ಮಾನಸಿಕ ಸಂತೋಷದಿಂದ ಆಯಸ್ಸು ವೃದ್ಧಿ : ರೈ
Team Udayavani, Oct 5, 2017, 12:12 PM IST
ಉರ್ವಸ್ಟೋರ್: ಮಾನಸಿಕವಾಗಿ ಸಂತೋಷದಿಂದಿದ್ದಾಗ ಮಾತ್ರ ಮನುಷ್ಯನ ಆಯಸ್ಸು ಹೆಚ್ಚಾಗುತ್ತದೆ ಎಂದು ಜಿಲ್ಲಾ
ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದರು.
ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಮಂಗಳವಾರ ಜರಗಿದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ- 2017 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾನವನು ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು. ಅದರಲ್ಲೂ ಪ್ರಕೃತಿದತ್ತವಾಗಿ ಲಭಿಸುವ ಆಹಾರ ಪದ್ಧತಿಯನ್ನು ಬಳಸಿಕೊಂಡರೆ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.
ಶಿಸ್ತುಬದ್ಧ ಜೀವನಕ್ಕೆ ಮತ್ತು ಆರೋಗ್ಯ ರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಭಾರತೀಯ ಮೂಲದ ಔಷಧಗಳನ್ನು ಬಳಕೆ ಮಾಡಿಕೊಳ್ಳಬೇಕು. ಹೆಚ್ಚಾಗಿ ಗಿಡ ಮೂಲಿಕೆಗಳ ಔಷಧವನ್ನು ಬಳಸಬೇಕು. ಇದರಿಂದಾಗಿ ಮಾನವನ ಸರಾಸರಿ
ವಯಸ್ಸು ಹೆಚ್ಚಾಗುತ್ತದೆ. ಭಾರತೀಯ ಕುಟುಂಬ ವ್ಯವಸ್ಥೆಯಲ್ಲಿ ಹಿರಿಯ ನಾಗರಿಕರ ಸೇವೆಯನ್ನು ಕಿರಿಯರು ಮಾಡುತ್ತಿದ್ದಾರೆ. ಆದರೆ ಪಾಶ್ಚಿಮಾತ್ಯ ದೇಶಗಳಲ್ಲಿ ಈ ಪದ್ಧತಿ ಇಲ್ಲ. ವಯಸ್ಸಾದ ಬಳಿಕ ಅವರನ್ನು ಮಾನಸಿಕವಾಗಿ ಕುಬ್ಜರನ್ನಾಗಿ ಮಾಡಲಾಗುತ್ತದೆ. ಸರಕಾರ ಹಿರಿಯ ನಾಗರಿಕರಿಗೆಂದು ಅನೇಕ ಸವಲತ್ತು ನೀಡಿದೆ ಎಂದು ವಿವರಿಸಿದರು.
ಸಮ್ಮಾನ
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಡಾ| ಚಂದ್ರಶೇಖರ ದಾಮ್ಲೆ (ಶಿಕ್ಷಣ), ಡಾ| ಪ್ರಭಾ ಅಧಿಕಾರಿ ಎಂ.ಆರ್.,
ನಿವೃತ್ತ ಯೋಧ ಮೇಜರ್ ಲೋಹಿತ್‌ಸುವರ್ಣ ಬಜಪೆ (ಹಿರಿಯನಾಗರಿಕ ಕ್ಷೇತ್ರ), ಆದಂ ಹೇಂತರ್ (ಸಾಹಿತ್ಯ), ಟಿ.
ಪ್ರೇಮಲತಾ ರಾವ್ (ಕಲೆ), ವಾಸುದೇವ ರೈ (ಕೃಷಿ), ಕೆ. ಮೋನಪ್ಪ ವಿಟ್ಲ (ಸಮಾಜ ಸೇವೆ), ಓಬಯ್ಯ (ಕ್ರೀಡೆ) , ಮಾಯಿಲ ಕುತ್ತಾರು (ಜಾನಪದ), ನಿವೃತ್ತ ಸರಕಾರಿ ಅಧಿಕಾರಿ ಕೆ.ಜಿ. ಬಂಗೇರ ಅವರನ್ನು ಸಮ್ಮಾನಿಸಲಾಯಿತು.
ಜಿ. ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ
ಸದಸ್ಯ ಕಾರ್ಯದರ್ಶಿ ಮಲ್ಲನಗೌಡ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ
ಸಹಿತ ಗಣ್ಯರು ವೇದಿಕೆಯಲ್ಲಿದ್ದರು.
ಕಾದು ಕುಳಿತ ಹಿರಿಯರು
ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಿಗದಿಯಾಗಿದ್ದು, ಸಚಿವರು ಮಧ್ಯಾಹ್ನ 12 ಗಂಟೆಗೆ ಬಂದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಳಗ್ಗೆ 9.30ಗೆ ಆಗಮಿಸಿದ್ದ ನೂರಕ್ಕೂ ಮಿಕ್ಕಿದ ಹಿರಿಯ ನಾಗರಿಕರು ಸಚಿವರ ಆಗಮನಕ್ಕಾಗಿ
ಕಾದು ಕಾದು ಸುಸ್ತಾದರು. ಸಮಯ ಕಳೆಯಲು ಅನೇಕ ಹಿರಿಯರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.