CPM ಕಚೇರಿಗೆ ಮುತ್ತಿಗೆ ಯತ್ನ ವಿಫಲ, BSY ಸೇರಿ ಹಲವರ ಬಂಧನ, ಬಿಡುಗಡೆ
Team Udayavani, Oct 9, 2017, 12:27 PM IST
ಬೆಂಗಳೂರು: ಕೇರಳದ ಜನರಕ್ಷಾ ಯಾತ್ರೆಯನ್ನು ಬೆಂಬಲಿಸಿ ರಾಜ್ಯ ಬಿಜೆಪಿ ಘಟಕ ಸೋಮವಾರ ಪಾದಯಾತ್ರೆ ಮೂಲಕ ಬಸವನಗುಡಿಯಲ್ಲಿರುವ ಸಿಪಿಎಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಮಾಜಿ ಡಿಸಿಎಂ ಆರ್.ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.
ಕೇರಳದಲ್ಲಿ ಆರ್ ಎಸ್ಎಸ್, ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಬಿಜೆಪಿ ಜನರಕ್ಷಾ ಯಾತ್ರೆಯನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಜನರಕ್ಷಾ ಯಾತ್ರೆ ಬೆಂಬಲಿಸಿ ಮಾಜಿ ಡಿಸಿಎಂ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾ ಬಸವನಗುಡಿಯಲ್ಲಿರುವ ಸಿಪಿಎಂ ಕಚೇರಿಗೆ ಮುತ್ತಿಗೆ ಹಾಕಲು ಪಾದಯಾತ್ರೆ ಆರಂಭಿಸಿತ್ತು.
ಪಾದಯಾತ್ರೆಯಲ್ಲಿ ಕಮ್ಯೂನಿಷ್ಟರ ಹಿಂಸಾಚಾರ ಕೊನೆಗೊಳ್ಳಲಿ, ಕಮ್ಯೂನಿಷ್ಟ್ ಗೂಂಡಾಗಿರಿ ವಿರುದ್ಧ ಜನರಕ್ಷಾ ಯಾತ್ರೆ ಎಂಬ ತಲೆಬರಹವುಳ್ಳ ಭಿತ್ತಿಪತ್ರ ಹಿಡಿದಿದ್ದರು. ಅಲ್ಲದೇ ಪಾದಯಾತ್ರೆಯಲ್ಲಿ ಬೃಹತ್ ಎಲ್ ಇಡಿ ಪರದೆಯನ್ನು ಅಳವಡಿಸಲಾಗಿತ್ತು. ಪರದೆಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಯ ದೃಶ್ಯವನ್ನು ಬಿತ್ತರಿಸಲಾಗುತ್ತಿತ್ತು.
ಘೋಷಣೆ ಕೂಗುತ್ತಾ ಸಾಗುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಹಾಗೂ ಬಿಜೆಪಿ ಮುಖಂಡರಾದ ಬಿಎಸ್ ವೈ, ಆರ್.ಆಶೋಕ್, ಶೋಭಾ ಕರಂದ್ಲಾಜೆ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳುವ ಮೂಲಕ ಸಿಪಿಎಂ ಕಚೇರಿಗೆ ಮುತ್ತಿಗೆ ಹಾಕುವುದನ್ನು ವಿಫಲಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
chikkamagaluru: ಹೆಬ್ಬಾಳ್ಕರ್ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
MUST WATCH
ಹೊಸ ಸೇರ್ಪಡೆ
Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು
chikkamagaluru: ಹೆಬ್ಬಾಳ್ಕರ್ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ
Bengaluru: ಜಗಳ ಬಿಡಿಸಲು ಬಂದ ಮಾವನ ಕೊಂದ ಅಳಿಯ!
Bengaluru: ಬಿಯರ್ ಬಾಟಲಿ ಕಸಿದಿದ್ದಕ್ಕೆ ಸ್ನೇಹಿತನ ಹತ್ಯೆ; 7 ಜನ ಸೆರೆ
Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.