ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್
Team Udayavani, Oct 4, 2017, 11:45 AM IST
ಬೆಂಗಳೂರು: ಬಿಎಂಟಿಸಿ ಬಸ್‌ನ ಚಕ್ರ ಕಳಚಿದ ಘಟನೆ ಹಸಿಯಾಗಿರುವಾಗಲೇ ಕಸ್ತೂರಬಾ ರಸ್ತೆಯಲ್ಲಿ ಮಂಗಳವಾರ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕನ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಸ್‌ನಲ್ಲಿದ್ದ 15 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಆದರೆ, ಡಿಕ್ಕಿ ರಭಸಕ್ಕೆ ಬಸ್ ಮುಂಭಾಗ ನುಜ್ಜುಗುಜ್ಜಾಗಿದ್ದು, ನಿಗಮದ ಕ್ರೇನ್ ಸಹಾಯದಿಂದ ಕಾರ್ಯಾಗಾರಕ್ಕೆ ಸಾಗಿಸಲಾಯಿತು.
ಬೆಳಗ್ಗೆ 11ರ ಸುಮಾರಿಗೆ ಶಿವಾಜಿನಗರದಿಂದ ಕೆ.ಆರ್. ಮಾರುಕಟ್ಟೆ ಕಡೆಗೆ ಹೊರಟಿದ್ದ ಬಸ್ (ಕೆಎ-57, ಎಫ್-415), ಕಸ್ತೂರಬಾ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಅರ್ಧ ತಾಸು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಸಂಚಾರ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ವರದಿಗೆ ಸೂಚನೆ: ಸ್ಥಳಕ್ಕೆ ಭೇಟಿ ನೀಡಿದ ಬಿಎಂಟಿಸಿ ಅಧ್ಯಕ್ಷ ಎಂ. ನಾಗರಾಜ, ವಾಹನ ಸವಾರರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡು, ತಕ್ಷಣ ಕ್ರೇನ್ ತರಿಸಿ ಸ್ಥಳದಿಂದ ಬಸ್ ತೆರವುಗೊಳಿಸಿದರು. “ವೇಗದ ಚಾಲನೆಯೇ ಅವಘಡಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಬಸ್ ಪವರ್ ಸ್ಟೇರಿಂಗ್ ಹೊಂದಿದ್ದು, ಏಕಾಏಕಿ ಲಾಕ್ ಆಗಲು ಸಾಧ್ಯವಿಲ್ಲ.
ಹಾಗಾಗಿ, ಘಟನೆ ಕುರಿತು ಸಮಗ್ರ ವರದಿ ನೀಡುವಂತೆ ನಿಗಮದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು,’ ಎಂದು ನಾಗರಾಜ ತಿಳಿಸಿದರು. ಕಬ್ಬನ್ ಪಾರ್ಕ್ ಸಂಚಾರ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ
Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು
Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್
Arrested: ಟ್ಯಾಟೂ ಆರ್ಟಿಸ್ಟ್ ಬಂಧನ: 2.50 ಕೋಟಿ ರೂ. ಡ್ರಗ್ಸ್ ಜಪ್ತಿ
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.