ಡಾ.ರಘುರಾಮ್ ರಾಜನ್ಗೆ ನೊಬೆಲ್ ?
Team Udayavani, Oct 8, 2017, 6:10 AM IST
ನವದೆಹಲಿ: ಪ್ರಸಕ್ತ ಸಾಲಿನ ಅರ್ಥಶಾಸ್ತ್ರ ನೊಬೆಲ್ಗೆ ಭಾರತೀಯ ರಿಸರ್ವ್ ಬ್ಯಾಂಕ್ನ ಮಾಜಿ ಗವರ್ನರ್ ಡಾ.ರಘುರಾಮ್ ರಾಜನ್ ಪಾತ್ರರಾಗಲಿದ್ದಾರೆಯೇ? ನೊಬೆಲ್ ಸಂಭಾವ್ಯರ ಪಟ್ಟಿಯಲ್ಲಿ ವಿಶ್ವದ 6 ಮಂದಿ ಹಣಕಾಸು ಕ್ಷೇತ್ರದ ತಜ್ಞರ ಪೈಕಿ ರಾಜನ್ ಹೆಸರೂ ಇದೆ ಎಂದು ಅಮೆರಿಕದ “ದ ವಾಲ್ ಸ್ಟ್ರೀಟ್ ಜರ್ನಲ್’ ವರದಿ ಮಾಡಿದೆ.
ಕಾರ್ಪೊರೇಟ್ ಕ್ಷೇತ್ರದಲ್ಲಿ ಹಣಕಾಸು ಹರಿವಿನ ಬಗ್ಗೆ ಪ್ರಮುಖ ನಿರ್ಧಾರ ಕೈಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕೆ ಪ್ರತಿಯಾಗಿ ರಾಜನ್ ಅವರನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ವರದಿ ತಿಳಿಸಿದೆ.
2008ರಲ್ಲಿ ಅಮೆರಿಕ ಮತ್ತು ವಿಶ್ವಕ್ಕೆ ಆರ್ಥಿಕ ಹಿಂಜರಿತ ಕಾಡಲಿದೆ ಎಂದು ಡಾ.ರಾಜನ್ 2005ರಲ್ಲಿ ಎಚ್ಚರಿಕೆ ನೀಡಿದ್ದರು. ಆದರೆ, ಆ ಸಂದರ್ಭದಲ್ಲಿ ಅವರ ಮಾತುಗಳನ್ನು ಲಘುವಾಗಿ ಪರಿಗಣಿಸಲಾಗಿತ್ತು. ಹಲವರು ಅವರ ಹೇಳಿಕೆ ಕುರಿತು ವ್ಯಂಗ್ಯವಾಡಿದ್ದರು. ಆದರೆ, ರಾಜನ್ ಅವರು ಭವಿಷ್ಯ ನುಡಿದ ಮೂರೇ ವರ್ಷಗಳಲ್ಲಿ ಅಮೆರಿಕವು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿತ್ತು.
ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್)ಯ ಮುಖ್ಯ ಹಣಕಾಸು ತಜ್ಞರಾಗಿ ನೇಮಕವಾದ ಪಾಶ್ಚಿಮಾತ್ಯ ರಾಷ್ಟ್ರದವರಲ್ಲದ ಮತ್ತು 40 ವರ್ಷಕ್ಕಿಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೂ ರಘುರಾಮ್ ರಾಜನ್ ಪಾತ್ರರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.