ಪಾರ್ಸಿ ಮಹಿಳೆಯ ಮತಾಂತರ ಪ್ರಕರಣ ಸಂವಿಧಾನ ಪೀಠಕ್ಕೆ
Team Udayavani, Oct 10, 2017, 6:25 AM IST
ನವದೆಹಲಿ: ವಿಶೇಷ ವಿವಾಹ ಕಾಯ್ದೆಯನ್ವಯ ಅನ್ಯಧರ್ಮೀಯ ವ್ಯಕ್ತಿಯನ್ನು ಮದುವೆಯಾಗುವ ಪಾರ್ಸಿ ಮಹಿಳೆ, ವಿವಾಹದ ನಂತರ ತನ್ನಿಂತಾನೇ ತನ್ನ ಪತಿಯ ಧರ್ಮಕ್ಕೆ ಮತಾಂತರವಾದಂತೆ ಆಗುತ್ತದೆಯೇ ಎಂಬ ಜಿಜ್ಞಾಸೆಯೊಂದು ಇದೀಗ ಮೂಡಿದೆ. ಈ ಕುರಿತು ಗೊಂದಲ ಮೂಡಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು, ಪ್ರಕರಣದ ವಿಚಾರಣೆಯನ್ನು ಐವರು ನ್ಯಾಯಮೂರ್ತಿಗಳಿರುವ ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ.
ಪಾರ್ಸಿ ಮಹಿಳೆಯೊಬ್ಬರು ವಿಶೇಷ ವಿವಾಹ ಕಾಯ್ದೆಯನ್ವಯ ಹಿಂದೂ ವ್ಯಕ್ತಿಯನ್ನು ಮದುವೆಯಾಗಿದ್ದರು. ಆದರೆ, ಪಾರ್ಸಿ ಕಾನೂನನ್ನು ಉಲ್ಲೇಖೀಸಿದ್ದ ಬಾಂಬೆ ಹೈಕೋರ್ಟ್, ಅನ್ಯಧರ್ಮೀಯ ವ್ಯಕ್ತಿಯನ್ನು ಮದುವೆಯಾದರೆ, ಆ ಮಹಿಳೆ ಕೂಡ ಪತಿಯ ಧರ್ಮಕ್ಕೆ ಮತಾಂತರವಾದಂತೆ ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಮಹಿಳೆಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ತ್ರಿಸದಸ್ಯ ಪೀಠವು, ಇದನ್ನು ಸಂವಿಧಾನ ಪೀಠವೇ ನಿರ್ಧರಿಸಲಿ ಎಂದಿದೆ.
ಇಂದು ಆರು ಪ್ರಕರಣಗಳ ವಿಚಾರಣೆ ಶುರು
ಕೇಂದ್ರ ಮತ್ತು ದೆಹಲಿ ಸರ್ಕಾರಗಳ ನಡುವಿನ ಆಡಳಿತಾತ್ಮಕ ಸಂಘರ್ಷ, ಪರೋಕ್ಷ ದಯಾಮರಣ, ಪಾರ್ಸಿ ಮಹಿಳೆಯ ವಿವಾಹಕ್ಕೆ ಸಂಬಂಧಿಸಿದ ಮೇಲ್ಮನವಿ ಸೇರಿದಂತೆ ಒಟ್ಟು 6 ಪ್ರಮುಖ ಪ್ರಕರಣಗಳ ವಿಚಾರಣೆ ಮಂಗಳವಾರ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠದ ಮುಂದೆ ಬರಲಿದೆ. ಸಿಜೆಐ ದೀಪಕ್ ಮಿಶ್ರಾ, ನ್ಯಾ.ಎ.ಕೆ.ಸಿಕ್ರಿ, ನ್ಯಾ.ಎ.ಎಂ. ಕನ್ವಿಳ್ಕರ್, ನ್ಯಾ.ಡಿ.ವೈ.ಚಂದ್ರಚೂಡ್ ಹಾಗೂ ನ್ಯಾ. ಅಶೋಕ್ ಭೂಷಣ್ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ಆರಂಭಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.