ಕಾಲಹರಣ ಮಾಡುವುದು ಬಿಡಿ, ಉದ್ಯೋಗ ಸೃಷ್ಟಿಸಿ
Team Udayavani, Oct 5, 2017, 7:30 AM IST
ಅಮೇಠಿ: “”ಅನಗತ್ಯವಾಗಿ ಕಾಲಹರಣ ಮಾಡದೇ ದೇಶದಲ್ಲಿ ಉದ್ಯೋಗ ಸೃಷ್ಟಿಗೆ ಮುಂದಾಗಿ” ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ಹಲವು ನಾಟಕೀಯ ಬೆಳವಣಿಗೆಗಳ ಬಳಿಕ, ಹೆಚ್ಚು ಕಡಿಮೆ ಆರು ತಿಂಗಳ ನಂತರ ಬುಧವಾರ ಸ್ವಕ್ಷೇತ್ರ ಅಮೇಠಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿ ಅವರು, “”ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗದೇ ಇದ್ದರೆ, ಅದನ್ನು ಜನತೆ ಮುಂದೆ ಹೇಳಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲಿ ಸಮಸ್ಯೆ ಬಗೆಹರಿಸಲಿದೆ. ರೈತರು ಹಾಗೂ ಯುವಜನತೆ, ಈ ಎರಡು ಪ್ರಮುಖ ಕ್ಷೇತ್ರಗಳ ಬಗ್ಗೆ ಮೋದಿ ಅವರು ಮಾತನಾಡುತ್ತಲೇ ಇಲ್ಲ” ಎಂದರು.
ಉತ್ತರ ಪ್ರದೇಶದ ಕಥವ್ರಾ ಹಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. “”ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಕಾಲಹರಣ ಮಾಡುವುದನ್ನು ನಿಲ್ಲಿಸಲಿ. ಯುವಜನತೆಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಮಾತು ಕೊಡಲಿ. ದೇಶದ ಯುವ ಜನತೆ, ಈ ದೇಶದಲ್ಲಿ ಕೆಲಸ ಮಾಡುವ ಸ್ಥಿತಿಯೇ ಇಲ್ಲ ಎಂದು ಆಡಿಕೊಳ್ಳುತ್ತಿದೆ. ಅವರ ಕೋಪ ಎಲ್ಲೆ ಮೀರಿದೆ. ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ” ಎಂದು ಗುಡುಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.