ಯುವ ನಟ ರಾಕೇಶ್ ಅಂತ್ಯಕ್ರಿಯೆ
Team Udayavani, Oct 4, 2017, 11:43 AM IST
ಬೆಂಗಳೂರು: ಅನಾರೋಗ್ಯದಿಂದ ಅಕಾಲಿಕ ಮರಣ ಹೊಂದಿದ ಯುವ ನಟ ರಾಕೇಶ್ ಅವರ ಅಂತ್ಯಕ್ರಿಯೆ ಇಂದು ಸುಮನಹಳ್ಳಿಯ ವಿದ್ಯುತ್ ಚಿತಾಗಾರದಲ್ಲಿ ನೆರವೇರಿತು. ಅವರ ತಂದೆ, ತಾಯಿ ಸೇರಿದಂತೆ ಅಪಾರ ಬಂಧು ಬಳಗ ಹಾಗು ಸ್ನೇಹಿತರು ಈ ವೇಳೆ ಹಾಜರಿದ್ದರು.
ಗ್ಯಾಂಗ್ರೀನ್ ಸಮಸ್ಯೆಯಿಂದ ಬಳಲುತ್ತಿದ್ದ ನಟ ರಾಕೇಶ್ ಅವರು ಎರಡು ತಿಂಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇತ್ತೀಚೆಗೆ ಕೋರಮಂಗಲದ ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ರಾಕೇಶ್ ಸೋಮವಾರ ಸಂಜೆ ಮೃತಪಟ್ಟಿದ್ದರು.
ಮಂಗಳವಾರ ಬೆಳಗ್ಗೆ ಮೂಡಲಪಾಳ್ಯದಲ್ಲಿರುವ ಅವರ ನಿವಾಸದ ಬಳಿ ರಾಕೇಶ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಪೂಜಾ ವಿಧಿವಿಧಾನ ಬಳಿಕ ಸುಮನಹಳ್ಳಿಯ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮೂಡಲಪಾಳ್ಯ ನಿವಾಸಿಯಾಗಿದ್ದ ರಾಕೇಶ್ ಅವರ ತಾಯಿ ಆಶಾರಾಣಿ ಕೂಡ ನಟಿಯಾಗಿದ್ದರು.
ಎಸ್.ನಾರಾಯಣ್ ನಿರ್ದೇಶನದ “ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ಬಾಲನಟನಾಗಿ ನಟಿಸಿದ್ದ ರಾಕೇಶ್ ಬುಲ್ಲಿ ಪಾತ್ರದ ಮೂಲಕ ಗುರುತಿಸಿಕೊಂಡಿದ್ದರು. “ಪಪ್ಪುಸಿ ‘ ಎಂದು ಹೇಳುವ ಡೈಲಾಗ್‌ನಿಂದ ಎಲ್ಲರ ಅಚ್ಚುಮೆಚ್ಚಿನ ನಟ ಎನಿಸಿಕೊಂಡಿದ್ದರು. “ಭಜರಂಗಿ’, “ಬಂಧು ಬಳಗ’, “ಅಭಯ್’, “ಅರ್ಜುನ್’, “ಬಾಸ್’, “ಹುಡುಗರು’, “ಮೊದಲಾ ಸಲ’ ಸೇರಿದಂತೆ ಹಲವು ಚಿತ್ರಗಳಲ್ಲಿ ರಾಕೇಶ್ ಅಭಿನಯಿಸಿದ್ದರು. ಇತ್ತೀಚೆಗೆ ಅವರು “ಧೂಮಪಾನ’ ಎಂಬ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.