ಖಾಸಗಿ ವೈದ್ಯರಿಗೆ ಜೈಲು ಭೀತಿ ದೂರ?

Team Udayavani, Oct 4, 2017, 7:40 AM IST

doctor.jpg

ಬೆಂಗಳೂರು: “ಜೈಲು ಶಿಕ್ಷೆ ಮೇಲಿನ ನಿಯಂತ್ರಣ’ ಕಳೆದುಕೊಂಡಿರುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ(ತಿದ್ದುಪಡಿ) ವಿಧೇಯಕ ಸಿದಟಛಿವಾಗಿದೆ. ವಿಧೇಯಕದಲ್ಲಿನ ಕೆಲವು ಅಂಶಗಳ ಬಗ್ಗೆ ಜೆಡಿಎಸ್‌ ಮತ್ತು ಬಿಜೆಪಿ ಸದಸ್ಯರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ಶಾಸಕ ಕೆ.ಎನ್‌. ರಾಜಣ್ಣ ನೇತೃತ್ವದ ಜಂಟಿ ಸದನ ಸಮಿತಿ ಮಂಗಳವಾರ ವಿಧಾನಸಭಾ ಸ್ಪೀಕರ್‌ ಕೆ.ಬಿ. ಕೋಳಿವಾಡ ಅವರಿಗೆ ವರದಿ ನೀಡಿದೆ. ಈ ವಿಧೇಯಕದಲ್ಲಿದ್ದ ವಿವಾದಿತ ತಪ್ಪಿತಸ್ಥರನ್ನು ಜೈಲಿಗೆ ಹಾಕುವ ಅಂಶವನ್ನು ತೆಗೆದು ಹಾಕಿದೆ ಎಂದು ಹೇಳಲಾಗಿದೆ.

ಈ ಮಧ್ಯೆ, ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಮಿತಿಯಲ್ಲಿನ ಬಿಜೆಪಿ ಸದಸ್ಯರು, ಕೇಂದ್ರ ಸರ್ಕಾರದ 2010ರ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದ ಆಧಾರದಲ್ಲಿ ವಿಧೇಯಕ ರೂಪಿಸಬೇಕು ಎಂದು ಆಗ್ರಹಿಸಿದ್ದಾರೆ. ಜತೆಗೆ, ಈ
ಕಾನೂನಿನ ಅಡಿಯಲ್ಲಿ ಸರ್ಕಾರಿ ಆಸ್ಪತ್ರೆಗಳನ್ನೂ ತರಬೇಕು ಎಂದು ಸಮಿತಿಯಲ್ಲಿದ್ದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ, ಕೆ.ಎಸ್‌.ಈಶ್ವರಪ್ಪ, ಕ್ಯಾ.ಗಣೇಶ್‌ ಕಾರ್ಣಿಕ್‌, ಡಾ.ಅಶ್ವಥ್‌ ನಾರಾಯಣ್‌ ಒತ್ತಾಯಿಸಿದ್ದಾರೆ.

ಜಂಟಿ ಸದನ ಸಮಿತಿ ರಚಿಸಿದ್ದ ಸ್ಪೀಕರ್‌: ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ವಿಧೇಯಕ 2007 ಕ್ಕೆ ಸೂಕ್ತ ತಿದ್ದುಪಡಿ ತಂದು ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಲು ಸರ್ಕಾರ ಮುಂದಾಗಿತ್ತು. ಆದರೆ, ಅದಕ್ಕೆ ವಿಧಾನ ಸಭೆಯಲ್ಲಿ
ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ, ಕೆ.ಎನ್‌ ರಾಜಣ್ಣ ನೇತೃತ್ವದಲ್ಲಿ ಜಂಟಿ ಸದನ ಸಮಿತಿ ರಚಸಿ ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದರು. ಅದರಂತೆ ಸಮಿತಿ ಹಲವಾರು ಬಾರಿ ಸಭೆ ಸೇರಿ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳ ಜೊತೆಯೂ ಸಭೆ ನಡೆಸಿ ಅಂತಿಮ ವರದಿ ಸಲ್ಲಿಸಿದ್ದಾರೆ.

ಪ್ರಮುಖವಾಗಿ ಖಾಸಗಿ ವೈದ್ಯಕೀಯ ಸಂಸ್ಥೆಗಳು ತಪ್ಪು ಮಾಡಿದ್ದರೆ, ಆರು ತಿಂಗಳಿಂದ ಮೂರು ವರ್ಷ ಶಿಕ್ಷೆ ವಿಧಿಸುವ ಅಂಶವನ್ನು ವಿಧೇಯದಿಂದ ಕೈ ಬಿಡಲಾಗಿದೆ. ನಕಲಿ ವೈದ್ಯರ ಹಾವಳಿ ತಡೆಯಲು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳ ನೋಂದಣಿಗೆ ಅಧಿಕಾರಿಗಳು ವಿನಾಕಾರಣ ವಿಳಂಬ ಮಾಡುತ್ತಾರೆ ಎಂಬ ಖಾಸಗಿ ಆಸ್ಪತ್ರೆಗಳ ಆರೋಪಕ್ಕೆ ಸ್ಪಂದಿಸಿರುವ ಸಮಿತಿ, ಸರ್ಕಾರಿ ಅಧಿಕಾರಿಗಳು ಅರ್ಜಿ ಸಲ್ಲಿಸಿ 90 ದಿನ ಕಳೆದರೂ ನೋಂದಣಿ ಮಾಡದಿದ್ದರೆ, ಅಧಿಕೃತ ನೋಂದಣಿಯಾಗಿದೆ ಎಂದು ಪರಿಗಣಿಸಲು
ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಪ್ರತಿ ಜಿಲ್ಲೆಯಲ್ಲಿಯೂ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪರಿಹಾರ ಸಮಿತಿ ರಚನೆ ಮಾಡಲು ಸೂಚಿಸಲಾಗಿದ್ದು, ಸಮಿತಿಯಲ್ಲಿ
ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ, ಖಾಸಗಿ ವೈದ್ಯಕೀಯ ಸಂಸ್ಥೆಯ ಪ್ರತಿನಿಧಿಗಳು, ಸಾರ್ವಜನಿಕರೂ ಸದಸ್ಯರಾಗಿರುತ್ತಾರೆ. ಪ್ರತಿಯೊಂದು ಆಸ್ಪತ್ರೆಯಲ್ಲಿಯೂ ದೊರೆಯುವ ಸವಲತ್ತುಗಳು ಮತ್ತು ಪ್ರತಿ ಚಿಕಿತ್ಸೆ ಹಾಗೂ ಶಸOಉ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶನ ಮಾಡಬೇಕು. ಒಂದು ವೇಳೆ ರೋಗಿಯು ಮೃತ ಪಟ್ಟರೆ, ಬಾಕಿ ಹಣ ಪಡೆಯಲು ಪೀಡಿಸದೇ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಬೇಕು.

ಒಂದು ವೇಳೆ, ಆಸ್ಪತ್ರೆಯವರು ನಿಗದಿ ಪಡಿಸಿರುವ ದರಕ್ಕಿಂತ ಹೆಚ್ಚಿನ ಹಣ ಪಡೆದರೆ, ಬಾಕಿ ಪಾವತಿಸುವರೆಗೂ ಶವ ನೀಡಲು ನಿರಾಕರಿಸಿದರೆ, ಸಂಬಂಧ ಪಟ್ಟ ಜಿಲ್ಲಾಧಿಕಾರಿ ನೇತೃತ್ವದ ಸಮಿತಿಗೆ ದೂರು ನೀಡಲು ಅವಕಾಶ
ಕಲ್ಪಿಸಲಾಗಿದೆ. ವೈದ್ಯರೂ ಕೂಡ ತಮ್ಮ ಮೇಲೆ ಅನಗತ್ಯ ಕಿರುಕುಳವಾಗುತ್ತಿದ್ದರೆ, ಅವರಿಗೂ ದೂರು ನೀಡಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ. ರಾಜಣ್ಣ ನೇತೃತ್ವದ ಸಮಿತಿಯಲ್ಲಿ ವಿಧೇಯಕ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ತರುವಂತೆ ಬಿಜೆಪಿ ಹಾಗೂ ಜೆಡಿಎಸ್‌ ಸದಸ್ಯರು ಆಗ್ರಹಿಸಿದ್ದರು.

ಆದರೆ, ಸರ್ಕಾರಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಹಲವಾರು ಕಾನೂನುಗಳಿರುವುದರಿಂದ ಈ ವಿಧೇಯಕದ ವ್ಯಾಪ್ತಿಯಲ್ಲಿ ತರಲು ಸಮಿತಿ ನಿರಾಕರಿಸಿದೆ ಎಂದು ತಿಳಿದು ಬಂದಿದೆ. ಈ ತಿದ್ದುಪಡಿ ವಿಧೇಯಕವನ್ನು ನವೆಂಬರ್‌ನಲ್ಲಿ ನಡೆಯುವ ಬೆಳಗಾವಿ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.