![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 7, 2017, 9:49 AM IST
ಬೆಂಗಳೂರು: “ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಚಿಂತನೆ ಸ್ವಾಗತಾರ್ಹ’ ಎಂದು ರಾಜ್ಯ ಬಿಜೆಪಿ ವಕ್ತಾರ ಎಸ್.ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಲೋಕಸಭೆ ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಸಂಬಂಧ ಕೇಂದ್ರ ಸರ್ಕಾರ ಹಾಗೂ ಎಲ್ಲ ರಾಜಕೀಯ ಪಕ್ಷಗಳು ಗಂಭೀರವಾಗಿ ಚರ್ಚೆ ನಡೆಸಿ, ಒಮ್ಮತದ ತೀರ್ಮಾನಕ್ಕೆ ಬರುವಂತಾಗಬೇಕು’ ಎಂದು ಹೇಳಿದರು. 1967ರ ವರೆಗೂ ಚುನಾವಣೆಗಳು ಒಟ್ಟಾಗಿಯೇ ನಡೆಯುತ್ತಿದ್ದವು. ನಂತರ ಮಧ್ಯಂತರ ಚುನಾವಣೆಗಳು ಆರಂಭವಾದವು. ಕರ್ನಾಟಕದಲ್ಲಿ 1999 ಹಾಗೂ 2004ರಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ಏಕಕಾಲದಲ್ಲಿ ನಡೆದಿದೆ. ಮೊದಲ ಹಂತದಲ್ಲಿ ಲೋಕಸಭಾ ಚುನಾವಣೆಗೆ ಸಮೀಪದಲ್ಲಿ ಅವಧಿ ಅಂತ್ಯಗೊಳ್ಳುವ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಒಟ್ಟಾಗಿ ಮಾಡಬಹುದು ಎಂದು ಸಲಹೆ ನೀಡಿದರು. ದೇಶದಲ್ಲಿ ಚುನಾವಣಾ ಸುಧಾರಣೆಗೆ ಅನೇಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ಮಾಡುವುದರಿಂದ ಇನ್ನಷ್ಟು ಸುಧಾರಣೆ ತರಲು ಸಾಧ್ಯವಿದೆಎಂದರು.
You seem to have an Ad Blocker on.
To continue reading, please turn it off or whitelist Udayavani.