ಹಳೇ ದಾಖಲೆ ಬಿಡುಗಡೆ ಮಾಡಿ ಪೇಚಿಗೆ ಸಿಲುಕಿದ ಈಶ್ವರಪ್ಪ, ಪುಟ್ಟಸ್ವಾಮಿ!
Team Udayavani, Oct 7, 2017, 11:42 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರವಾಗಿ ಭೂಮಿ ಮಂಜೂರು ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆಪ್ತ, ವಿಧಾನಪರಿಷತ್ ಸದಸ್ಯ ಬಿಜೆ ಪುಟ್ಟಸ್ವಾಮಿ ಮತ್ತೆ ಹಳೆ ದಾಖಲೆ ಬಿಡುಗಡೆ ಮಾಡಿ ಪೇಚಿಗೆ ಸಿಲುಕಿದ ಪ್ರಸಂಗ ನಡೆದಿದೆ.
ಶನಿವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಯತೀಂದ್ರ ಸಿದ್ದರಾಮಯ್ಯ ಅವರ ಶಾಂತಲಾ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರವಾಗಿ ಭೂಮಿ ಮಂಜೂರು ಮಾಡಿರುವ ಕುರಿತು ದಾಖಲೆಯನ್ನು ಬಿಡುಗಡೆಗೊಳಿಸಿದರು. ಆದರೆ ಅದು ಕಳೆದ ಒಂದೂವರೆ ವರ್ಷದ ಹಳೆಯ ದಾಖಲೆ ಎಂಬುದು ಗಮನಕ್ಕೆ ಬರುತ್ತಿದ್ದಂತೆಯೇ ಪೇಚಿಗೆ ಸಿಲುಕಿದ ಘಟನೆ ನಡೆಯಿತು.
ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಕೆಎಸ್ ಈಶ್ವರಪ್ಪ ಅವರು, ಹಳೇ ದಾಖಲೆ ಎಂದು ತಿಳಿಯುತ್ತಿದ್ದಂತೆಯೇ ಮೊಬೈಲ್ ನಲ್ಲಿ ಮಾತನಾಡುವಂತೆ ಹೊರಗೆ ಎದ್ದು ಹೋಗಲು ಯತ್ನಿಸಿದಾಗ, ಪುಟ್ಟಸ್ವಾಮಿ ಅವರು ಕೂತ್ಕೊಳ್ಳಿ ಸ್ವಾಮಿ ಎಲ್ಲಿಗೆ ಹೋಗ್ತೀರಾ ಎಂದು ಕೂರಿಸಿದರು.
ಇದು ಹಳೆಯ ದಾಖಲೆಯೋ, ಹೊಸ ದಾಖಲೆಯೋ ಎಂಬುದು ಮುಖ್ಯವಲ್ಲ ಎಂದು ಕೆಎಸ್ ಈಶ್ವರಪ್ಪ ಸಮಜಾಯಿಷಿ ನೀಡಿದ ಪ್ರಸಂಗ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.