ಅಡಿಗರ ಕಾವ್ಯಗಳ ಮರು ಓದು ಅವಶ್ಯ: ವಿವೇಕ ರೈ
Team Udayavani, Oct 5, 2017, 3:58 PM IST
ಬಂಟ್ವಾಳ: ಶತಮಾನದ ಸಾಹಿತಿ ಗೋಪಾಲಕೃಷ್ಣ ಅಡಿಗರ ಕಾವ್ಯಗಳ ಮರು ಓದು ಅಗತ್ಯ ಎಂದು ಹಂಪಿ ಕನ್ನಡ
ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ| ಬಿ.ಎ.ವಿವೇಕ ರೈ ಹೇಳಿದರು.ಬಿ.ಸಿ. ರೋಡ್‌ನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜರಗಿದ ಮೊಗೇರಿ ಗೋಪಾಲಕೃಷ್ಣ ಅಡಿಗ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಡಿಗರ ಬರಹ ಧ್ಯಾನಸ್ಥ ಮನಸ್ಸಿನಿಂದ ಮತ್ತು ಚಿಕಿತ್ಸಕ ಪ್ರಜ್ಞೆಯಿಂದ ಮೂಡಿದೆ. ಓದಿನಲ್ಲೂ ಹೊಸತನದ ಸಾಧ್ಯತೆಯನ್ನು ನೀಡಬಲ್ಲ ಸಾಮರ್ಥಯವಿದೆ. ಅವರ ಸಾಹಿತ್ಯವನ್ನು ಅಧ್ಯಯನಶೀಲರಾಗಿ ಓದುವುದೇ ಹೊಸ ತಲೆಮಾರು ನೀಡುವ ಗೌರವವಾಗುತ್ತದೆ ಎಂದು ಅವರು ಹೇಳಿದರು.
ಇದೇ ಸಂದರ್ಭ ಗೋಪಾಲಕೃಷ್ಣ ಅಡಿಗ ಅವರ ಸಂಬಂಧಿ, ಹಿರಿಯ ಪತ್ರಕರ್ತ ಜಯರಾಮ ಅಡಿಗ ಅವರನ್ನು ಗೌರವಿಸಲಾಯಿತು. ಅಡಿಗ ಜನ್ಮ ಶತಮಾನೋತ್ಸವ ಪ್ರಯುಕ್ತ ಏರ್ಪಡಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ
ವಿಜೇತರಿಗೆ ಪ್ರಮಾಣಪತ್ರ ವಿತರಿಸಲಾಯಿತು.
ವಿಚಾರಗೋಷ್ಠಿಗಳಲ್ಲಿ ಎಸ್.ಆರ್. ವಿಜಯಶಂಕರ್ ಅಡಿಗರ ಕಾವ್ಯದ ಕುರಿತು ಹಾಗೂ ಡಾ| ವರದರಾಜ ಚಂದ್ರಗಿರಿ
ಅವರು ‘ಅಡಿಗರು ಮತ್ತು ಪ್ರಕೃತ ನಮ್ಮ ಸಾಹಿತ್ಯ ಧರ್ಮ’ ಕುರಿತು ವಿಚಾರ ಮಂಡಿಸಿದರು.
ಬಳಿಕ ಯಕ್ಷಗಾನ ತಾಳಮದ್ದಳೆ ‘ವಾಲಿಮೋಕ್ಷ’ ನಡೆಯಿತು. ಕಲಾವಿದರಾದ ಸಿರಿಬಾಗಿಲು ರಾಮಕೃಷ್ಣ ಮಯ್ಯ, ಸೀತಾರಾಮ ತೋಳ್ಪಡಿತ್ತಾಯ, ಜನಾರ್ದನ ತೋಳ್ಪಡಿತ್ತಾಯ, ಡಾ| ಎಂ.ಪ್ರಭಾಕರ ಜೋಷಿ, ಕೆ.ಮೋಹನ
ರಾವ್ ಮತ್ತು ಭಾಸ್ಕರ ರೈ ಕುಕ್ಕುವಳ್ಳಿ ಭಾಗವಹಿಸಿದರು. ಸಮಿತಿಯ ಉಪಾಧ್ಯಕ್ಷ ವಿಶ್ವನಾಥ ಬಂಟ್ವಾಳ ಕಲಾವಿದರನ್ನು
ಗೌರವಿಸಿದರು.
ಈ ಸಂದರ್ಭ ಸಮಿತಿಯ ಕೋಶಾಧಿಕಾರಿ ಬಿ.ತಮ್ಮಯ್ಯ, ಕಾರ್ಯದರ್ಶಿ ಡಾ| ಅಜಕ್ಕಳ ಗಿರೀಶ ಭಟ್ಟ ಮತ್ತಿತರರು
ಉಪಸ್ಥಿತರಿದ್ದರು.ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಡಾ| ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಸ್ವಾಗತಿಸಿ, ರೇಷ್ಮಾ ಜಿ. ಭಟ್ ವಂದಿಸಿದರು. ಡಾ| ಯೋಗೀಶ ಕೈರೋಡಿ ಕಾರ್ಯಕ್ರಮ ನಿರೂಪಿಸಿದರು.
ಅಭಿರುಚಿ ಜೋಡುಮಾರ್ಗ, ನಮ್ಮ ಬಂಟ್ವಾಳ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಬಂಟ್ವಾಳ ತಾಲೂಕು ಕನ್ನಡ
ಸಾಹಿತ್ಯ ಪರಿಷತ್ತು ಸಂಘಟನೆಯವರು ಕಾರ್ಯಕ್ರಮಕ್ಕೆ ಸಹಕರಿಸಿದರು.
ಸರಿಯಾದ ಕ್ರಮವಲ್ಲ
ಯಾವುದೇ ಸಾಹಿತ್ಯದ ಬಿಡಿ ಸಾಲನ್ನು ಗಮನಿಸಿ ಕವಿಯನ್ನು ಅಥವಾ ಆತನ ಕೃತಿಯನ್ನು ತೀರ್ಮಾನಿಸುವುದು ಸರಿಯಾದ ಕ್ರಮವಲ್ಲ. ಅಡಿಗರ ಒಟ್ಟು ಕಾವ್ಯ ಸಂಪುಟವನ್ನು ಮಹಾಕಾವ್ಯವೆಂದು ಪರಿಗಣಿಸಬಹುದು.
ಡಾ| ಕೆ. ಚಿನ್ನಪ್ಪ ಗೌಡ, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ
ವಿಶ್ರಾಂತ ಕುಲಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
Sullia: ಪರಾರಿಯಾಗುತ್ತಿದ್ದ ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
Puttur: ಬಸ್ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.