ಮಳೆಯಬ್ಬರಕ್ಕೆ ಮತ್ತಿಬ್ಬರು ಬಲಿ
Team Udayavani, Oct 11, 2017, 9:34 AM IST
ಬೆಂಗಳೂರು: ರಾಜ್ಯದಲ್ಲಿ ಮಳೆ ಮುಂದುವರಿದಿದ್ದು, ಸಿಡಿಲಬ್ಬರದ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ತುಮಕೂರಿನಲ್ಲಿ ರಾಜ್ಯದಲ್ಲಿಯೇ ಅತ್ಯಧಿಕ ಎನಿಸಿದ 18 ಸೆಂ.ಮೀ.ಮಳೆಯಾಗಿದೆ.
ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಸಿಡಿಲಿಗೆ ನರ್ಸ್, ನೀಲಮ್ಮ (23) ಎಂಬುವರು ಅಸುನೀಗಿದ್ದಾರೆ. ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಸಿಡಿಲು ಬಡಿಯಿತು. ಶಹಾಪುರ ತಾಲೂಕಿನ ಮಡ್ನಾಳ ಗ್ರಾಮದಲ್ಲಿ ಸೋಮವಾರ ರಾತ್ರಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಅಯ್ಯಪ್ಪ ಮರೆಪ್ಪ ದೊರೆ (70) ಎಂಬುವರು ಮೃತಪಟ್ಟಿದ್ದಾರೆ. ಭೀಮಾಶಂಕರ ಮರೆಪ್ಪ (11), ರಾಯಪ್ಪ ಸಿದ್ದಪ್ಪ (40),ರಾಯಪ್ಪ ಬಸವರಾಜ (9), ಶರಣಪ್ಪ
ಬಸವರಾಜ (10), ಪರಶುರಾಮ ಮಲ್ಲಪ್ಪ (8), ಮತ್ತು ಕಾಶಿನಾಥ ಅಶೋಕ (13) ಎಂಬುವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮಧ್ಯೆ, ಕ್ಯಾತನಾಳ ಗ್ರಾಮದ ಕೆರೆ ಕೋಡಿ ಒಡೆದ ಪರಿಣಾಮ ಗ್ರಾಮಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿದ್ದು, ಇಡಿ ಗ್ರಾಮದ ಜನತೆ ಬೆಳಗಿನ ಜಾವದವರಗೆ ಜಾಗರಣೆ ಮಾಡಬೇಕಾಯಿತು. ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನಲ್ಲಿ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಭೀಮಾ ನದಿಯಲ್ಲಿ ನೆರೆ ಬಂದಿದ್ದು, ನದಿ ದಂಡೆಯ ಗ್ರಾಮಗಳು ಪ್ರವಾಹ
ಭೀತಿ ಎದುರಿಸುವಂತಾಗಿದೆ.
ತುಮಕೂರಿನಲ್ಲಿ ಮನೆ ಗೋಡೆ ಕುಸಿದಿದೆ. ಈ ಮಧ್ಯೆ, ಇನ್ನೆರಡು ದಿನ ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕದ ಬಹುತೇಕ ಕಡೆ ಸಿಡಿಲು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾ ಗಲಿದೆ ಎಂದು ಬೆಂಗಳೂರಿನ ಹವಾಮಾನ
ಕೇಂದ್ರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.