ಪಂಪ್ವೆಲ್ ಬಸ್ ನಿಲ್ದಾಣ; ಸಮಗ್ರ ವರದಿ ಸಲ್ಲಿಸಲು ಸೂಚನೆ
Team Udayavani, Oct 11, 2017, 11:29 AM IST
ಮಹಾನಗರ: ಪಂಪ್ ವೆಲ್ ಬಸ್ ನಿಲ್ದಾಣದ ಬಗ್ಗೆ ಪ್ರಸ್ತಾವನೆ ಕುರಿತು ಸಮಗ್ರ ವರದಿಯನ್ನು ಒಂದು ವಾರದೊಳಗೆ ಸಲ್ಲಿಸಬೇಕು ಎಂದು ಶಾಸಕ ಜೆ.ಆರ್. ಲೋಬೋ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಂಪ್ ವೆಲ್ ಬಸ್ ನಿಲ್ದಾಣದ ಬಗ್ಗೆ ಅವರು ಮಾತನಾಡಿದರು.
ಬಸ್ ನಿಲ್ದಾಣದ ಕುರಿತು ನೀಡಿರುವ ಮಾಹಿತಿ ಸಮರ್ಪಕವಾಗಿಲ್ಲ. ಇದರ ಬಗ್ಗೆ ಕೂಲಂಕಷ ಮಾಹಿತಿ ಅಗತ್ಯವಿದೆ. ಖಾಸಗಿ ಸಂಸ್ಥೆಗೆ ಮಾಹಿತಿ ಒದಗಿಸುವ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು.
ಈ ಕುರಿತ ಪ್ರಸ್ತಾವನೆಯನ್ನು ಪರಿಶೀಲಿಸಲು ಒಂದು ತಾಂತ್ರಿಕ ಸಮಿತಿಯನ್ನು ರಚಿಸುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು. ಪ್ರಸ್ತಾವನೆ ಬಂದ ಬಳಿಕ ನಿರ್ಧಾರವನ್ನು ತೆಗೆದುಕೊಂಡು ವರದಿಯನ್ನು ಅನುಮೋದನೆಗೆ ಸಲ್ಲಿಸುವಂತೆಯೂ ಸಭೆಗೆ ಶಾಸಕರು ತಿಳಿಸಿದರು. ಖಾಸಗಿ ಸಂಸ್ಥೆಗಳು ನೀಡಿದ ಪಂಪ್ವೆಲ್ ಬಸ್ ನಿಲ್ದಾಣದ ವಿನ್ಯಾಸದ ಬಗೆಗಿನ ಪ್ರಾತ್ಯಕ್ಷಿಕೆಯನ್ನು ಸಭೆಯಲ್ಲಿ ವೀಕ್ಷಿಸಲಾಯಿತು.
ಮೇಯರ್ ಕವಿತಾ ಸನಿಲ್, ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್, ಆಯುಕ್ತ ನಜೀರ್ ಅಹ್ಮದ್, ಮುಖ್ಯ ಸಚೇತಕ ಎಂ. ಶಶಿಧರ್ ಹೆಗ್ಡೆ, ಸ್ಥಾಯೀ ಸಮಿತಿ ಅಧ್ಯಕ್ಷ ಅಬ್ದುಲ್ ರವೂಫ್ ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.