ಮುಗಿಯದ ವೀರಶೈವ- ಲಿಂಗಾಯತರ ಗೊಂದಲ: ನಾಳೆ ಮತ್ತೂಂದು ಸಭೆ
Team Udayavani, Oct 11, 2017, 10:11 AM IST
ಬೆಂಗಳೂರು: ವೀರಶೈವ ಮತ್ತು ಲಿಂಗಾಯತ ಸಮುದಾಯಗಳನ್ನು ಒಗ್ಗೂಡಿ ಸುವ ಕುರಿತಂತೆ ನಡೆದ 3ನೇ ಸಭೆಯೂ ಅಪೂರ್ಣಗೊಂಡಿದ್ದು, ಅ. 12 ರಂದು ಮತ್ತೂಂದು ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಮಂಗಳವಾರ ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ನಡೆದ ಸಭೆ ಅನೌಪಚಾರಿಕ ಚರ್ಚೆಗೆ ಮಾತ್ರ ಸೀಮಿತವಾಗಿದೆ. ಎರಡೂ ಬಣಗಳ ಕಾನೂನು ಪಂಡಿತರು ತಮ್ಮ ವಾದ ಮಂಡಿಸಲು ಎಲ್ಲ ದಾಖಲೆಗಳನ್ನು ತೆಗೆದು ಕೊಂಡು ಬಂದಿದ್ದರೂ, ವಿವರವಾಗಿ ಚರ್ಚಿಸಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕೆ ಅನೌಪಚಾರಿಕ ಚರ್ಚೆ ನಡೆಸಿ, ಸಭೆಯನ್ನು ಗುರುವಾರಕ್ಕೆ ಮುಂದೂಡಲಾಗಿದೆ. ಸಭೆ ನಂತರ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಇಂದಿನ ಸಭೆ ಅತ್ಯಂತ ಸೌಹಾರ್ದ ಯುತವಾಗಿ ನಡೆದಿದೆ. ಅ.12 ರ ಅಂತಿಮ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಗಾರರು ಈಗಾಗಲೇ ಸಾಕಷ್ಟು ಮುಂದೆ ಹೋಗಿದ್ದು, ಪತ್ರಿಕೆಗಳಲ್ಲಿ ಎರಡೂ ಸಮುದಾಯ ಭಿನ್ನ ಎನ್ನುವಂತೆ ಜಾಹೀರಾತು ನೀಡಿದ್ದರಿಂದ ಅವರೊಂದಿಗೆ ಹೊಂದಾಣಿಕೆ ಸಾಧ್ಯವಿಲ್ಲ ಎಂದು ಶಾಮನೂರು ಶಿವಶಂಕರಪ್ಪ ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಆದರೆ, ಲಿಂಗಾಯತ ಹೋರಾಟ ಸಮಿತಿ ಸದಸ್ಯರೇ ಹೊಂದಾಣಿಕೆಯ ಬಗ್ಗೆ ಆಸಕ್ತಿ ವಹಿಸುತ್ತಿರುವುದರಿಂದ ಮತ್ತೂಂದು
ಸುತ್ತಿನ ಮಾತುಕತೆಗೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudbidri: ಕಲ್ಲಮುಂಡ್ಕೂರು-ಕುಂಟಲಪಲ್ಕೆ ಎಸ್‌ಟಿ ಕಾಲನಿ ರಸ್ತೆ ಜಲ್ಲಿಕಲ್ಲು!
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Kinnigoli: ದಾಮಸ್‌ಕಟ್ಟೆ – ಏಳಿಂಜೆ ರಸ್ತೆ ಹೊಂಡಮಯ
Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು
Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.