ಭಯೋತ್ಪಾದಕರಿಂದ ದ.ಕ. ಜಿಲ್ಲೆಯೂ ಸುರಕ್ಷಿತವಲ್ಲ: ಸಿ.ಟಿ. ರವಿ
Team Udayavani, Oct 5, 2017, 11:48 AM IST
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯೂ ಭಯೋತ್ಪಾದಕರಿಂದ ಸುರಕ್ಷಿತವಲ್ಲ. ಐಸಿಸ್ ಉಗ್ರಗಾಮಿಗಳು ಜಿಲ್ಲೆಯಲ್ಲಿಯೂ ನೆಲೆಯೂರಿರುವ ಬಗ್ಗೆ ವ್ಯಾಪಕವಾಗಿ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಬಂಟ್ವಾಳ ಕ್ಷೇತ್ರ ಬಿಜೆಪಿ ಚುನಾವಣಾ ಉಸ್ತುವಾರಿ, ಶಾಸಕ ಸಿ.ಟಿ. ರವಿ ಒತ್ತಾಯಿಸಿದ್ದಾರೆ.
ಅವರು ಅ. 4ರಂದು ಬಿ.ಸಿ. ರೋಡ್ ಬಿಜೆಪಿ ಪಕ್ಷ ಕಚೇರಿಗೆ ಭೇಟಿ ನೀಡಿದ ಸಂದರ್ಭ ಮಾಧ್ಯಮದವ ರೊಂದಿಗೆ ಮಾತನಾಡಿದರು. ಶಂಕಿತ ಭಯೋತ್ಪಾದಕ ಕೇಂದ್ರಗಳ ಇರುವಿಕೆ ಮತ್ತು ಚಟುವಟಿಕೆಯ ಬಗ್ಗೆ ಮಾಧ್ಯಮ ವರದಿಗಳಲ್ಲಿ ಉಲ್ಲೇಖ ಆಗಿರುವುದನ್ನು ಪ್ರಸ್ತಾವಿಸಿದರು. ಈ ಹಿನ್ನೆಲೆಯಲ್ಲಿ ಇವರಿಗೆ ಎಲ್ಲಿ ತರಬೇತಿ ನೀಡಲಾಗುತ್ತಿದೆ ಎಂಬುದನ್ನು ಪತ್ತೆ ಹಚ್ಚಬೇಕೆಂದು ಪೊಲೀಸ್ ಇಲಾಖೆಯನ್ನು ಆಗ್ರಹಿಸುತ್ತಿರುವುದಾಗಿ ತಿಳಿಸಿದರು. ರಾಜಕೀಯ ಪಕ್ಷಗಳು ರಾಷ್ಟ್ರೀಯ ಹಿತಾಸಕ್ತಿಯನ್ನು ಬಲಿಕೊಡಬಾರದು. ಸಮಾಜಘಾತುಕ, ದೇಶ ದ್ರೋಹಿಗಳನ್ನು ಬೆಳೆಸಲು ಯಾರೂ ಅವಕಾಶ ನೀಡಬಾರದು ಎಂದರು.
ಪಕ್ಷ ಸಂಘಟನೆಗೆ ಒತ್ತು
ಮುಂಬರುವ ವಿಧಾನ ಸಭಾ ಚುನಾವಣೆಗೆ ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಹಾಗೆಯೇ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲೂ ಪ್ರಮುಖರನ್ನು ಹಾಗೂ ಕಾರ್ಯಕರ್ತರನ್ನು ಸೇರಿಸಿಕೊಂಡು ಪಕ್ಷವನ್ನು ಸಂಘಟಿಸಲಾಗುವುದು ಎಂದರು. ಅದಕ್ಕೂ ಮೊದಲು ಅವರು ಸ್ಥಳೀಯ ಪಕ್ಷ ಪ್ರಮುಖರ ಸಭೆ ನಡೆಸಿ ಪಕ್ಷ ಸಂಘಟನೆಯ ಕುರಿತಂತೆ ಸಮಾಲೋಚನೆ ನಡೆಸಿದರು.
ಬಂಟ್ವಾಳ ಕ್ಷೇತ್ರ ಬಿಜೆಪಿ ಮುಖಂಡ ರಾಜೇಶ್ ನಾೖಕ್ ಉಳಿಪಾಡಿಗುತ್ತು, ಕ್ಷೇತ್ರದ ಸಮಿತಿಯ ಅಧ್ಯಕ್ಷ ದೇವದಾಸ್ ಶೆಟ್ಟಿ, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.