ವಾಸ್ತವದ ಬಗ್ಗೆಯೇ ನಟ ರೈ ಮಾತನಾಡಿದ್ದಾರೆ
Team Udayavani, Oct 4, 2017, 11:43 AM IST
ಬೆಂಗಳೂರು: ಪ್ರಸಿದ್ಧ ನಟ ಪ್ರಕಾಶ್ ರೈ ಬಗ್ಗೆ ಸಂಸದ ಪ್ರತಾಪ್‌ಸಿಂಹ ಅವರು ನೀಡಿರುವ ಹೇಳಿಕೆಯನ್ನು ಖಂಡಿಸಿ ಡಿವೈಎಫ್ಐ ಮತ್ತು ಎಸ್‌ಎಫ್ಐ ಕಾರ್ಯಕರ್ತರು ಮಂಗಳವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. “ನಮ್ಮ ಕಣ್ಮುಂದೆ ಇಂದು ನಡೆಯುತ್ತಿರುವ ವಾಸ್ತವದ ಬಗ್ಗೆಯೇ ಪ್ರಕಾಶ್ ರೈ ಮಾತನಾಡಿದ್ದಾರೆ.
ಆದರೆ, ಇದನ್ನು ಸಹಿಸಿಕೊಳ್ಳದ ಸಂಸದ ಪ್ರತಾಪ್ ಸಿಂಹ ಅತ್ಯಂತ ಕೀಳಾಗಿ ಹೇಳಿಕೆ ನೀಡಿದ್ದಾರೆ. ರೈ ಅವರ ವೈಯಕ್ತಿಕ ಬದುಕಿನ ಬಗ್ಗೆ ಮಾತನಾಡಿರುವುದು ಸರಿ ಅಲ್ಲ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು. “ಪ್ರಕಾಶ್ ರೈ ಪರ ನಾವಿದ್ದೇವೆ.
ಯಾವುದೇ ಕಾರಣಕ್ಕೂ ದೃತಿಗೆಡುವುದು ಬೇಡ’ ಎಂದು ಬೆಂಬಲ ಸೂಚಿಸಿದ ಪ್ರತಿಭಟನಾಕಾರರು, ಪ್ರತಾಪ್ ಸಿಂಹ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಎಸ್‌ಎಫ್ಐ ಸಂಘಟನೆ ರಾಜ್ಯ ಮುಖಂಡ ಗುರುರಾಜ್, ಡಿವೈಎಫ್ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ, ಜನವಾದಿ ಸಂಘಟನೆ ನಾಯಕಿ ವಿಮಲಾ ಮತ್ತಿತರರು ನೇತೃತ್ವ ವಹಿಸಿದ್ದರು.
ಪ್ರಗತಿಪರರ ಸಾಥ್: ಅದೇ ರೀತಿ, ಮತ್ತೂಂದೆಡೆ ಪ್ರಕಾಶ್ ರೈ ಬೆಂಬಲಿಸಿ ಮತ್ತು ಪ್ರತಾಪ್ ಸಿಂಹ ಅವರ ಹೇಳಿಕೆ ಖಂಡಿಸಿ ಪ್ರಗತಿಪರರು ಹಾಗೂ ಸಮಾನ ಮನಸ್ಕರರು ನಗರದ ಪುರಭವನದ ಎದುರು ಪ್ರತಿಭಟನೆ ನಡೆಸಿದರು. ಅಭಿವ್ಯಕ್ತಿ ಸ್ವಾತಂತ್ರ್ಯ ನಮ್ಮ ಹಕ್ಕು. ಅದಕ್ಕೆ ಧಕ್ಕೆಯಾಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಪ್ರಕಾಶ್ ರೈ ಅವರ ಪರ ನಾವಿದ್ದೇವೆ ಎಂದು ಘೋಷಣೆ ಕೂಗಿ ಬೆಂಬಲ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.