‘ವಾಲ್ಮೀಕಿಯಿಂದ ರಾಮರಾಜ್ಯದ ಪರಿಚಯ’


Team Udayavani, Oct 6, 2017, 2:04 PM IST

6-Mng-8.jpg

ಪುತ್ತೂರು: ಜಗತ್ತು ಕಂಡ ಅತ್ಯಂತ ಶ್ರೇಷ್ಠ ರಾಜ್ಯ ರಾಮರಾಜ್ಯ. ಇಂತಹ ಮಾದರಿಯನ್ನು ರಾಮಾಯಣದ ಮೂಲಕ ಪರಿಚಯಿಸಿದ ವಾಲ್ಮೀಕಿ ಮಹರ್ಷಿ ಎಂದಿಗೂ ಸ್ಮರಣೀಯರು ಎಂದು ಅಂಬಿಕಾ ವಿದ್ಯಾಲಯದ ಆಡಳಿತ ನಿರ್ದೇಶಕ, ನಿವೃತ್ತ ಪ್ರಾಧ್ಯಾಪಕ ಸುರೇಶ್‌ ಶೆಟ್ಟಿ ಹೇಳಿದರು.

ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಗುರುವಾರ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ವಾಲ್ಮೀಕಿ ಸಂಸ್ಮರಣೆ ಮಾಡಿದರು.

24 ಶ್ಲೋಕಗಳ ಸಹಿತವಾದ ವಾಲ್ಮೀಕಿ ರಾಮಾಯಣ ವೈಕುಂಠವೇ ಭೂಮಿಗೆ ಬಂದ ಕಥೆ. ಇಲ್ಲಿ ಜೀವನ ಪಾಠದ ಎಲ್ಲ ಅಂಶಗಳನ್ನು ಕಾಣಬಹುದು. ವಿದ್ಯೆ, ನಡತೆ ಜತೆಗೆ ವೇದ ವಿದ್ಯೆಗಳ ಪರಿಣತಿಯಿಂದ ಬ್ರಾಹ್ಮಣತ್ವವನ್ನು ತನ್ನದಾಗಿಸಿಕೊಳ್ಳಬಹುದೆಂಬುದನ್ನು ಸಾಬೀತುಪಡಿಸಿದ ವಾಲ್ಮೀಕಿ ಜೀವನ ಎಲ್ಲರಿಗೂ ಮಾದರಿ ಎಂದರು.

ಮನುಷ್ಯ ಧರ್ಮ
ಬದುಕಿನ ಉತ್ತಮವಾದ ದಾರಿ, ಸದ್ಗುಣಗಳು ಮಾತ್ರ ಸಮಾಜದ ಮೆಚ್ಚುಗೆಯನ್ನು ಪಡೆಯಬಹುದು. ಧರ್ಮ ನಿಷ್ಠರು, ದುರ್ಬಲರ ಪರವಾಗಿ ನಿಲ್ಲುವುದು ಮನುಷ್ಯ ಧರ್ಮ ಎಂಬುದನ್ನು ವಾಲ್ಮೀಕಿ ರಾಮಾಯಣ ಸಾರಿ ಹೇಳಿದೆ. ಈ ಕಾರಣದಿಂದ ಅಯೋಧ್ಯೆ, ಕಿಷ್ಕಿಂಧೆ, ಲಂಕೆಯ ಮೂಲಕ ಉತ್ತಮ ಹಾಗೂ ಕೆಟ್ಟ ಸಂಸ್ಕೃತಿಯ ವಿಭಾಗವನ್ನು ವಾಲ್ಮೀಕಿಯವರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಕರ್ಮದಿಂದ ವ್ಯಕ್ತಿತ್ವ
ಮುಖ್ಯ ಅತಿಥಿಯಾಗಿದ್ದ ನಗರ ಯೋಜನ ಪ್ರಾಧಿಕಾರದ ಅಧ್ಯಕ್ಷ ಪ್ರಸಾದ್‌ ಕೌಶಲ್‌ ಶೆಟ್ಟಿ ಮಾತನಾಡಿ, ಶೂನ್ಯದಿಂದ
ಆಧ್ಯಾತ್ಮಿಕ ಶಿಖರಕ್ಕೆ ಏರಿ ಸಮಾಜಕ್ಕೆ ಮಾದರಿಯಾದ ವಾಲ್ಮೀಕಿಯವರು ಜನ್ಮದಿಂದ ಅಲ್ಲ, ಕರ್ಮದಿಂದ ವ್ಯಕ್ತಿತ್ವ
ಎನ್ನುವುದನ್ನು ತೋರಿಸಿಕೊಟ್ಟ ಮಹಾನ್‌ ಸಾಧಕ ಎಂದು ಹೇಳಿದರು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಆಧ್ಯಕ್ಷ ತಹಶೀಲ್ದಾರ್‌ ಅನಂತಶಂಕರ್‌ ಬಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಾಂಸ್ಕೃತಿಕ ಸಮಿತಿ ಸಂಚಾಲಕಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ಡಿ.ಎನ್‌. ಉಪಸ್ಥಿತರಿದ್ದರು.

ಶಾಸಕಿ ಶಕುಂತಳಾ ಟಿ. ಶೆಟ್ಟಿ , ಸಹಾಯಕ ಕಮಿಷನರ್‌ ರಘುನಂದಮೂರ್ತಿ ಅವರ ಅನುಪಸ್ಥಿತಿಯಲ್ಲಿ ಈ ಸರಕಾರಿ ಕಾರ್ಯಕ್ರಮ ನಡೆಯಿತು. ತಾ.ಪಂ. ಸದಸ್ಯರು, ಸಮಾಜ ಕಲ್ಯಾಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಜಗದೀಶ್‌ ಎಸ್‌. ಸ್ವಾಗತಿಸಿ, ಉಪತಹಶೀಲ್ದಾರ್‌ ಶ್ರೀಧರ್‌ ಕೋಡಿಜಾಲ್‌ ವಂದಿಸಿದರು. ತಾ. ಕಚೇರಿಯ ನಾಗೇಶ್‌ ಕಾರ್ಯಕ್ರಮ ನಿರ್ವಹಿಸಿದರು.

ಜೀವನ ಮೌಲ್ಯ
ಅಧ್ಯಕ್ಷತೆ ವಹಿಸಿದ ಪುತ್ತೂರು ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ ಮಾತನಾಡಿ, ಹಿಂದೂ ಧರ್ಮೀಯರಿಗೆ ಜೀವನ ಮೌಲ್ಯಗಳನ್ನು ಬೋಧಿಸಿದ ಮಹಾನ್‌ ಕಾವ್ಯ ರಾಮಾಯಣವನ್ನು ರಚಿಸುವ ಮೂಲಕ ಮಹರ್ಷಿ ವಾಲ್ಮೀಕಿ ಅವರು ಹಾಕಿಕೊಟ್ಟ ಅಡಿಗಲ್ಲು ನಿರಂತರ ಪಾಲನೆಯಾಗಬೇಕು. ವಾಲ್ಮೀಕಿ ಅವರ ಮಾನವೀಯ ಧರ್ಮದ ಜೀವನದಿಂದ ರಾಮರಾಜ್ಯ ನಿರ್ಮಾಣ ಸಾಧ್ಯ ಎಂದರು.

ಟಾಪ್ ನ್ಯೂಸ್

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.