ಭಾರತ-ಚೀನಾ “ಯೋಗ’
Team Udayavani, Oct 11, 2017, 7:05 AM IST
ನವದೆಹಲಿ: ಚೀನಾ ಸರ್ಕಾರದ ಮಹತ್ವಾಕಾಂಕ್ಷೆಯ “ಭಾರತ-ಚೀನಾ ಯೋಗ ಕಾಲೇಜು’ (ಐಸಿವೈಸಿ) ಮಂಗಳವಾರದಿಂದ ಆರಂಭವಾಗಿದೆ. ವಿಶೇಷವೆಂದರೆ, ಇದಕ್ಕೆ ಬೆಂಗಳೂರಿನ ನಂಟಿದೆ. ಅದು ಹೇಗೆಂದು ಯೋಚಿಸುತ್ತಿದ್ದೀರಾ?
ಈ ಇಂಡೋ- ಚೈನಾ ಯೋಗ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಮಾಡುವ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನವು ಪ್ರಮಾಣ ಪತ್ರ ಪ್ರದಾನ ಮಾಡುತ್ತದೆ. ಈಗಾಗಲೇ ಕೋರ್ಸ್‌ಗಾಗಿ ಅರ್ಜಿಯನ್ನು ಕರೆಯಲಾಗಿದೆ. ಈ ಸ್ನಾತಕೋತ್ತರ ಪದವಿ ಮೂರು ವರ್ಷಗಳ ಅವಧಿಯದ್ದಾಗಿದ್ದು, ಇದರ ಮೊದಲೆರಡು ವರ್ಷಗಳ ತರಗತಿಗಳು ದಕ್ಷಿಣ ಚೀನಾದ ಯುನ್ನಾನ್ ಪ್ರಾಂತ್ಯದ ರಾಜಧಾನಿಯಾದ ಕನಿ¾ಂಗ್ ನಗರದಲ್ಲಿ ನಡೆಯಲಿದೆ. ಕೋರ್ಸ್‌ನ ಅಂತಿಮ ವರ್ಷದ ತರಗತಿಗಳು ಭಾರತದಲ್ಲಿ ನಡೆಯಲಿವೆ ಎಂದು ಕಾಲೇಜಿನ ಉಪ ಪ್ರಾಂಶುಪಾಲ ಲು ಫಾಂಗ್ ತಿಳಿಸಿರುವುದಾಗಿ ಚೀನಾದ ಸರ್ಕಾರಿ ಮಾಧ್ಯಮವಾದ ಕ್ಸಿನ್ ಹುವಾ ವರದಿ ಮಾಡಿದೆ. ಈ ಕೋರ್ಸ್ ಮಾಡುವ ವಿದ್ಯಾರ್ಥಿಗಳಿಗೆ ಚೀನಾದ ಯುನ್ನಾನ್ ಮಿಂಝು ವಿಶ್ವವಿದ್ಯಾಲಯ, ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಸಂಸ್ಥೆಯಿಂದ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲಾಗುತ್ತದೆ.
ಕೋರ್ಸ್ ನಲ್ಲಿ ಆಸನಗಳು, ಪ್ರಾಣಾ ಯಾಮ, ಯೋಗ ಚಿಕಿತ್ಸೆ ಹಾಗೂ ಶರೀರಶಾಸ್ತ್ರ ವಿಷಯಗಳನ್ನು ಅಳವಡಿಸಲಾಗಿದೆ. ಭಾಷೆಯ ನಿರ್ಬಂಧನೆ ಗಳನ್ನು ಹೋಗಲಾಡಿಸಲು ಈ ಕೋರ್ಸ್ ನಲ್ಲಿ ಹಿಂದಿ ಹಾಗೂ ಸಂಸ್ಕೃತ ಭಾಷೆಗಳನ್ನು ಕಲಿಸಲು ಉದ್ದೇಶಿಸಲಾಗಿದೆ. ಚೀನೀ ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃ ತಿಗೆ ಸಂಬಂಧಪಟ್ಟ ವಿಶೇಷ ತರಗತಿಗಳನ್ನೂ ನಡೆಸಲಾಗುವುದು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.