ಪ್ರತ್ಯೇಕತಾವಾದಿ, ನಕ್ಸಲರಿಂದ ಮಕ್ಕಳ ನೇಮಕಾತಿಗೆ ಕಳವಳ
Team Udayavani, Oct 8, 2017, 6:35 AM IST
ವಿಶ್ವಸಂಸ್ಥೆ: ಭಾರತದಲ್ಲಿ ಪ್ರತ್ಯೇಕತಾವಾದಿಗಳು ಮತ್ತು ನಕ್ಸಲರು ಮಕ್ಕಳನ್ನು ತಮ್ಮ ಸಂಘಟನೆಗಳಿಗೆ ನೇಮಕ ಮಾಡಿಕೊಳ್ಳುತ್ತಿರುವ ಕುರಿತು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಗುಟೆರಸ್ ಆತಂಕ ವ್ಯಕ್ತಪಡಿಸಿದ್ದಾರೆ.
ಸಶಸ್ತ್ರ ಬಂಡುಕೋರರು ಮತ್ತು ಸರ್ಕಾರದ ನಡುವೆ ಹಿಂಸಾಚಾರದಂಥ ಘಟನೆಗಳು ನಡೆದಾಗಲೆಲ್ಲಾ ಮಕ್ಕಳು ಬಲಿಪಶುಗಳಾಗುತ್ತಾರೆ. ಮುಖ್ಯವಾಗಿ ಇಂಥ ಘಟನೆಗಳು ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿವೆ ಎಂದಿದ್ದಾರೆ. ಸಶಸ್ತ್ರ ಗುಂಪುಗಳು ಮಕ್ಕಳನ್ನು ನೇಮಕ ಮಾಡಿಕೊಳ್ಳುವ ಮತ್ತು ಹಿಂಸಾಚಾರದಲ್ಲಿ ಬಳಸಿಕೊಳ್ಳುವ ಕುರಿತು ನಮಗೆ ಭಾರತದಿಂದ ವರದಿಗಳು ಬರುತ್ತಲೇ ಇವೆ ಎಂದು “ಮಕ್ಕಳ ವಿರುದ್ಧ ಶಸ್ತ್ರಾಸ್ತ್ರ ಹಿಂಸಾಚಾರ’ ಕುರಿತ ವಾರ್ಷಿಕ ವರದಿಯಲ್ಲಿ ಅವರು ಹೇಳಿದ್ದಾರೆ. ಕಣಿವೆ ರಾಜ್ಯದಲ್ಲಿ ಸಶಸ್ತ್ರ ಗುಂಪುಗಳು ಕನಿಷ್ಠ 30 ಶಾಲೆಗಳನ್ನು ಸುಟ್ಟು ಹಾಕಿವೆ. ಛತ್ತೀಸ್‌ಗಢದಂಥ ರಾಜ್ಯ ಗಳಲ್ಲಿ ಹಲವು ಶಾಲೆಗಳನ್ನು ನಕ್ಸಲರೇ ನಿರ್ವಹಿಸುತ್ತಿದ್ದಾರೆ. ಪಠ್ಯಕ್ರಮಗಳಲ್ಲಿ ಸಮರಕಲೆಗಳನ್ನು ಸೇರಿಸಲಾಗಿದೆ. ಇದು ಕಳವಳಕಾರಿ ಸಂಗತಿ ಎಂದಿದ್ದಾರೆ ಗುಟೆರಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.