ಉಲ್ಲಾಳದಲ್ಲಿ ಜುಬೈರ್ ಹತ್ಯೆ : ಖಾದರ್ ರಾಜೀನಾಮೆಗೆ ಬಿಜೆಪಿ ಆಗ್ರಹ
Team Udayavani, Oct 6, 2017, 9:45 AM IST
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದಲ್ಲಿ ಸಾರ್ವಜನಿಕರ ಎದುರೇ ಬಿಜೆಪಿ ಕಾರ್ಯಕರ್ತ ಮಹಮ್ಮದ್ ಜುಬೈರ್‌ನನ್ನು ಹತ್ಯೆ ಮಾಡಿದ ಪ್ರಕರಣದ ನೈತಿಕ ಹೊಣೆ ಹೊತ್ತು ಕ್ಷೇತ್ರದ ಶಾಸಕರೂ ಆಗಿರುವ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ. ಖಾದರ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಪತ್ರಕರ್ತರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ವಕ್ತಾರ ಗೋ. ಮಧುಸೂಧನ್ ಮತ್ತು ಸಹ ವಕ್ತಾರ ಅನ್ವರ್ ಮಾಣಿಪ್ಪಾಡಿ, ದಕ್ಷಿಣ ಕನ್ನಡದಲ್ಲಿ ನಡೆಯುತ್ತಿರುವ ರಾಷ್ಟ್ರವಾದಿ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಸರಣಿಯಲ್ಲಿ ಬುಧವಾರ ನಡೆದಿರುವ ಹತ್ಯೆ ಕಳೆದ ನಾಲ್ಕು ವರ್ಷಗಳಲ್ಲಿ 13ನೆಯದ್ದಾಗಿದೆ. ಜುಬೈರ್ ಹತ್ಯೆಯಲ್ಲಿ ಯುವ ಕಾಂಗ್ರೆಸ್ ಮುಖಂಡ ಹಾಗೂ ಸಚಿವ ಖಾದರ್ ಅವರ ಆಪ್ತ ಇಲಿಯಾಸ್ ಅವರ ಪಾತ್ರವಿದೆ ಎಂದು ಆರೋಪಿಸಿದ ಅವರು, ಈ ಹಿನ್ನೆಲೆಯಲ್ಲಿ ಖಾದರ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಬುಧವಾರ ದುಷ್ಕರ್ಮಿಗಳ ಗುಂಪೊಂದು ಜುಬೈರ್ ನನ್ನು ಅಟ್ಟಾಡಿಸಿ ಚಾಕುಗಳಿಂದ ಇರಿದು ಹತ್ಯೆ ಮಾಡಿದ್ದಾರೆ. ಸ್ಥಳೀಯ ಮಸೀದಿಯೊಂದರ ಸಿಸಿ ಟಿವಿಯಲ್ಲಿ ಸೆರೆಯಾಗಿರುವ ಈ ಹತ್ಯೆಯ ದೃಶ್ಯದಲ್ಲಿ ಕೇಳಿಬರುತ್ತಿರುವ ಧ್ವನಿಯಿಂದ ಇಲಿಯಾಸ್ ಪಾತ್ರ ಇರುವುದು ದೃಢಪಡುತ್ತದೆ ಎಂದು ಹೇಳಿದರು.
ಎನ್‌ಐಎ ತನಿಖೆಗೆ ಆಗ್ರಹ
ಹತ್ಯೆಯಲ್ಲಿ ಶಾಮೀಲಾಗಿರುವವರ ಅಕ್ರಮ ಚಟುವಟಿಕೆಗಳ ಬಗ್ಗೆ (ಡ್ರಗ್ ಮಾಫಿಯಾ) ಜುಬೈರ್ ಪೊಲೀಸರಿಗೆ ದೂರು ನೀಡಿದ್ದರು. ಈ ಕಾರಣದಿಂದ ಬಂಧನಕ್ಕೊಳಗಾಗಿ ಜೈಲುವಾಸ ಅನುಭವಿಸಿದವರೇ ಕೆಲವು ಸಮಾಜ ಬಾಹಿರ ಶಕ್ತಿಗಳೊಂದಿಗೆ ಕೈಜೋಡಿಸಿ ಈ ಕೃತ್ಯ ಎಸಗಿರುವ ಅನುಮಾನವಿದೆ. ಆದ್ದರಿಂದ ಈ ಪ್ರಕರಣದ ಕುರಿತು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಮೂಲಕ ತನಿಖೆ ನಡೆಸಬೇಕು. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯಕ್ಕೂ ಮನವಿ ಮಾಡಲಾಗುವುದು. ಸಮಾಜದ್ರೋಹಿ ಸಂಘಟನೆಗಳನ್ನು ಮಟ್ಟ ಹಾಕಲು ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾದಳದ ಕಚೇರಿ ತೆರೆಯುವಂತೆ ಕೋರಲಾಗುವುದು ಎಂದು ಗೋ. ಮಧುಸೂಧನ್ ಮತ್ತು ಅನ್ವರ್ ಮಾಣಿಪ್ಪಾಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.