ಕವಿಸಂ ಕಾರ್ಯ ಚಟುವಟಿಕೆ ಅವಲೋಕನ


Team Udayavani, Oct 8, 2017, 11:42 AM IST

huu3.jpg

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್‌. ಆರ್‌. ವಿಶುಕುಮಾರ ಶನಿವಾರ ಭೇಟಿ ನೀಡಿ ಸಂಘದ ಕಾರ್ಯ ಚಟುವಟಿಕೆ ಅವಲೋಕಿಸಿದರು. ನವೀಕರಣಗೊಂಡ ಸಂಘದ ಪಾರಂಪರಿಕ ಕಟ್ಟಡ, ಗ್ರಂಥಾಲಯ, ರಾ. ಹ. ದೇಶಪಾಂಡೆ ಹಾಗೂ ನಾಡೋಜ ಡಾ| ಪಾಪು ಸಭಾಭವನಗಳನ್ನು ವೀಕ್ಷಿಸಿದರು. 

ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಾಡೋಜ ಡಾ| ಪಾಟೀಲ ಪುಟ್ಟಪ್ಪ ಹಾಗೂ ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿದ ವಿಶುಕುಮಾರ ಅವರಿಗೆ, ಸಂಘದ ಸಿಬ್ಬಂದಿ ನಿವೃತ್ತ ವೇತನ ಹಾಗೂ ಹಂಗಾಮಿ ಸಿಬ್ಬಂದಿ ಕಾಯಮಾತಿ ಕುರಿತು ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಕೊಳ್ಳುವ ಭರವಸೆ ನೀಡಿದರು. 

ಸಂಘದ ಉಪಾಧ್ಯಕ್ಷ ಶಿವಣ್ಣ ಬೆಲ್ಲದ, ಕಾರ್ಯಾಧ್ಯಕ್ಷರಾದ ಡಾ|ಡಿ. ಎಂ. ಹಿರೇಮಠ, ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಸಹ ಕಾರ್ಯದರ್ಶಿ ಶಿವಾನಂದ ಭಾವಿಕಟ್ಟಿ, ಕಾ.ಕಾ. ಸಮಿತಿ ಸದಸ್ಯರಾದ ಬಸವಪ್ರಭು ಹೊಸಕೇರಿ, ಧಾರವಾಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣವರ ಹಾಗೂ ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ ಮತ್ತು ರಂಗನಿರ್ದೇಶಕ ಕೆ. ಜಗುಚಂದ್ರ, ಸಂಘದ ಕಚೇರಿ ಅ ಧೀಕ್ಷಕ ಶಿ. ಮ. ರಾಚಯ್ಯನವರ ಇತರರಿದ್ದರು. 

ಸಾಹಿತಿ ನಾಗಮ್ಮನವರ ಚಿಕಿತ್ಸಾ ವೆಚ್ಚ ಪಾವತಿಗೆ ಕ್ರಮ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ಸಾಹಿತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೋಹನ ನಾಗಮ್ಮನವರ ಚಿಕಿತ್ಸೆಗೆ ಸಂಬಂಧಿಸಿದ ಎಲ್ಲ ವೆಚ್ಚಗಳನ್ನು ತ್ವರಿತವಾಗಿ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎನ್‌.ಆರ್‌. ವಿಶುಕುಮಾರ ಹೇಳಿದರು.

ನಗರದಲ್ಲಿ ಶನಿವಾರ ಸಾಹಿತಿ ಮೋಹನ ನಾಗಮ್ಮನವರ ಅವರ 55ನೇ ಜನ್ಮದಿನದ ಪ್ರಯುಕ್ತ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಶೀಘ್ರವಾಗಿ ಗುಣಮುಖರಾಗಲೆಂದು ಅವರು ಹಾರೈಸಿದರು. ನಾಡು ನುಡಿ, ಗಡಿ ಪ್ರದೇಶ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜನಪರ ರಚನಾತ್ಮಕ ಕಾರ್ಯಗಳಲ್ಲಿ ನಾಗಮ್ಮನವರ ಪಾತ್ರ ಮಹತ್ವದ್ದಾಗಿದೆ.

ಅವರ ಚಿಕಿತ್ಸೆಗೆ ತಗುಲುವ ವೆಚ್ಚವನ್ನು ಸಕಾಲದಲ್ಲಿ ಇಲಾಖೆಯಿಂದ ಪಾವತಿಸಲಾಗುವುದು ಎಂದು ಭರವಸೆ ನೀಡಿದರು. ರಂಗಾಯಣ ಆಡಳಿತಾಧಿಕಾರಿ ಬಸವರಾಜ ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್‌.ಕೆ. ರಂಗಣ್ಣವರ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ ಇದ್ದರು.   

ಟಾಪ್ ನ್ಯೂಸ್

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

2

Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್‌ ಮೂಲಕ ನಕ್ಸಲ್‌ ಸೋಮನ್‌ ವಿಚಾರಣೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.