ಚಿನ್ನಾಭರಣ ಖರೀದಿಗೆ ಶೀಘ್ರ ಹೊಸ ನಿಯಮ
Team Udayavani, Oct 9, 2017, 6:20 AM IST
ಹೊಸದಿಲ್ಲಿ: ಚಿನ್ನ ಮತ್ತು ಇತರ ಅಮೂಲ್ಯ ವಸ್ತುಗಳ ಖರೀದಿ ನಿಯಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಶೀಘ್ರವೇ ಹೊಸ ಮಿತಿ ಹೇರಲಿದೆ. ಹೀಗೆಂದು ಕೇಂದ್ರ ಕಂದಾಯ ಕಾರ್ಯದರ್ಶಿ ಹಸ್ಮುಕ್ ಅಧಿಯಾ ತಿಳಿಸಿದ್ದಾರೆ.
ಚಿನ್ನಾಭರಣ ಖರೀದಿ ವಹಿವಾಟು ವಿವರವನ್ನು ಅಕ್ರಮ ಹಣ ವರ್ಗಾವಣೆ ವ್ಯಾಪ್ತಿಯಲ್ಲಿ ತರದೇ ಇರಲು ಕೇಂದ್ರ ನಿರ್ಧರಿಸಿದೆ. ಶೀಘ್ರದಲ್ಲಿಯೇ ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಲ್ಲಿನ ವ್ಯಾಪಾರೋದ್ದಿಮೆ ಸಮುದಾಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ಬ್ಯಾಂಕ್‌ಗಳಲ್ಲಿ 50 ಸಾವಿರ ರೂ.ಮೇಲ್ಪಟ್ಟ ಹಣಕಾಸು ವಹಿವಾಟು ವಿವರಗಳನ್ನು ನೀಡಬೇಕು. ಬ್ಯಾಂಕ್‌ಗಳ ಮಾದರಿಯಲ್ಲಿಯೇ ಚಿನ್ನ ಖರೀದಿ ವಿವರವನ್ನೂ ನೀಡಬೇಕು ಎಂದು ಆ.23ರಂದು ಆದೇಶ ಹೊರಡಿಸಲಾಗಿತ್ತು.
ಇದೇ ಮೊದಲ ಬಾರಿಗೆ ಚಿನ್ನಾಭರಣ ವ್ಯಾಪಾರಿಗಳನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆ ವ್ಯಾಪ್ತಿಗೆ ತರಲಾಗಿದೆ ಎಂದು ಅಧಿಯಾ ಹೇಳಿದ್ದಾರೆ. ಪರಿಷ್ಕೃತ ನಿಯಮ ಪ್ರಕಾರ, ಈಗ 50 ಸಾವಿರ ರೂ.ಗಳಿಗಿಂತ ಮೇಲ್ಪಟ್ಟ ಚಿನ್ನಾಭರಣ ಖರೀದಿಗೆ ಪ್ಯಾನ್ ನಂಬರ್ ನೀಡಬೇಕಾಗಿಲ್ಲ. 2 ಕೋಟಿ ರೂ.ಗಳಿಂದ ಮೇಲ್ಪಟ್ಟ ಖರೀದಿಗೆ ಮಾತ್ರ ನೀಡಬೇಕು. ಆದರೆ, ಈ ಮಿತಿಯನ್ನು ಸದ್ಯದಲ್ಲೇ ಬದಲಾಯಿಸಲಾಗುವುದು ಎಂದು ಅಧಿಯಾ ಹೇಳಿದ್ದು, ಗುಜರಾತ್ ಚುನಾವಣೆ ಬಳಿಕವೇ ಮಿತಿ ಎಷ್ಟು ಎಂಬುದನ್ನು ಘೋಷಿಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
MUST WATCH
ಹೊಸ ಸೇರ್ಪಡೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.