ಬಯಲು ಶೌಚಮುಕ್ತ ಜಿಲ್ಲೆ ನಿರ್ಮಾಣ ಗುರಿ: ಸಚಿವ ಖಂಡ್ರೆ
Team Udayavani, Oct 3, 2017, 10:46 AM IST
ಬೀದರ: ಬೀದರನ್ನು ಬಯಲು ಶೌಚ ಮುಕ್ತ ಜಿಲ್ಲೆಯನ್ನಾಗಿಸಬೇಕು. ನಿಟ್ಟಿನಲ್ಲಿ ಸ್ವತ್ಛತಾ ಅಭಿಯಾನವು ಆಂದೋಲನ ಸ್ವರೂಪ ಪಡೆಯಬೇಕು. ಜಿಲ್ಲಾದ್ಯಂತ ಪ್ರತಿಯೊಂದು ಮನೆ ಶೌಚಾಲಯ ಹೊಂದುವ ಕಾರ್ಯ ಯುದೊಪಾದಿ ರೀತಿಯಲ್ಲಿ ನಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕರೆ ನೀಡಿದರು.
ಭಾಲ್ಕಿ ತಾಲೂಕಿನ ಅಟ್ಟರ್ಗಾ ಗ್ರಾಮದಲ್ಲಿ ನಡೆದ “ನಮ್ಮ ನಡಿಗೆ ಸ್ವತ್ಛ ಗ್ರಾಮದ ಕಡೆಗೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಟ್ಟರ್ಗಾ ಗ್ರಾಮ ಸ್ವಾತಂತ್ರ್ಯ ಸೇನಾನಿಗಳ ನಾಡಾಗಿದೆ.
ಸ್ವಾತಂತ್ರ್ಯೋತ್ಸವ ಚಳವಳಿಯಲ್ಲಿ ಈ ಊರಿನ ಕೊಡುಗೆ ಹಿರಿದು ಎನ್ನವುದು ಇಡೀ ಜಿಲ್ಲೆಗೆ ಹೆಮ್ಮಯ ಸಂಗತಿ. ಗ್ರಾಮದ ಪ್ರತಿಯೊಂದು ಕುಟುಂಬಗಳು ಶೌಚಾಲಯ ಕಟ್ಟಿಸಿಕೊಂಡು ಸ್ವತ್ಛತೆಗೆ ಒತ್ತು ನೀಡಿದ್ದು, ಬಯಲು ಬಹಿರ್ದೆಸೆ ಮುಕ್ತ ಗ್ರಾಮ ಎಂದು ಹೆಸರಾಗುತ್ತಿರುವುದು ನಿಜಕ್ಕೂ ಶ್ಲಾಘನೀಯ ಸಂಗತಿ ಎಂದರು.
ಶೌಚಾಲಯ ಹೊಂದುವುದು ಸ್ವಾಭಿಮಾನದ, ಗೌರವದ ಸಂಕೇತವಾಗಿದೆ ಎಂಬುದನ್ನು ಪ್ರತಿಯೊಬ್ಬರು ಅರಿಯಬೇಕು. ಬಯಲಿಗೆ ನಡೆಯುವ ಅಂಧಶ್ರದ್ಧೆಯಿಂದ ಹೊರಬರಬೇಕು. ನಾವು ಇಂದಿನಿಂದಲೇ ಶೌಚಾಲಯ ಕಟ್ಟಿಸಿಕೊಳ್ಳಲು ಮುಂದಾಗುತ್ತೇವೆ ಎನ್ನುವ ಸಂಕಲ್ಪ ಹೊಂದಬೇಕು.
ನಿರ್ಮಲ ಭಾರತ ನಿರ್ಮಲ ಬೀದರ ಅಭಿಯಾನವು ಜಿಲ್ಲೆಯಾದ್ಯಂತ ಯಶಸ್ವಿಯಾಗಲು ಅಧಿಕಾರಿಗಳೊಂದಿಗೆ ಜನತೆ ಕೈಜೋಡಿಸಬೇಕು ಎಂದು ಹೇಳಿದರು.
ಗ್ರಾಮಗಳು ಅಭಿವೃದ್ಧಿಯಾಗದ ಹೊರತು ದೇಶ ಅಭಿವೃದ್ಧಿಯಾಗುವುದಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಗ್ರಾಮಾಭಿವೃದ್ಧಿಗೆ, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಇಂದು ಮಹಿಳೆಯರೆ ಅಧ್ಯಕ್ಷರಾಗಿ, ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂಬುದನ್ನು ತಿಳಿಸುತ್ತದೆ ಎಂದರು.
ಭಾಲ್ಕಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ರಸ್ತೆ ಸುಧಾರಣೆಗೆ ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ ಜಿಲ್ಲೆಯ ಜನರು ಪ್ರಸ್ತಾವನೆ ಸಲ್ಲಿಸಿದಲ್ಲಿ ರಸ್ತೆಗಳ ದುರಸ್ತಿ, ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾ ಗುವುದು. ಕೃಷಿ ಹೊಂಡ ನಿರ್ಮಿಸಲು ಕೋರಿ ಅರ್ಜಿ ಸಲ್ಲಿಸಿ ಕೃಷಿಭಾಗ್ಯ ಯೋಜನೆಯ ಸದುಪಯೋಗ ಪಡೆಯಬೇಕು ಎಂದು ಸಚಿವರು ಹೇಳಿದರು.
ಜಿಪಂ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಜಿಪಂ ಉಪಾಧ್ಯಕ್ಷ ಡಾ| ಪ್ರಕಾಶ ಪಾಟೀಲ, ತಾಪಂ ಅಧ್ಯಕ್ಷೆ ರೇಖಾ ಪಾಟೀಲ, ಉಪಾಧ್ಯಕ್ಷ ಮಾರುತಿರಾವ್, ಅಟ್ಟರ್ಗಾ ಗ್ರಾಪಂ ಅಧ್ಯಕ್ಷೆ ಗಂಗೂಬಾಯಿ ದಿಗಂಬರ್, ಉಪಾಧ್ಯಕ್ಷೆ ಪ್ರಭಾವತಿ, ಜಿಪಂ ಸದಸ್ಯ ವಿದ್ಯಾಸಾಗರ ಶಿಂಧೆ, ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ, ಜಿಪಂ ಸಿಇಒ ಡಾ| ಸೆಲ್ವಮಣಿ ಆರ್., ಸ್ವತ್ಛ ಭಾರತ ಅಭಿಯಾನದ ನೋಡೆಲ್ ಅಧಿಕಾರಿ ಗೌತಮ ಅರಳಿ, ಪಿಡಿಒ ಬಲಭೀಮ ಪವಾರ ಸೇರಿದಂತೆ ಗ್ರಾಪಂ ಸದಸ್ಯರು, ಅಧಿಕಾರಿಗಳು, ಗುಂಜರರ್ಗಾ ಹಾಗೂ ಮಾಣಿಕೇಶ್ವರ ಗ್ರಾಮಸ್ಥರು ಇದ್ದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಗ್ರಾಮ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಸ್ವತ್ಛ ಭಾರತ ಮಿಷನ್ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.