ಸುಪ್ರೀಂನಲ್ಲಿನ್ನು ನ್ಯಾಪ್ಕಿನ್
Team Udayavani, Oct 5, 2017, 6:55 AM IST
ನವದೆಹಲಿ: ಸುಪ್ರೀಂಕೋರ್ಟಲ್ಲಿ ಮೂರು ಸ್ವಯಂಚಾಲಿತ ಸ್ಯಾನಿಟರಿ ಪ್ಯಾಡ್ ನೀಡುವ ಯಂತ್ರಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಈ ಬಗ್ಗೆ ನ್ಯಾಯಾಲಯದ ರಿಜಿಸ್ಟ್ರಿಗೆ ಆದೇಶ ನೀಡಿದ್ದಾರೆ.
ನ್ಯಾಯವಾದಿ ನಂದಿನಿ ಗೋರೆ ಎಂಬುವರು ಈ ಬಗ್ಗೆ ನ್ಯಾಯಾಲಯದ ಗಮನಕ್ಕೆ ತಂದಿದ್ದು, ಸ್ಯಾನಿಟರಿ ನ್ಯಾಪ್ಕಿನ್ ಇಲ್ಲದೆ ಮಹಿಳಾ ಕಕ್ಷಿದಾರರು, ನ್ಯಾಯವಾದಿಗಳು ಮತ್ತು ಇತರ ಮಹಿಳಾ ಉದ್ಯೋಗಿಗಳಿಗೆ ಅನಾನುಕೂಲವಾಗುತ್ತಿದೆ ಎಂದು ಹೇಳಿದ್ದರು. ಇದನ್ನು ಗಣನೆಗೆ ತೆಗೆದುಕೊಂಡ ಮುಖ್ಯ ನ್ಯಾಯಮೂರ್ತಿ, ಸುಪ್ರೀಂಕೋರ್ಟ್ ರಿಜಿಸ್ಟ್ರಿಗೆ ಆದೇಶ ನೀಡಿ ಮೂರು ಸ್ವಯಂ ಚಾಲಿತ ಮಷಿನ್‌ಗಳನ್ನು ಅಳವಡಿಸಬೇಕು ಮತ್ತು ಅದಕ್ಕಾಗಿ 10 ಲಕ್ಷ ರೂ. ಬಿಡುಗಡೆ ಮಾಡಿರುವುದಾಗಿ ಆದೇಶ ನೀಡಿದ್ದಾರೆ. ಇದರ ಜತೆಗೆ ಬಳಕೆ ಮಾಡಿದ ಸ್ಯಾನಿಟರಿ ಪ್ಯಾಡ್‌ಗಳನ್ನು ಸುಡುವ ಮೂರು ಯಂತ್ರಗಳನ್ನು ಅಳವಡಿ ಸುವಂತೆಯೂ ಮುಖ್ಯ ನ್ಯಾಯಮೂರ್ತಿ ಸೂಚಿಸಿದ್ದಾರೆ.
ಋತುಸ್ರಾವದ ವೇಳೆ ಮಹಿಳೆಯರು ಆದ್ಯತೆಯಲ್ಲಿ ಆರೋಗ್ಯ ಮತ್ತು ಶುಚಿತ್ವ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಇಂಥ ಕ್ರಮ ಕೈಗೊಂಡಿದ್ದು, ಮಹಿಳಾ ನ್ಯಾಯವಾದಿಗಳಿಂದ ಪ್ರಶಂಸೆಗೆ ಒಳಗಾಗಿದೆ. ಸುಪ್ರೀಂಕೋರ್ಟ್ ನ್ಯಾಯವಾದಿ ನಂದಿನಿ ಗೋರೆ ಮಾತನಾಡಿ, ಸುಪ್ರೀಂಕೋರ್ಟಲ್ಲಿ 1 ಸಾವಿರ ಮಹಿಳಾ ನ್ಯಾಯವಾದಿಗಳು, 250 ಮಂದಿ ಮಹಿಳಾ ಉದ್ಯೋಗಿಗಳಿದ್ದಾರೆ. ಮುಖ್ಯ ನ್ಯಾಯ ಮೂರ್ತಿಗಳ ಆದೇಶದಿಂದ ಅವರೆಲ್ಲರಿಗೆ ಅನುಕೂಲವಾಗಲಿದೆ ಎಂದಿದ್ದಾರೆ.
ಕೇಂದ್ರ ಸರ್ಕಾರ ಕೂಡ ವಿವಿಧ ರಾಜ್ಯಗಳಲ್ಲಿ ಮಹಿಳೆಯರಿಗಾಗಿ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುತ್ತಿದೆ. ಅದರ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆಯಾದರೂ, ಅದರ ಬಗ್ಗೆ ಮುಕ್ತವಾಗಿ ಮಾತನಾಡಲು ಈಗಲೂ ಗ್ರಾಮೀಣ ಮತ್ತು ನಗರ ಪ್ರದೇಶಗಳ ಮಂದಿ ಮುಜುಗರಪಡುತ್ತಿರುವ ಸ್ಥಿತಿಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.