ಡಿಸೆಂಬರ್‌ನಲ್ಲಿ ಜೆಡಿಎಸ್ ಪಟ್ಟಿ ಬಿಡುಗಡೆ
Team Udayavani, Oct 5, 2017, 9:30 AM IST
ತುಮಕೂರು: ಡಿಸೆಂಬರ್ ಅಂತ್ಯದೊಳಗೆ ಎಲ್ಲಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆಯುತ್ತಿದೆ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಗ್ರಾಮಾಂತರ ಭಾಗದಲ್ಲಿ ಜೆಡಿಎಸ್ ಗೆಲುವು ನಿಶ್ಚಿತ. ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಸಿಕ್ಕಿದೆ. ಗೌರಿಶಂಕರ್ ಕ್ಷೇತ್ರದ ಮನೆ ಮನೆಗೂ ಭೇಟಿ ನೀಡಿ ಪರಿಣಾಮ ಕಾರಿಯಾಗಿ ಪ್ರಚಾರ ಮಾಡುತ್ತಿದ್ದಾರೆ ಎಂದರು. ಈ ಕಾರ್ಯಕ್ರಮ 224 ಕ್ಷೇತ್ರಗಳಿಗೂ ಮಾದರಿಯಾಗಿದೆ. ಈ ರೀತಿಯ ಕಾರ್ಯಕ್ರಮ ಬೇರೆ ಕ್ಷೇತ್ರಗಳಲ್ಲೂ ಮಾಡಲು ಆಯಾ ಕ್ಷೇತ್ರದ ಶಾಸಕರು, ಮಾಜಿ ಶಾಸಕರು, ಪಕ್ಷದ ಮುಖಂಡರಿಗೆ ಸೂಚಿಸುವುದಾಗಿ ತಿಳಿಸಿದರು.
ಪ್ರಚಾರ ಸಮಿತಿ ಅಧ್ಯಕ್ಷ ಎಚ್.ವಿಶ್ವನಾಥ್‌ರಿಗೆ ಹುಣಸೂರು ಕ್ಷೇತ್ರಕ್ಕೆ ಟಿಕೆಟ್ ಖಚಿತ. ಪಕ್ಷದ ಮುಂದಿನ ಕಾರ್ಯಕ್ರಮಗಳು ಅವರ ನೇತೃತ್ವದಲ್ಲೇ ನಡೆಯಲಿವೆ. ಮುಂದಿನ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಅವರ ಸಮ್ಮುಖದಲ್ಲೇ ನಡೆಯಲಿದೆ ಎಂದು ನುಡಿದರು.
ಶ್ರೀಗಳ ಆರೋಗ್ಯ ವಿಚಾರಣೆ: ಇದಕ್ಕೂ ಮೊದಲು ಶ್ರೀಕ್ಷೇತ್ರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಆರೋಗ್ಯ ವಿಚಾರಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ಧಗಂಗಾ ಶ್ರೀಗಳ ಆರೋಗ್ಯ ಸುಧಾರಿಸಲಿ
ಎಂದು ಮಠದಲ್ಲಿ ಮುದ್ರಾಯಾಗ ನಡೆಸಿ ಪೂರ್ಣಾಹುತಿ ಸಲ್ಲಿಸಿದರು. ನಂತರ ಹಳೇ ಮಠದಲ್ಲಿ ಶ್ರೀಗಳನ್ನು ಭೇಟಿ ಮಾಡಿ “ಮನೆ ಮನೆಗೆ ಕುಮಾರಣ್ಣ, ಗ್ರಾಮಾಂತರಕ್ಕೆ ಶಂಕರಣ್ಣ’ ಎಂಬ ಕರಪತ್ರ ಬಿಡುಗಡೆ ಮಾಡಿದರು. ಅಧಿಕಾರದ ಅಹಂಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಪಕ್ಷ ಎಲ್ಲಿದೆ ಎಂಬುದಾಗಿ ಮಾತನಾಡುತ್ತಿದ್ದಾರೆ. ಅವರೊಮ್ಮೆ ಹಿಂದಿನದನ್ನು ನೆನೆಯಲಿ, ಅವರನ್ನು ಡಿಸಿಎಂ ಮಾಡಿ ಗುರುತಿಸಿದ್ದೇ ಜೆಡಿಎಸ್ ಪಕ್ಷ. ನಂತರ ಕಾಂಗ್ರೆಸ್‌ನವರು ಸಿದ್ದರಾಮಯ್ಯನವರನ್ನು ಹೈಜಾಕ್ ಮಾಡಿದರು. ಇದು ಕಾಂಗ್ರೆಸ್ ಸಂಸ್ಕೃತಿ. ಹಲವು ಮುಖಂಡರು ಜೆಡಿಎಸ್‌ಗೆ ಕೈಕೊಟ್ಟರೂ ಜೆಡಿಎಸ್ ಭದ್ರವಾಗಿಯೇ ಇದೆ.
●ಎಚ್.ಡಿ.ದೇವೇಗೌಡ, ಜೆಡಿಎಸ್ ರಾಷ್ಟ್ರಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.