ಬೇಡಿಕೆ ಈಡೇರಿಕೆಗೆ ವಿವಿಧ ಸಂಘಟನೆಗಳ ಪ್ರತ್ಯೇಕ ಪ್ರತಿಭಟನೆ
Team Udayavani, Oct 11, 2017, 12:11 PM IST
ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾಮಾಜಿಕ ನ್ಯಾಯಪರ ವೇದಿಕೆ ಮತ್ತು ಮಾದಿಗ ಸಂಘಟನೆಗಳ ಒಕ್ಕೂಟ, ಹಮ್‌ಗೊàರ್ ಕಟಮಾಳೊ ಸಂಘಟನೆ ಪದಾಧಿಕಾರಿಗಳು ಮಂಗಳವಾರ ನಗರದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿದರು.
ಶೀಘ್ರವೇ ವರದಿ ಅಂಗೀಕರಿಸಿ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೂಡಲೇ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಸಾಮಾಜಿಕ ನ್ಯಾಯಪರ ವೇದಿಕೆ ಮತ್ತು ಮಾದಿಗ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ರಾಜ್ಯ ಸರ್ಕಾರ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದ್ದು, ಈ ಕಾರಣದಿಂದಲೇ ಸರ್ಕಾರ ಈ ವರದಿಯನ್ನು ಅಧಿವೇಶನದಲ್ಲಿ ಮಂಡಿಸಿಲ್ಲ. ಈ ಧೋರಣೆಯನ್ನು ಖಂಡಿಸಿ ಬೆಳಗಾವಿಯ ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು ಹೋರಾಟವನ್ನು ಹತ್ತಿಕ್ಕಿದರು.
ಆದರೆ ವರದಿಯ ಶಿಫಾರಸು ಜಾರಿಗೆ ಬಂದಲ್ಲಿ ಹಿಂದುಳಿದವರಿಗೆ ಅನುಕೂಲವಾಗಲಿದ್ದು, ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಮಾದಿಗರ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಕೊಟ್ಟ ಮಾತನ್ನು ಈಡೇರಿಸಬೇಕಿದೆ. ಸರ್ಕಾರ ಇದಕ್ಕೆ ಮುಂದಾಗದಿದ್ದಲ್ಲಿ, ಜೈಲ್ ¸ರೋ ಚಳವಳಿ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.
ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ದೊಡ್ಡಗಡಿಯಾರ ವೃತ್ತ, ಗಾಂಧಿವೃತ್ತ, ಸಯ್ನಾಜಿರಾವ್ ರಸ್ತೆ, ಡಿ.ದೇವರಾಜ ಅರಸು ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಮುಖಂಡರಾದ ಮೂಗೂರು ಸಿದ್ಧರಾಜು, ಕೆ.ಪ್ರಸನ್ನ ಚಕ್ರವರ್ತಿ, ರಾಜಣ್ಣ, ಡಾ.ಆನಂದ ಕುಮಾರ್, ಮರಡಿಪುರ ರವಿಕುಮಾರ್, ಡಾ.ಎಂ. ಶ್ರೀನಿವಾಸಮೂರ್ತಿ, ಎಚ್.ಕೊಲ್ಲಪ್ಪ, ಬನ್ನಿಕುಪ್ಪೆ ಮಹದೇವ ಇತರರಿದ್ದರು.
ಮೂಲಸೌಲಭ್ಯ ಕಲ್ಪಿಸಿ: ಶೋಷಿತ ಬುಡಕಟ್ಟು ಜನರು ವಾಸವಾಗಿರುವ ಪ್ರದೇಶಗಳಿಗೆ ಮೂಲಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಹಮ್‌ಗೊàರ್ ಕಟ್‌ಮಾಳೊ ಸಂಘಟನೆ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ದೇಶಕ್ಕೆ ಸ್ವಾತಂತ್ರ ದೊರೆತು 70 ವರ್ಷ ಕಳೆದರು ಲಂಬಾಣಿ ಹಾಗೂ ಮತ್ತಿತರ ಸಮುದಾಯದ ಜನವಸತಿ ಪ್ರದೇಶಗಳು ಕಂದಾಯ ಗ್ರಾಮಗಳಾಗಿಲ್ಲ.
ಬದಲಿಗೆ ಖಾಸಗಿ ಮಾಲಿಕತ್ವದ ಜಮೀನು, ಅರಣ್ಯಭೂಮಿ, ಬಗರ್‌ಹುಕುಂ ಜಮೀನುಗಳಲ್ಲಿ ವಾಸಿಸುತ್ತಿದ್ದು, ಸೌಕರ್ಯ ವಂಚಿತರಾಗಿದ್ದಾರೆ. ಶೋಷಿತ ಸಮುದಾಯಗಳು ವಾಸಿಸುವ ಸ್ಥಳಗಳನ್ನು ಕಂದಾಯ ಗ್ರಾಮಗಳನ್ನಾಗಿಸುವ ಉದ್ದೇಶದ ಕರ್ನಾಟಕ ಭೂಸುಧಾರಣೆಗಳ ವಿಧೇಯಕ-2016ನ್ನು ಅನುಮೋದಿಸಬೇಕೆಂದು ಒತ್ತಾಯಿಸಿದರು.
ರಸ್ತೆಯಲ್ಲೇ ಸಸಿನೆಟ್ಟರು: ನಗರದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳನ್ನು ಮುಚ್ಚುವಂತೆ ಒತ್ತಾಯಿಸಿ ಗುಂಡಿಬಿದ್ದ ಕಡೆಗಳಲ್ಲಿ ಸಸಿನೆಡುವ ಮೂಲಕ ನಗರದ ನಜರ್‌ಬಾದ್‌ನ ಲೋಕರಂಜನ್ ಮಹಲ್ ರಸ್ತೆಯಲ್ಲಿ ಸ್ಥಳೀಯ ನಿವಾಸಿಗಳು ಪ್ರತಿಭಟಿಸಿದರು.
ನಗರದಲ್ಲಿ ಸುರಿದ ಮಳೆಗೆ ನಗರದ ಬಹುತೇಕ ಪ್ರಮುಖ ರಸ್ತೆಗಳೆಲ್ಲಾ ಹದಗೆಟ್ಟು, ಗುಂಡಿಬಿದ್ದಿದೆ. ವಾಹನ ಸವಾರರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇವುಗಳನ್ನು ಮುಚ್ಚುವಂತೆ ಆಗ್ರಹಿಸಿದರು.
ದಸರಾ ವೇಳೆ ಎಲ್ಲಾ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದರೂ ದಸರಾ ಮುಗಿದರು ಇಂದಿಗೂ ಬಹುತೇಕ ರಸ್ತೆಗಳಲ್ಲಿ ಗುಂಡಿಮುಚ್ಚುವ ಕಾರ್ಯ ಮುಗಿದಿಲ್ಲ ಎಂದು ನಗರದ ಇಟ್ಟಿಗೆಗೂಡು, ನಜರಬಾದ್ ನಿವಾಸಿಗಳು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.