ಡಿ.3ರಿಂದ ರಾಜ್ಯಾದ್ಯಂತ ಅಭಯ ಗೋ ಯಾತ್ರೆ
Team Udayavani, Oct 4, 2017, 7:05 AM IST
ಹುಬ್ಬಳ್ಳಿ: ಗೋ ರಕ್ಷಣೆ ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡಿಸೆಂಬರ್ 3ರಿಂದ ರಾಜ್ಯಾದ್ಯಂತ ಅಭಯ ಗೋ ಯಾತ್ರೆ ನಡೆಯಲಿದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ತಿಳಿಸಿದರು. ಇಲ್ಲಿನ
ಹವ್ಯಕ ಭವನದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿ, ಡಿ.3ರಂದು ಕಲಬುರಗಿಯಲ್ಲಿ ಯಾತ್ರೆಗೆ ಚಾಲನೆ ನೀಡಲಾಗುವುದು. ಸುಮಾರು 45 ದಿನಗಳ ಕಾಲ ಯಾತ್ರೆ ನಡೆಯಲಿದ್ದು, ಪ್ರತಿ ಜಿಲ್ಲಾ ಕೇಂದ್ರಗಳಿಗೂ ಭೇಟಿ ನೀಡಲಿದೆ.
ಜನವರಿ 15ರಂದು ಬೆಂಗಳೂರಿನಲ್ಲಿ ಮುಕ್ತಾಯ ಗೊಳ್ಳಲಿದೆ ಎಂದರು. ಗೋವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಈಗಾಗಲೇ ಗೋ ಅಭಯಾಕ್ಷರ ಆರಂಭವಾಗಿದೆ. ರಾಜ್ಯದಲ್ಲಿ ಸುಮಾರು 5 ಕೋಟಿ ಜನರಿಂದ ಅರ್ಜಿ ಸಂಗ್ರಹಿಸುವ ಅಭಿಯಾನ ಇದು. ಪ್ರತಿ ಗ್ರಾಮದಿಂದಲೂ ಜನರು ತಮ್ಮ ಅಭಿಪ್ರಾಯವನ್ನು ಅರ್ಜಿ ಮೂಲಕ ನೀಡಬೇಕು. ಇದಕ್ಕಾಗಿ ವ್ಯವಸ್ಥಿತ ಕಾರ್ಯ ನಡೆಯುತ್ತಿದೆ. ಹೀಗೆ ಎಲ್ಲಾ ಜಿಲ್ಲೆಗಳಿಂದ ಸಂಗ್ರಹಿಸಿದ ಅರ್ಜಿಗಳನ್ನು ಜನರ ಹಕ್ಕೊತ್ತಾಯದ ಮೇರೆಗೆ ಮುಖ್ಯ ಮಂತ್ರಿಗಳಿಗೆ ಸಲ್ಲಿಸಲಾಗುತ್ತಿದೆ. ಇದರೊಂದಿಗೆ ಪ್ರಧಾನ ಮಂತ್ರಿಗಳಿಗೂ ಒಂದು ಪ್ರತಿ ಸಲ್ಲಿಸಲಾಗುವುದು ಎಂದರು.
ಮುಖ್ಯಮಂತ್ರಿಗಷ್ಟೇ ಅರ್ಜಿ: ಗೋ ಸಂರಕ್ಷಣೆ ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜನರ ಅಭಿಪ್ರಾಯ ಸಂಗ್ರಹಿಸಿ ಸಲ್ಲಿಸುತ್ತಿರುವುದು ಮುಖ್ಯಮಂತ್ರಿಗಳಿಗೆ ವಿನಃ ಸಿದ್ದರಾಮಯ್ಯನವರಿಗಲ್ಲ. ಮುಂದೆ ಇನ್ನೊಬ್ಬರು ಮುಖ್ಯಮಂತ್ರಿಗಳಾಗಿ ಬರಬಹುದು. ಅಧಿಕಾರದಲ್ಲಿ ಯಾರೂ ಶಾಶ್ವತರಲ್ಲ. ಗೋ ಹತ್ಯೆ ನಿಲ್ಲಬೇಕು, ಸಂರಕ್ಷಣೆ ಕಾರ್ಯ ನಡೆಯಬೇಕು ಎಂಬುದು ನಮ್ಮ ಒತ್ತಾಯ ಎಂದು ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.