ಸಾಮಾಜಿಕ ಜಾಲತಾಣ ಕಡ್ಡಾಯವಾಗಿ ಬಳಸಿ..
Team Udayavani, Oct 7, 2017, 9:11 AM IST
ಬೆಂಗಳೂರು: ಕಾಂಗ್ರೆಸ್ನ ಎಲ್ಲ ನಾಯಕರು ಕಡ್ಡಾಯ ವಾಗಿ ಸಾಮಾಜಿಕ ಜಾಲತಾಣ ಬಳಸುವಂತೆ ಕಾಂಗ್ರೆಸ್
ಉಸ್ತುವಾರಿ ವೇಣುಗೋಪಾಲ ಸೂಚಿಸಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಸೋಸಿಯಲ್ ಮಿಡಿಯಾ ಬಳಸುವ ಶಾಸಕರ ಪಟ್ಟಿ ಪಡೆದ ವೇಣುಗೋಪಾಲ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಬಳಕೆ ಮಾಡದವರಿಗೆ ತಕ್ಷಣ ಸಾಮಾಜಿಕ ಜಾಲತಾಣಗಳನ್ನು ಬಳಸುವಂತೆ ಸೂಚಿಸಿದ್ದಾರೆ.
ಉಮಾಶ್ರೀಗೆ ತರಾಟೆ: ಸಚಿವೆ ಉಮಾಶ್ರೀ ಅವರನ್ನು ನೇರವಾಗಿ ಪ್ರಶ್ನಿಸಿರುವ ವೇಣುಗೋಪಾಲ, “ಸಾಮಾಜಿಕ ಜಾಲತಾಣದಲ್ಲಿ ನಿಮ್ಮ ಯಾವುದೇ ಪೋಸ್ಟ್ಗಳು ಕಾಣುವುದಿಲ್ಲ. ನೀವು ಸಚಿವರಾಗಿ ಸಾಮಾಜಿಕ ಜಾಲತಾಣದ ಮೂಲಕ ಇಲಾಖೆಯ ಸಾಧನೆಗಳ ಜೊತೆಗೆ, ಪಕ್ಷವನ್ನು ಸಮರ್ಥಿಸಿಕೊಳ್ಳಬೇಕು’ ಎಂದು ಸೂಚನೆ ನೀಡಿದರು ಎಂದು ತಿಳಿದು ಬಂದಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಠೇವಣಿ ಕಳೆದುಕೊಂಡವರನ್ನು ಸಭೆಗೆ ಕರೆದು ಕಡಿಮೆ ಅಂತರದಿಂದ ಸೋತವರಿಗೆ ಅವಮಾನ ಮಾಡಬೇಡಿ ಎಂದು ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಅವರು ಸಭೆಯಲ್ಲಿ ಹೇಳಿದರು. ಅತಿ ಕಡಿಮೆ ಮತ ಪಡೆದ ಅಭ್ಯರ್ಥಿಗಳ ಬದಲು ಬೇರೆಯವರಿಗೆ ಅವಕಾಶ ಮಾಡಿಕೊಡುವಂತೆ ಅವರು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಸಚಿವರಾದ ಎಚ್.ಎಂ. ರೇವಣ್ಣ, ಆರ್.ಬಿ.ತಿಮ್ಮಾಪುರ, ಗೀತಾ ಮಹದೇವ ಪ್ರಸಾದ್ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರನ್ನು ಸನ್ಮಾನಿಸಲಾಯಿತು.
ದೂರು ನೀಡಲು ಅವಕಾಶ ನೀಡದ ವೇಣು: ಅನೇಕ ಶಾಸಕರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಗಳಲ್ಲಿ ಜಿಲ್ಲಾ
ಉಸ್ತುವಾರಿ ಸಚಿವರುಗಳು ಸರಿಯಾಗಿ ಸ್ಪಂದಿಸದಿರುವ ಬಗ್ಗೆ ಸಾಕಷ್ಟು ದೂರು ನೀಡಲು ಮುಂದಾಗಿದ್ದರು ಎನ್ನಲಾಗಿದೆ. ಆದರೆ, ಸಭೆಯ ಆರಂಭದಲ್ಲೇ ಯಾವುದೇ ದೂರು ನೀಡಲು ಅವಕಾಶ ಇಲ್ಲ ಎಂದು ವೇಣುಗೋಪಾಲ ತಾಕೀತು ಮಾಡಿದ್ದಾರೆ.
ಶಾಸಕರು ಮತ್ತು ಸಚಿವರು ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗುವಂತೆ ವೇಣುಗೋಪಾಲ ಅವರು ಸೂಚನೆ ನೀಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರೆನ್ನುವ ಬಗ್ಗೆ ಯಾವುದೇ ಗೊಂದಲ ಇಲ್ಲ. ಈ ಬಗ್ಗೆ ಶಾಸಕಾಂಗ ಸಭೆ ಮತ್ತು ಹೈಕಮಾಂಡ್ ತೀರ್ಮಾನ ಮಾಡುತ್ತದೆ.
●ಡಾ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Renukaswamy case: ದರ್ಶನ್ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.