ಬೋಂಬೆ ಬಂಟ್ಸ್‌ ಅಸೋಸಿಯೇಶನ್‌:ಭಜನ ಸ್ಪರ್ಧೆ

Team Udayavani, Oct 4, 2017, 2:00 PM IST

02-Mum10a.jpg

ಮುಂಬಯಿ: ಮುಂಬಯಿಯ ಪ್ರತಿಷ್ಠಿತ ಜಾತೀಯ ಸಂಸ್ಥೆಗಳಲ್ಲಿ ಒಂದಾದ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಇದರ ಮಹಿಳಾ ವಿಭಾಗದ ವತಿಯಿಂದ ನಡೆದ ಭಜನ ಸ್ಪರ್ಧೆಯ ಸಮಾರೋಪ ಸಮಾರಂಭವು ಸೆ. 23ರಂದು ಜೂಹಿ ನಗರದ ಬಂಟ್ಸ್‌ ಸೆಂಟರ್‌ನಲ್ಲಿ ನಡೆಯಿತು.

ಬೋಂಬೆ ಬಂಟ್ಸ್‌ ಅಸೋಸಿ ಯೇಶನ್‌ನ ಮಾಜಿ ಅಧ್ಯಕ್ಷ ಅತ್ತೂರು ಬಾಬು ಎನ್‌. ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ನೆರೂಲ್‌ ಶ್ರೀ ಶನೀಶ್ವರ ಮಂದಿರದ ಅಧ್ಯಕ್ಷ ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ ಅವರು ಪಾಲ್ಗೊಂಡು ಮಾತನಾಡಿ, ಭಜನ ಎಂಬುವುದು ಮನುಷ್ಯನನ್ನು ಒಂದುಗೂಡಿಸುವುದರೊಂದಿಗೆ ನಮಗೆ ಧರ್ಮದ ಹಾದಿಯಲ್ಲಿ ನಡೆಯಲು ಪ್ರೇರಣೆ ನೀಡುತ್ತದೆ. ಭಜನೆಯಿಂದ ಮಾನಸಿಕ ನೆಮ್ಮದಿಯು ದೊರೆಯುತ್ತದೆ. ದೇವರ ಆರಾಧನೆಯಲ್ಲಿ ಭಜನೆಯು ಮಹತ್ವದ್ದಾಗಿದೆ ಎಂದು ನುಡಿದು ವಿಜೇತ ಸ್ಪರ್ಧಿಗಳನ್ನು ಅಭಿನಂದಿಸಿದರು.

ಇನ್ನೋರ್ವ ಮುಖ್ಯ ಅತಿಥಿ ನವಿಮುಂಬಯಿ ಹೊಟೇಲ್‌ ಓನರ್ ಅಸೋಸಿಯೇಶನ್‌ ಅಧ್ಯಕ್ಷ ದಯಾನಂದ ಶೆಟ್ಟಿ ಅವರು ಮಾತನಾಡಿ, ನವರಾತ್ರಿಯ ಸಮಯದಲ್ಲಿ ಸಂಘ-ಸಂಸ್ಥೆಗಳು ಇಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ಉತ್ತಮ ಕಾರ್ಯವಾಗಿದೆ. ಇಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯವಾಗಿದೆ. ಮಕ್ಕಳನ್ನು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದರು.

ಭಜನ ಸ್ಪರ್ಧೆಯಲ್ಲಿ ವಿಟuಲ ಭಜನ ಮಂಡಳಿ ಮೀರಾರೋಡ್‌ ಪ್ರಥಮ ಸ್ಥಾನ, ಶ್ರೀ ದುರ್ಗಾ ಭಜನ ಮಂಡಳಿ ಡೊಂಬಿವಲಿ ದ್ವಿತೀಯ, ಪನ್ವೇಲ್‌ ಕಲ್ಚರಲ್‌ ಅಸೋಸಿಯೇಶನ್‌ ತೃತೀಯ ಬಹುಮಾನವನ್ನು ಪಡೆಯಿತು.  ಗಣ್ಯರು ವಿಜೇತ ಸ್ಪರ್ಧಿಗಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.

ಸಮಾಧಾನಕರ ಬಹುಮಾನವನ್ನು ವಿಕ್ರೋಲಿ ಬಂಟ್ಸ್‌, ವರದ ಭಜನ ಮಂಡಳಿ, ಗಣಪತಿ ಅಯ್ಯಪ್ಪ ದುರ್ಗಾದೇವಿ ಭಜನ ಮಂಡಳಿಗಳು ತಮ್ಮದಾಗಿಸಿಕೊಂಡಿತು. ವೇದಿಕೆಯಲ್ಲಿ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಉಪಾಧ್ಯಕ್ಷ ನ್ಯಾಯವಾದಿ ಸುಭಾಷ್‌ ಬಿ. ಶೆಟ್ಟಿ, ಗೌರವ ಕಾರ್ಯದರ್ಶಿ ಸಿಎ ಚಂದ್ರಶೇಖರ ಶೆಟ್ಟಿ, ಸದಸ್ಯ ನೋಂದಾವಣೆ ಸಮಿತಿಯ ಕಾರ್ಯಾಧ್ಯಕ್ಷ ಜಯ ಸಿ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಜೆ. ಶೆಟ್ಟಿ, ಉಪ ಕಾರ್ಯಾಧ್ಯಕ್ಷೆ ಶಾರದಾ ಶೆಟ್ಟಿ, ಕಾರ್ಯದರ್ಶಿ ಲತಾ ಶೆಟ್ಟಿ, ಕೋಶಾಧಿಕಾರಿ ಪ್ರಭಾ ಶೆಟ್ಟಿ, ಜತೆ ಕಾರ್ಯದರ್ಶಿ ಶಾಂತಾ ಶೆಟ್ಟಿ, ಜತೆ ಕೋಶಾಧಿಕಾರಿ ಕೃಷ್ಣ ಕುಮಾರಿ ಶೆಟ್ಟಿ, ಯುವ ವಿಭಾಗದ ಕಾರ್ಯದರ್ಶಿ ವೈಷ್ಣವಿ ಶೆಟ್ಟಿ ಅವರು ಉಪಸ್ಥಿತರಿದ್ದರು.

ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಸರಳಾ ಬಿ. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

ಟಾಪ್ ನ್ಯೂಸ್

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.