಪ್ರದರ್ಶನ ಉದ್ಘಾಟಿಸಿದರು.

ಮಹಾಪೌರ ಶರಣ ಕುಮಾರ ಮೋದಿ, ಆಯುಕ್ತ ಪಿ. ಸುನೀಲ ಕುಮಾರ, ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಶಶೀಲ ಜಿ.ನಮೋಶಿ, ಸಹಾಯಕ ಆಯುಕ್ತ ರಾಚಪ್ಪ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಭಾರತ ಸೇವಾದಳದ ಕಾರ್ಯದರ್ಶಿ ಶಿವಲಿಂಗಪ್ಪ ಗೌಳಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಅನೇಕ ಗಣ್ಯರು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ತಹಶೀಲ್ದಾರ ದಯಾನಂದ ಪಾಟೀಲ ನಿರೂಪಿಸಿದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.