ಗೋದ್ರಾ ಹತ್ಯಾಕಾಂಡ; 11 ದೋಷಿಗಳ ಮರಣದಂಡನೆಗೆ ಗುಜರಾತ್ ಹೈಕೋರ್ಟ್ ತಡೆ
Team Udayavani, Oct 9, 2017, 11:24 AM IST
ಅಹಮದಾಬಾದ್: 2002ರ ಫೆಬ್ರುವರಿ 27ರಂದು ನಡೆದಿದ್ದ ಗೋದ್ರಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 11 ದೋಷಿಗಳ ಗಲ್ಲುಶಿಕ್ಷೆಗೆ ಗುಜರಾತ್ ಹೈಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದ್ದು, ಅಪರಾಧಿಗಳ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸಿ ಆದೇಶ ನೀಡಿದೆ.
ಗೋದ್ರಾ ಸಾಬರಮತಿ ಎಕ್ಸ್ ಪ್ರೆಸ್ ರೈಲು ಬೋಗಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 11 ದೋಷಿಗಳ ಶಿಕ್ಷೆಯನ್ನು ಎತ್ತಿಹಿಡಿದಿರುವ ಗುಜರಾತ್ ಹೈಕೋರ್ಟ್, 11 ಆರೋಪಿಗಳಿಗೆ ವಿಧಿಸಲ್ಪಟ್ಟಿದ್ದ ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸುವ ಮೂಲಕ ರಿಲೀಫ್ ನೀಡಿದೆ.
2002ರ ಫೆಬ್ರುವರಿ 27ರಂದು ಸಾಬರಮತಿ ಎಕ್ಸ್ ಪ್ರೆಸ್ ರೈಲಿನ ಎಸ್ 6 ಬೋಗಿಗೆ ಬೆಂಕಿ ಹಚ್ಚಲಾಗಿತ್ತು, ಘಟನೆಯಲ್ಲಿ 59 ಕರಸೇವಕರು ಸಜೀವ ದಹನವಾಗಿದ್ದರು. ಗೋದ್ರಾ ಹತ್ಯಾಕಾಂಡ ಪ್ರಕರಣದಲ್ಲಿ ಕೋರ್ಟ್ 11 ದೋಷಿಗಳಿಗೆ ಮರಣದಂಡನೆ, 20 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ, 63 ಮಂದಿಯನ್ನು ಖುಲಾಸೆಗೊಳಿಸಿತ್ತು.
ಪ್ರಕರಣದಲ್ಲಿ 63 ಮಂದಿಯನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಗುಜರಾತ್ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಪೀಠ ವಜಾಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.