10ರಂದು ಮಲ್ಲಿಕಾರ್ಜುನಪ್ಪ 70 ಅಭಿನಂದನೆ ಕಾರ್ಯಕ್ರಮ
Team Udayavani, Oct 6, 2017, 11:43 AM IST
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಗೌರವ ಕೋಶಾದ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ಅವರಿಗೆ 70 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಕಾರ್ಯಕರ್ತರ ಬಳಗದಿಂದ ಅ.10ರಂದು ಪಿ.ಮಲ್ಲಿಕಾರ್ಜುನಪ್ಪ ಅಭಿನಂದನೆ ಮತ್ತು “ನಿರಾಳರಾಗ’ ಕೃತಿ ಬಿಡುಗಡೆ ಸಮಾರಂಭ ಆಯೋಜಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ಅಂದು ಸಂಜೆ 5.30ಕ್ಕೆ ಸಾಹಿತ್ಯ ಪರಿಷತ್‌ನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಆಧ್ಯಕ್ಷ ಡಾ.ಸಿದ್ದಲಿಂಗಯ್ಯ ಅವರು ಮಲ್ಲಿಕಾರ್ಜುನಪ್ಪ ಅವರನ್ನು ಅಭಿನಂದಿಸಲಿದ್ದಾರೆ. ಇದೇ ವೇಳೆ ಮಲ್ಲಿಕಾರ್ಜುನಪ್ಪ ಅವರ ಸಮಗ್ರ ಸಾಹಿತ್ಯ ಕುರಿತು ಡಾ.ಚಿತ್ತಯ್ಯ ಪೂಜಾರ್ ಅವರು ಸಂಪಾದಿಸಿರುವ ‘ನಿರಾಳರಾಗ’ ಕೃತಿ ಲೋಕಾರ್ಪಣೆ ಮಾಡಲಾಗುವುದು.
ಮೂಲತಃ ಮಂಡ್ಯ ಜಿಲ್ಲೆ ಮಲವಳ್ಳಿ ತಾಲೂಕು ಕಿರುಗಾವಲಿನ ನಾಗಮ್ಮ-ಪುಟ್ಟಮಲ್ಲಪ್ಪ ದಂಪತಿ ಹಿರಿಯ ಪುತ್ರ ಮಲ್ಲಿಕಾರ್ಜುನಪ್ಪ ಅವರು 400ಕ್ಕೂ ಹೆಚ್ಚು ಕತೆಗಳನ್ನು ರಚಿಸಿದ್ದಾರೆ. ಜಿ.ನಾರಾಯಣರ ನೇತೃತ್ವದಲ್ಲಿ ಕನ್ನಡ ಪರಿಚಾರಿಕೆಯನ್ನು ಆರಂಭಿಸಿ ಅದನ್ನು ಇಂದಿಗೂ ಪರಿಪಾಲಿಸಿಕೊಂಡು ಬಂದಿದ್ದಾರೆ. ಇದುವರೆಗೆ ಅವರ 14 ಕವನ ಸಂಕಲನಗಳು ಪ್ರಕಟವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.