ವಿಶ್ವಕರ್ಮ ಜಯಂತಿಯಂದೇ ಕಾರ್ಮಿಕ ದಿನ ಆಚರಿಸಿ


Team Udayavani, Oct 9, 2017, 12:31 PM IST

msm6.jpg

ಮೈಸೂರು: ವಿಶ್ವಕರ್ಮ ಜಯಂತಿಯಂದೇ ರಾಷ್ಟ್ರೀಯ ಕಾರ್ಮಿಕರ ದಿನವನ್ನು ಆಚರಿಸಲು ಪ್ರಧಾನಿ ನರೇಂದ್ರಮೋದಿ ಅವರಿಗೆ ಮೈಸೂರಿನಿಂದಲೇ ಮನವಿ ಸಲ್ಲಿಸಬೇಕಿದೆ ಎಂದು ಮಾಜಿ ಸಚಿವ ಎಸ್‌.ಎ.ರಾಮದಾಸ್‌ ಹೇಳಿದರು. ಭಾರತೀಯ ಮಜ್ದೂರ್‌ ಸಂಘದ ಮೈಸೂರು ವಿಭಾಗದಿಂದ ನಗರದ ಶಂಕರಮಠದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಮಿಕರ ದಿನಾಚರಣೆ ಮತ್ತು ವಿಶ್ವಕರ್ಮರ ಜಯಂತಿಯಲ್ಲಿ ಮಾತನಾಡಿದರು.

ವಿಶ್ವಕರ್ಮ ಸಮುದಾಯದವರನ್ನು ಕೇವಲ ಜಾತಿಯ ಮೂಲಕ ಗುರುತಿಸುವ ಬದಲಿಗೆ ಅವರ ವಿನ್ಯಾಸಕಲೆ, ವಾಸ್ತುಶಿಲ್ಪ, ಚಿನ್ನ ಹಾಗೂ ಮರದಕೆತ್ತನೆ ಕೆಲಸಗಳನ್ನು ನೋಡಿ ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಎಂದು ಹೇಳಿದರು. ಸಮಾಜದಲ್ಲಿ ಪ್ರತಿನಿತ್ಯ ತಮ್ಮ ಕೆಲಸಗಳಿಂದಲೇ ಮುಂಚೂಣೆಯಲ್ಲಿರುವ ವಿಶ್ವಕರ್ಮರ ಜಯಂತಿಯಂದೇ ರಾಷ್ಟ್ರೀಯ ಕಾರ್ಮಿಕರ ದಿನವನ್ನು ಆಚರಿಸಬೇಕಿದೆ.

ಹೀಗಾಗಿ ಸೆ.17ರಂದು ರಾಷ್ಟ್ರೀಯ ಕಾರ್ಮಿಕರ ದಿನವನ್ನು ಆಚರಿಸುವಂತೆ ಮೈಸೂರಿನಿಂದಲೇ ಎಲ್ಲರೂ ಪ್ರಧಾನಿಗೆ ಮನವಿ ಸಲ್ಲಿಸುವ ಕೆಲಸವಾಗಬೇಕಿದೆ ಎಂದರು. ವಿಶ್ವಕರ್ಮರ ಮೂಲದ ಬಗ್ಗೆ ಇಂದಿಗೂ ಹಲವು ಗೊಂದಲಗಳಿವೆ. ಆದರೆ ಶ್ರೀಕೃಷ್ಣನ ದ್ವಾರಕೆ ನಿರ್ಮಿಸುವ ಅವಕಾಶ ವಿಶ್ವಕರ್ಮರ 3ನೇ ಸಂತತಿಗೆ ಸಿಕ್ಕಿತ್ತು. ಮಹಾಭಾರತದ ನಂತರ ಇಂದ್ರಪ್ರಸ್ತ ನಿರ್ಮಿಸಿಕೊಟ್ಟವರು ವಿಶ್ವಕರ್ಮರೇ ಆಗಿದ್ದು, ಅಂದಿನಿಂದಲೂ ಶಿಲ್ಪಿಗಳಾಗಿ, ಚಿನ್ನ-ಬೆಳ್ಳಿ ವರ್ತಕರಾಗಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆಂದರು.

ವಿಶ್ವಕರ್ಮರ ಚಿಂತನೆಗಳು ಅಡಕವಾಗಿದ್ದ ಒಲೆಗರಿಗಳನ್ನು ಕದ್ದು ಹೋದ ಜರ್ಮನ್‌ ಅದರ ಮೂಲಕ ಕೈಗಾರಿಕಾ ಕ್ಷೇತ್ರದಲ್ಲಿ ಸಾಧನೆ ಮಾಡಿದೆ. ಇದೇ ಕಾರಣಕ್ಕಾಗಿ ಜರ್ಮನ್‌ ಸರ್ಕಾರ ಇಂದಿಗೂ ವಿಶ್ವಕರ್ಮರ ದಿನವನ್ನು ಆಚರಿಸುತ್ತಿದೆ ಎಂದು ಹೇಳಿದರು. ಭಾರತೀಯ ಮಜ್ದೂರ್‌ ಸಂಘದ ರಾಜಾಧ್ಯಕ್ಷ ವಿಶ್ವನಾಥ್‌ ಶೆಟ್ಟಿ, ದೇಶದಲ್ಲಿ ಡೋಂಗಿ ಕಾರ್ಮಿಕ ಸಂಘಟನೆಗಳ ಹಾವಳಿ ಹೆಚ್ಚಾಗಿದ್ದು, ಇದರ ಪರಿಣಾಮ ನಿಜವಾದ ಕಾರ್ಮಿಕರು ಸೌಲಭ್ಯದಿಂದ ವಂಚಿತರಾಗಿದ್ದಾರೆ.

ಇದನ್ನು ತಡೆಯುವ ಸಲುವಾಗಿ ಕೇಂದ್ರ ಸರ್ಕಾರದಿಂದ ಕಾರ್ಮಿಕ ಸಂಘಟನೆಗಳ ಪರಿಶೀಲನೆ ನಡೆಯುತ್ತಿದ್ದು, ಇದಕ್ಕಾಗಿ ಭಾರತೀಯ ಮಜ್ದೂರ್‌ ಸಂಘ 1.75 ಕೋಟಿ ಸದಸ್ಯರ ದಾಖಲೆ ಒದಗಿಸಿಕೊಟ್ಟಿದೆ ಎಂದು ತಿಳಿಸಿದರು. ಭಾರತೀಯ ಮಜ್ದೂರ್‌ ಸಂಘದ ಜಿಲ್ಲಾಧ್ಯಕ್ಷ ಟಿ.ವಿ.ಬಾಲಕೃಷ್ಣ, ಕಲ್ಯಾಣಗಿರಿ ಸೆಂಟ್ರಲ್‌ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಎಚ್‌.ಎಸ್‌.ಪ್ರಸನ್ನ, ಸಂಘದ ಗೌರವಾಧ್ಯಕ್ಷ ಎಚ್‌.ಎಸ್‌.ಸದಾಶಿವ, ಕಾರ್ಯದರ್ಶಿ ಶಾಂತಕುಮಾರ್‌ ಇದ್ದರು.

ಟಾಪ್ ನ್ಯೂಸ್

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.