ರಸ್ತೆ ಸಂಪರ್ಕ ಕಡಿತ: ಜನಜೀವನ ಅಸ್ತವ್ಯಸ್ತ
Team Udayavani, Oct 3, 2017, 3:16 PM IST
ಯಾದಗಿರಿ: ತಾಲೂಕಿನಾದ್ಯಂತ ರವಿವಾರ ಮಧ್ಯರಾತ್ರಿ ಸುರಿದ ಮಳೆಯಿಂದ ಯರಗೋಳ ಹಾಗೂ ತಾನು ನಾಯಕ
ತಾಂಡಾದ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯವಸ್ತಗೊಂಡಿದೆ. ಭಾರೀ ಸುರಿದ ಮಳೆಯಿಂದ ಯರಗೋಳ ಗ್ರಾಮದಿಂದ ತಾನು ನಾಯಕ ತಾಂಡಾಕ್ಕೆ ಹೋಗುವ ರಸ್ತೆ ಮೇಲೆ ಹಳ್ಳದ ನೀರು ಹರಿಯುತ್ತಿದ್ದು, ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ವಿದ್ಯಾರ್ಥಿಗಳು, ಸಾರ್ವಜನಿಕರು, ವಾಹನ ಸವಾರರು ಸಂಚಾರಕ್ಕೆ ಪರದಾಡಿದ ಘಟನೆ ಕೂಡ ನಡೆದಿದೆ. ಈ ರಸ್ತೆ ತಗ್ಗು ಪ್ರದೇಶದಲ್ಲಿ ಇರುವುದರಿಂದ ಹಳ್ಳದ ನೀರು ಹರಿದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇನ್ನೂ ಕೆಲವರು ವಿದ್ಯಾರ್ಥಿಗಳು, ಜನರು ನೀರನ್ನು ದಾಟಿಕೊಂಡು ಹೋಗಿದ್ದಾರೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಮಹಾತ್ಮಾ ಗಾಂಧೀಜಿ ಜಯಂತಿ ಹಿನ್ನೆಲೆಯಲ್ಲಿ ತಾಂಡಾದ ವಿದ್ಯಾರ್ಥಿಗಳು ಹಳ್ಳದ ನೀರು ದಾಟಿಕೊಂಡು ಶಾಲೆಗೆ
ಹೋಗಿದ್ದಾರೆ. ನೀರು ಹರಿಯುವ ಹಳ್ಳ ದಾಟಿ ಜನರು ಓಡಾಡುತ್ತಿದ್ದು, ಅನಾಹುತ ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ರಸ್ತೆಯನ್ನು ಮೇಲ್ದಜೇಗೇರಿಸಿ, ಸೇತುವೆ ನಿರ್ಮಿಸಿ ಹಳ್ಳದ ನೀರು ಸಾರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕೆಂದು ತಾಂಡಾದ ನಿವಾಸಿ ಶ್ರೀನಿವಾಸ ನಾಯಕ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.