ಸಿಸಿಬಿ ಮುಂದೆ ಗೀತಾವಿಷ್ಣು ಹಾಜರು
Team Udayavani, Oct 7, 2017, 12:09 PM IST
ಬೆಂಗಳೂರು: ಅಕ್ರಮವಾಗಿ ಮಾದಕ ವಸ್ತು ಸಂಗ್ರಹ ಹಾಗೂ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಟಿಡಿ ಮಾಜಿ ಅಧ್ಯಕ್ಷ ದಿ.ಆದಿಕೇಶವಲು ಮೊಮ್ಮಗ ಗೀತಾವಿಷ್ಣು ಶುಕ್ರವಾರವು ಸಿಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಗೀತಾವಿಷ್ಣು ಮಾತ್ರವಲ್ಲದೇ ಈತನ ಸ್ನೇಹಿತರಾದ ನಟ ದೇವರಾಜ್ ಎರಡನೇ ಪುತ್ರ ಪ್ರಣಾಮ್, ವಿನೋದ್, ಫೈಜಲ್ ವಿಚಾರಣೆಗೆ ಬಂದಿದ್ದು, ಮೂವರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಯಿತು. ಈ ಪೈಕಿ ವಿನೋದ್ ಹೇಳಿಕೆ ದಾಖಲಿಸುವ ವೇಳೆ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಷ್ಣು ಪರಾರಿಯಾಗಲು ನೆರವಾಗಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ.
ಕಾರಿನಲ್ಲಿ ಗಾಂಜಾ ಪತ್ತೆಯಾದ ಹಿನ್ನೆಲೆ ಪೊಲೀಸರು ಬಂಧಿಸುವ ಸಾಧ್ಯತೆಯಿದೆ. ನಾಲ್ಕೈದು ದಿನಗಳ ಕಾಲ ತಲೆಮರೆಸಿಕೊಂಡು ನಂತರ ಜಾಮೀನು ಪಡೆಯುವಂತೆ ಸಲಹೆ ನೀಡಿದ್ದೇನೆ. ಘಟನೆ ನಡೆದ ದಿನ ಎಲ್ಲ ಸ್ನೇಹಿತರು ಪಾರ್ಟಿ ಮಾಡಿದ್ದೇವು. ನಂತರ ಎಲ್ಲರೂ ಮನೆಗಳಿಗೆ ತೆರಳಿದರು.
ಆದರೆ, ರಸ್ತೆ ಅಪಘಾತವಾಗುವ ಸಂದರ್ಭದಲ್ಲಿ ನಾವು ಸ್ಥಳದಲ್ಲಿ ಇರಲಿಲ್ಲ ಎಂದು ಹೇಳಿಕೆ ನೀಡಿದ್ದಾನೆ. ಇನ್ನು ಸ್ನೇಹಿತರು ನೀಡಿರುವ ಹೇಳಿಕೆಯನ್ನು ವಿಷ್ಣು ಕೂಡ ಒಪ್ಪಿಕೊಂಡಿದ್ದಾನೆ. ಹೀಗಾಗಿ ಶನಿವಾರ ಕೂಡ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದೇವೆ ಎಂದು ಸಿಸಿಬಿಯ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.