ಐಟಿ ಅಧಿಕಾರಿಗಳ ವಿರುದ್ಧ ಎಸಿಬಿ “ಗುಮ್ಮ’: ಶೋಭಾ

Team Udayavani, Oct 6, 2017, 6:20 AM IST

shoba.jpg

ಉಡುಪಿ: ಆದಾಯ ತೆರಿಗೆ (ಐಟಿ) ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಎಸಿಬಿಯನ್ನು ಛೂ ಬಿಡುತ್ತಿದೆ. ರಾಜ್ಯ ಸರಕಾರ ಭ್ರಷ್ಟಾಚಾರವನ್ನು ರಕ್ಷಿಸುತ್ತಿರುವುದಕ್ಕೆ ಇದೇ ಸಾಕ್ಷಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಐಟಿ, ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ವರ್ಗಾವಣೆಯಾಗಿ ಬರುವವರು. ಏನಾದರೂ ದೂರುಗಳಿದ್ದರೆ ಕೇಂದ್ರ ಸರಕಾರಕ್ಕೆ ಸಲ್ಲಿಸುವುದು ಅಥವಾ ಸಿಬಿಐ ಮೂಲಕ ತನಿಖೆ ನಡೆಸುವ ಪ್ರಸ್ತಾವ ಸಲ್ಲಿಸುವ ಬದಲು ಅವರ ವಿರುದ್ಧ ಎಸಿಬಿಯನ್ನು ಛೂ ಬಿಡುವುದು ಸರಕಾರಕ್ಕೆ ಅವಮಾನ ಎಂದರು.

ಭಂಡ ಸರಕಾರ: ಸಿದ್ದರಾಮಯ್ಯನವರ ಸರಕಾರ ಭಂಡ ಸರಕಾರವಾಗಿದೆ. ನೋಟು ಅಪಮೌಲ್ಯಗೊಳಿಸಿದ ಬಳಿಕ ಲೆಕ್ಕಪತ್ರ ಇಡದವರ ಮೇಲೆ ಐಟಿ, ಇಡಿ ಅಧಿಕಾರಿಗಳು ದಾಳಿ ನಡೆಸಿ ಲೆಕ್ಕಪತ್ರ ಕೇಳಿದ್ದಾರೆ. ಕೇಂದ್ರ ಸರಕಾರ ಇನ್ನಷ್ಟು ಪ್ರಾಮಾಣಿಕ ಅಧಿಕಾರಿಗಳನ್ನು ರಾಜ್ಯಕ್ಕೆ ನಿಯೋಜಿಸಿ ತೆರಿಗೆ ಮೋಸ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶೋಭಾ ಆಗ್ರಹಿಸಿದರು.

ಹಿಂದೆ ಇದ್ದ ಸಿಮಿ ಈಗ ಪಿಎಫ್ಐ, ಕೆಎಫ್ಡಿ ಹೆಸರಿನಲ್ಲಿ ಕಾರ್ಯಾಚರಿಸುತ್ತಿದೆ. ಐಸಿಸ್‌ ಸಕ್ರಿಯವಾಗಿರುವ ಬಗೆಗೆ ಮಾಹಿತಿಗಳು ಇವೆ. ನಾನು ಹಿಂದೆ ಲವ್‌ಜೆಹಾದ್‌ ಹೆಸರಿನಲ್ಲಿ ಪಿಎಫ್ಐ, ಕೆಎಫ್ಡಿ ನಡೆಸುತ್ತಿರುವ ಅಕ್ರಮಗಳ ಬಗ್ಗೆ ಕೇಂದ್ರ ಗೃಹ ಸಚಿವರಿಗೆ ಮಾಹಿತಿ ನೀಡಿ ರಾಷ್ಟ್ರೀಯ ತನಿಖಾ ದಳದ ಕಚೇರಿಯನ್ನು ತೆರೆಯಲು ಮನವಿ ಮಾಡಿದ್ದೆ ಎಂದರು. 

ದಾರಿತಪ್ಪಿಸುವ ಹೇಳಿಕೆ: ಯು.ಟಿ. ಖಾದರ್‌ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಂಸದೆ, ಕೆಎಫ್ಡಿ, ಪಿಎಫ್ಐ ಸಂಪರ್ಕವಿರುವುದು ಕಾಂಗ್ರೆಸ್‌ನವರಿಗೆ, ಬಿಜೆಪಿ ನಾಯಕರಿಗಲ್ಲ. ಇದು ಖಾದರ್‌ ಅವರ ದಾರಿ ತಪ್ಪಿಸುವ ಹೇಳಿಕೆ. ಕಾಂಗ್ರೆಸ್‌ ಮುಖಂಡರು ಸಚಿವ ಸಂಪುಟದೆದುರು ಇವರ ಮೇಲೆ ಇದ್ದ ಪ್ರಕರಣಗಳನ್ನು ಹಿಂಪಡೆಯಲು ಒತ್ತಡ ತಂದ ಕಾರಣ ಈಗ ಹಲವು ಹಿಂದೂ ಮುಖಂಡರ ಕೊಲೆ ನಡೆಯಿತು ಎಂದರು. 

ಪರ್ಕಳ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಹಾಳಾದ ಭಾಗವನ್ನು ದುರಸ್ತಿ ಮಾಡುವ ಕಾಮಗಾರಿ ಆರಂಭಗೊಂಡಿದೆ ಎಂದರು.

ಟಾಪ್ ನ್ಯೂಸ್

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.