ರೇಖಾಚಿತ್ರಗಳ ಪರಿಣಿತ ಕಲಾವಿದ ಅಮರೇಶ್ ಇನ್ನಿಲ್ಲ
Team Udayavani, Oct 10, 2017, 11:21 AM IST
ಬೆಂಗಳೂರು: ಗೂಳಿ ರೇಖಾ ಚಿತ್ರಗಳ ಮೂಲಕ ಜನಪ್ರಿಯರಾಗಿದ್ದ ಅಮರೇಶ್ ಬಿಜ್ಜಲ್ ಸೋಮವಾರ ನಿಧನರಾದರು. 56 ವರ್ಷ ವಯಸ್ಸಿನ ಅಮರೇಶ್ ಅವರು ಬೆಂಗಳೂರಿನ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ರಕ್ತದೊತ್ತಡ ಕಡಿಮೆಯಾಗಿತ್ತು. ಟಿವಿ ವೀಕ್ಷಿಸುತ್ತಿದ್ದ ಸಮಯದಲ್ಲೇ ಪ್ರಾಣಬಿಟ್ಟಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.
ಇಳಕಲ್ನ ಕುಷ್ಟಗಿಯವರಾದ ಅಮರೇಶ್ ಅವರು ಸಿನಿಮಾಗಳ ಪೋಸ್ಟರ್ಗಳನ್ನು ಮಾಡುವುದರ ಜತೆ ಜೊತೆಗೇ ವೃತ್ತಿಪರವಾಗಿಯೂ ಗುರುತಿಸಿಕೊಂಡು, ಸಾಕಷ್ಟು ಅಕಾಡೆಮಿಕ್ ಕಲಾಕೃತಿಗಳನ್ನು ರಚಿಸಿದ್ದಾರೆ. ಶೇಷಾದ್ರಿಪುರಂನ ಕೆನ್ ಕಲಾಶಾಲೆಯಲ್ಲಿ ಕಲಾ ಪದವಿ ಪಡೆದುಕೊಂಡಿರುವ ಅಮರೇಶ್ ಅವರು ಸಾಕಷ್ಟು ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿದ್ದರು.
ಕಳೆದ ಕೆಲ ವರ್ಷಗಳಿಂದ ನಿರಂತರವಾಸಗಿ ಆರ್ಟ್ಪಾರ್ಕ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದ ಅಮರೇಶ್ ನಿಧನಕ್ಕೆ ಬೆಂಗಳೂರು ಆರ್ಟ್ ಫೌಂಡೇಶನ್ ಸೇರಿದಂತೆ, ಲಲಿತಕಲಾ ಕ್ಷೇತ್ರದ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.