ಪೆಟ್ರೋಲ್ ದರ ಸಮರ; ನಮ್ಮ ಕೆಲಸ ಆಗಿದೆ, ಇನ್ನು ನಿಮ್ಮ ಸರದಿ; ಕೇಂದ್ರ
Team Udayavani, Oct 4, 2017, 6:03 PM IST
ನವದೆಹಲಿ: ಒಂದು ವೇಳೆ ರಾಜ್ಯ ಸರ್ಕಾರಗಳು ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ (ಮೌಲ್ಯವರ್ಧಿತ ತೆರಿಗೆ) ಅನ್ನು ಶೇ.5ರಷ್ಟು ಕಡಿತಗೊಳಿಸಿದರೆ ಗ್ರಾಹಕರಿಗೆ ಮತ್ತಷ್ಟು ಲಾಭವಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಸಲಹೆ ನೀಡಿದ್ದಾರೆ.
ಸಾರ್ವಜನಿಕರ ಆಗ್ರಹಕ್ಕೆ ಮಣಿದಿರುವ ಕೇಂದ್ರ ಸರಕಾರ ತೈಲೋತ್ಪನ್ನಗಳ ಮೇಲೆ ವಿಧಿಸುತ್ತಿರುವ ಅಬಕಾರಿ ಸುಂಕ (ಎಕ್ಸೈಸ್ ಡ್ನೂಟಿ)ವನ್ನು 2 ರೂ. ತಗ್ಗಿಸಿತ್ತು. ಏತನ್ಮಧ್ಯೆ ನಾವು ಕೇಂದ್ರದ ವತಿಯಿಂದ ಏನು ಮಾಡಿದ್ದೇವೆಯೋ ಅದೇ ರೀತಿ ಗ್ರಾಹಕರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರಗಳು ಕೂಡಾ ತೆರಿಗೆಯನ್ನು ಇಳಿಕೆ ಮಾಡಬೇಕೆಂದು ಪ್ರಧಾನ್ ತಿಳಿಸಿದ್ದಾರೆ.
ತೈಲದ ಮೇಲಿನ ವ್ಯಾಟ್ ಅನ್ನು ಕಡಿತಗೊಳಿಸುವಂತೆ ಕೋರಿ ವಿತ್ತ ಸಚಿವರು ಎಲ್ಲಾ ರಾಜ್ಯಗಳಿಗೂ ಪತ್ರ ಬರೆಯಲಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು. ತೈಲೋತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು 2 ರೂಪಾಯಿಯಷ್ಟು ಇಳಿಕೆ ಮಾಡಿದ್ದ ಹಿನ್ನೆಲೆಯಲ್ಲಿ ಬುಧವಾರ ಪೆಟ್ರೋಲ್ ಪ್ರತಿ ಲೀಟರ್ ಬೆಲೆ 2.50 ರೂಪಾಯಿಯಷ್ಟು ಹಾಗೂ ಡೀಸೆಲ್ ಪ್ರತಿ ಲೀಟರ್ ಬೆಲೆ 2.25 ರೂಪಾಯಿ ಇಳಿಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.