ಸಹಕಾರಿ ಯೋಜನೆ ಬಡವರಿಗೆ ತಲುಪಿಸಿ: ಸಚಿವ ರಮಾನಾಥ ರೈ
Team Udayavani, Oct 8, 2017, 12:29 PM IST
ಸುಳ್ಯ: ಸರಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಬಡವರಿಗೆ ತಲುಪಿಸುವವರು ಗ್ರಾಮಕರಣಿಕರು. ಅವರು ಬಡವರಿಗೆ ಯಾವುದೇ ತೊಂದರೆ ನೀಡದೆ ಸಮರ್ಪಕವಾಗಿ ನ್ಯಾಯ ಕೊಡುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ
ಕರೆ ನೀಡಿದರು.
ಸುಳ್ಯದ ಕೆವಿಜಿ ಪುರಭವನದಲ್ಲಿ ಶನಿವಾರ ಜರಗಿದ ವಿವಿಧ ಇಲಾಖೆಗಳ ಸವಲತ್ತು ವಿತರಣೆ ಮತ್ತು ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾಗರಿಕ ಸೇವೆ ಕೈಗೊಳ್ಳುವ ಅಭ್ಯರ್ಥಿಗಳು ಹೆಚ್ಚಾಗಿ ಶ್ರೀಮಂತರ ಮಕ್ಕಳು. ಆದರೆ ಗ್ರಾಮ ಕರಣಿಕರು ಹೆಚ್ಚಾಗಿ ಬಡವರ ಮಕ್ಕಳಾಗಿ ಸೇವೆಗೆ ಸೇರ್ಪಡೆಗೊಂಡಿದ್ದಾರೆ. ಹೀಗಾಗಿ ಸರಕಾರದ ವಿವಿಧ ಯೋಜನೆಗಳನ್ನು ಬಡವರಿಗೆ ತಲುಪಿಸುವ ಮೂಲಕ ಬಡವರ ಸೇವೆ ಮಾಡಬೇಕು
ಎಂದರು.
ಸರಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡವರಿಗೆ 94ಸಿ ಮತ್ತು 94ಸಿಸಿ ಯೋಜನೆಯ ಮೂಲಕ ಹಕ್ಕುಪತ್ರ ನೀಡುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿದೆ. ಜಿಲ್ಲೆಯಲ್ಲಿ 1ಲಕ್ಷಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅದೇ ರೀತಿ ಕುಮ್ಕಿ, ರಸ್ತೆ ಮತ್ತು ನದಿ ಪರಂಬೋಕು ಸ್ಥಳದಲ್ಲಿ ಮನೆ ಕಟ್ಟಿಕೊಂಡವರಿಗೂ ಹಕ್ಕುಪತ್ರ ವಿತರಣೆ ನಡೆಯಲಿದೆ. ಆದರೆ ಯಾವುದೇ ಅಧಿಕಾರಿಗಳು ತಕರಾರು ನಡೆಸಿದರೆ ಅಂತವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
MUST WATCH
ಹೊಸ ಸೇರ್ಪಡೆ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.