ಗಾಂಧೀಜಿ ಆದರ್ಶ ಪಾಲನೆಯಿಂದ ಸುಖೀ ಸಮಾಜ: ಶಾಸಕ ಲೋಬೋ 


Team Udayavani, Oct 3, 2017, 10:19 AM IST

3-Mng–2.jpg

ಪುರಭವನ : ಮಹಾತ್ಮಾ ಗಾಂಧೀಜಿಯವರ ಚಿಂತನೆ ಹಾಗೂ ಆದರ್ಶಗಳ ಪಾಲನೆಯಿಂದ ಶಾಂತಿ, ಸಾಮರಸ್ಯದಿಂದೊಡಗೂಡಿದ ಸುಖೀ ಸಮಾಜದ ನಿರ್ಮಾಣ ಸಾಧ್ಯ ಎಂದು ಶಾಸಕ ಜೆ.ಆರ್‌. ಲೋಬೋ ಅವರು ಹೇಳಿದರು.

ಜಿಲ್ಲಾಡಳಿತ ಹಾಗೂ ಭಾರತ ಸೇವಾದಳ ಆಶ್ರಯದಲ್ಲಿ ಪುರಭವನದ ಬಳಿಯ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಸೋಮವಾರ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿಯವರ ಚಿಂತನೆಗಳು, ಆದರ್ಶಗಳು ಸರ್ವಮಾನ್ಯ ಮತ್ತು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ. ತ್ಯಾಗ, ನಿಸ್ವಾರ್ಥ ಹೋರಾಟ ಮತ್ತು ಅಹಿಂಸೆಯ ಮೂಲಕ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟಿರುವ ರಾಷ್ಟ್ರಪಿತ ಗಾಂಧೀಜಿಯವರು ಸದಾ ವಂದ್ಯರು ಎಂದು ಹೇಳಿದರು.

ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ಸ್ವಾಗತಿಸಿ, ಗಾಂಧೀಜಿಯವರ ಸ್ವಚ್ಚ ಭಾರತ, ಸ್ವಚ್ಚ ಮನಸ್ಸು ಹಾಗೂ ಶ್ರಮ ಜೀವನದ ಪರಿಕಲ್ಪನೆಗಳನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕಾಗಿದೆ ಎಂದರು. ಜಿಲ್ಲಾಡಳಿತದೊಂದಿಗೆ ಸೇರಿ ಭಾರತ ಸೇವಾ ದಳವು ಪ್ರತಿ ವರ್ಷ ಗಾಂಧಿ ಜಯಂತಿಯನ್ನು ಆಚರಿಸುತ್ತಿದೆ ಹಾಗೂ ರಾಷ್ಟ್ರಭಕ್ತಿಯನ್ನು ಉದ್ದೀಪನಗೊಳಿಸುತ್ತದೆ ಎಂದರು. ಪೌರಕಾರ್ಮಿಕರಾಗಿ ನಿವೃತ್ತರಾದ ರುದ್ರಪ್ಪ ಅವರನ್ನು ಸಮ್ಮಾನಿಸಲಾಯಿತು.

ಅಪರ ಜಿಲ್ಲಾಧಿಕಾರಿ ಕುಮಾರ್‌, ಮಂಗಳೂರು ತಹಶೀಲ್ದಾರ್‌ ಗುರುಪ್ರಸಾದ್‌, ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಬಶೀರ್‌ ಬೈಕಂಪಾಡಿ, ಕೇಂದ್ರ ಸಮಿತಿ ಸದಸ್ಯ ಫ್ರಾನ್ಸಿಸ್‌, ತಾಲೂಕು ಅಧ್ಯಕ್ಷ ಪ್ರಭಾಕರ ಶ್ರೀಯಾನ್‌, ಮಂಜೇಗೌಡ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖಾಧಿಕಾರಿ ಖಾದರ್‌ ಷಾ ಮತ್ತಿತರರು ಉಪಸ್ಥಿತರಿದ್ದರು.

ಗಾಂಧಿ ಜಯಂತಿ ಪ್ರಯುಕ್ತ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹೊರತಂದ ‘ಜನಪದ’ ವಿಶೇಷಾಂಕವನ್ನು ಶಾಸಕ ಲೋಬೋ ಬಿಡುಗಡೆಗೊಳಿಸಿದರು.

ಗಾಂಧಿಜಯಂತಿ ಅಂಗವಾಗಿ ಪುರಭವನದಲ್ಲಿ ಭಜನೆ ಹಾಗೂ ಗಾಂಧೀಜಿಯವರಿಗೆ ಪ್ರಿಯವಾದ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.