ಪೊಲೀಸ್ ಠಾಣೆ ಎದುರು ಜಮಾಯಿಸಿದ ಜನ
Team Udayavani, Oct 9, 2017, 12:37 PM IST
ಬೆಳ್ತಂಗಡಿ: ಅನ್ಯಧರ್ಮದ ಯುವತಿ ಹಿಂದೂ ಯುವಕ ಪ್ರೀತಿಸಿ ಓಡಿ ಹೋಗುತ್ತಿದ್ದಾಗ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಸೆರೆಯಾದರು. ಈ ಪ್ರಕರಣದಲ್ಲಿ ಎರಡೂ ಧರ್ಮದ ನೂರಾರು ಯುವಕರು ಠಾಣೆ ಮುಂದೆ ಜಮಾಯಿಸಿದ ಘಟನೆ ರವಿವಾರ ನಡೆದಿದೆ.
ತಾಲೂಕಿನ ಮಂಜೊಟ್ಟಿ ನಿವಾಸಿ 19ರ ಯುವಕ ಹಾಗೂ ನಾವೂರು ನಿವಾಸಿ 20ರ ಹರೆಯದ ಯುವತಿ ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಯುವಕ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ. ಯುವತಿ ಕಾಲೇಜು ವಿದ್ಯಾಭ್ಯಾಸ ನಡೆಸುತ್ತಿದ್ದ.
ಇದೀಗ ಕಾಲೇಜು ವ್ಯಾಸಂಗ ಮುಗಿದಿದ್ದು ಪ್ರೀತಿ ವಿಚಾರ ಮನೆಯವರಿಗೆ ತಿಳಿದಿದ್ದ ಕಾರಣ ಈಕೆಯ ಕುರಿತು ಜಾಗರೂಕತೆ ನಡೆಸುತ್ತಿದ್ದರು. ಆದರೆ ಶನಿವಾರ ಯುವಕನ ಸ್ನೇಹಿತರ ಸಹಾಯದಿಂದ ಯುವತಿ ಮನೆಯಿಂದ ಪರಾರಿಯಾಗಿದ್ದಾಳೆ. ಮನೆಯವರು ಪೊಲೀಸರಿಗೆ ಅಪಹರಣ ದೂರು ನೀಡಿದ್ದಾರೆ. ಪೊಲೀಸರು ಮೊಬೈಲ್ ಲೊಕೇಶನ್ ಪತ್ತೆ ಮಾಡಿದಾಗ ಹಾಸನದಲ್ಲಿ ತೆರಳುತ್ತಿರುವುದು ತಿಳಿಯಿತು.
ತತ್‌ಕ್ಷಣ ಹಾಸನ ಪೊಲೀಸರ ನೆರವಿನಿಂದ ಇವರು ಹೋಗುತ್ತಿದ್ದ ಕಾರನ್ನು ಪತ್ತೆ ಹಚ್ಚಲಾಯಿತು. ರವಿವಾರ ಬೆಳ್ತಂಗಡಿ ಠಾಣೆಗೆ ಇಬ್ಬರನ್ನು ಕರೆ ತರಲಾಯಿತು. ಈ ಸಂದರ್ಭ ಠಾಣೆಯ ಸುತ್ತ ಎರಡೂ ಕಡೆಯವರು ಜಮಾಯಿಸಿದರು. ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಹರೀಶ್ ಪೂಂಜಾ ಹಾಗೂ ಎಸ್‌ಡಿಪಿಐ ಮುಖಂಡ ಅಕºರ್ ಬೆಳ್ತಂಗಡಿ ಆಗಮಿಸಿ ಉದ್ವಿಗ್ನ ಸ್ಥಿತಿಗೆ ತೆರಳುವ ಸಾಧ್ಯತೆಯಿದ್ದ ಎರಡೂ ಪಂಗಡದವರನ್ನು ಸಮಾಧಾನಪಡಿಸಿದರು. ನಾವು ಸ್ವ ಇಚ್ಛೆಯಿಂದ ಬೆಂಗಳೂರಿಗೆ ಹೋಗುತ್ತಿದ್ದು ಅಪಹರಣವಲ್ಲ. ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದೇವೆ ಎಂದು ಹೇಳಿಕೆ ನೀಡಿದ ಅವರಿಂದ ಮುಚ್ಚಳಿಕೆ ಬರೆಸಿಕೊಂಡು ಇಬ್ಬರನ್ನೂ ಅವರವರ ಮನೆಯವರ ಜತೆಗೆ ಕಳುಹಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
Sulya: ನಿಲ್ಲಿಸಿದ್ದ ಕಾರಿಗೆ ಬಸ್ ಢಿಕ್ಕಿ; ಜಖಂ
Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್ ಕೇಬಲ್ ಕಳವು
Sulya: ಆರಂತೋಡು: ಚಿಕನ್ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.