ಯಕ್ಷಕೌಮುದಿ ಮಹಿಳಾ ಸಂಘ: ವಾರ್ಷಿಕೋತ್ಸವ ಸಮಾರಂಭ
Team Udayavani, Oct 5, 2017, 2:02 PM IST
ಕೆರೆಕಾಡು: ಮಹಿಳೆ ಆರ್ಥಿಕವಾಗಿ ಶೈಕ್ಷಣಿಕವಾಗಿ ಮುಂದುವರಿದರೂ ಶೋಷಣೆ ಇನ್ನೂ ಇದೆ. ಈ ನಿಟ್ಟಿನಲ್ಲಿ ಮಹಿಳಾ ಸಂಘಟನೆಯ ಅಗತ್ಯವಿದೆ ಎಂದು ನಿಟ್ಟೆ ಎನ್.ಎ.ಎಂ. ಎಂ. ತಾಂತ್ರಿಕ ವಿದ್ಯಾಲಯದ ಪ್ರಾಧ್ಯಾಪಕಿ ಜ್ಯೋತಿ ಶೆಟ್ಟಿ ಹೇಳಿದರು.
ಅವರು ಅ. 2 ರಂದು ಕೆರೆಕಾಡುವಿನಲ್ಲಿ ಯಕ್ಷ ಕೌಮುದಿ ಮಹಿಳಾ ಸಂಘದ ಆರನೇ ವರ್ಷದ ವಾರ್ಷಿಕೋತ್ಸವ
ಸಂದರ್ಭದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ತಮ್ಮ ಸಂಘಟನೆಯ ಮಹಿಳೆಯರು ಹೆಣ್ಣು ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದರು.
ವಿನಾಯಕ ಯಕ್ಷಕಲಾ ತಂಡದ ಕಾರ್ಯದರ್ಶಿ ರೇಶ್ಮಾ ಜಿ. ಬಂಗೇರ ಮಾತನಾಡಿ, ಯಕ್ಷಗಾನ ಕ್ಷೇತ್ರ ಗಂಡಸರಿಗೆ
ಮಾತ್ರ ಸೀಮಿತವಲ್ಲ. ಹೆಣ್ಣು ಮಕ್ಕಳು ಕೂಡ ಅದರಲ್ಲಿ ಸಾಧನೆ ಮಾಡಬಹುದು. ಇಲ್ಲಿನ ಮಕ್ಕಳ ಮೇಳದಲ್ಲಿ ಸುಮಾರು 20 ಹುಡುಗಿಯರು ಯಕ್ಷಗಾನ ಅರ್ಥಗಾರಿಕೆ, ವೇಷ ಹಾಕುವುದನ್ನು ತರಬೇತು ಪಡೆದು ಯಶಸ್ವಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಇಲ್ಲಿನ ಮಹಿಳಾ ಸಂಘಟನೆಯು ಉತ್ತಮ ಕೆಲಸಮಾಡುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ಜಾನಪದ ಕ್ಷೇತ್ರದ ನಾಟಿ ವೈದ್ಯೆ ಸುಮತಿ ಪೂಜಾರಿ ಶಾಂತಿ ನಗರ ಅವರನ್ನು ಗೌರವಿಸಲಾಯಿತು.
ಕಿಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ದಮಯಂತಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿ ಶಿಮಂತೂರು ರೇಖಾ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಸಂಘದ ಅಧ್ಯಕ್ಷೆ ಪ್ರೇಮಲತಾ ಸ್ವಾಗತಿಸಿದರು. ಅನ್ವಿತಾ ಸಮ್ಮಾನ ಪತ್ರ ವಾಚಿಸಿದರು. ಪೂಜಾ ವಂದಿಸಿದರು. ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಶ್ರೀ ವಿನಾಯಕ ಯಕ್ಷಕಲಾ ತಂಡ ಮಕ್ಕಳ ಮೇಳದವರಿಂದ ಪಾಂಚಜನ್ಯ ಯಕ್ಷಗಾನ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.