ರಾಯಣ್ಣ ಬ್ರಿಗೇಡ್ ಮುಖಂಡರಿಗೆ ಸಿದ್ದರಾಮಯ್ಯ ಗಾಳ !
Team Udayavani, Oct 11, 2017, 4:28 PM IST
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ದತೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷವನ್ನು ಅಧಿಕಾರಕ್ಕೆ ತಂದು ಇನ್ನೊಮ್ಮೆ ಮುಖ್ಯಮಂತ್ರಿಯಾಗಲು ಭಾರಿ ರಾಜಕೀಯ ಕಸರತ್ತುಗಳನ್ನು ಆರಂಭಿಸಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ನ ಮುಖಂಡರನ್ನು ಕಾಂಗ್ರೆಸ್ಗೆ ಆಹ್ವಾನಿಸಿರುವ ಬಗ್ಗೆ ವರದಿಯಾಗಿದೆ.
ಭಾರಿ ಹಗ್ಗಜಗ್ಗಾಟದ ನಡುವೆ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬ್ರಿಗೇಡ್ ಬಿಟ್ಟು ಹೊರ ಬಂದಿದ್ದರು. ಆ ಬಳಿಕ ಸಂಘಟನೆ ಚಟುವಟಿಗೆಗಳು ಬಹುತೇಕ ಸ್ಥಗಿತಗೊಂಡಿದ್ದವು.
ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಹಿಂದುಳಿದ ಮತ್ತು ದಲಿತ ವರ್ಗದ ಕೆಲ ಮುಖಂಡರ ಮೇಲೆ ಇದೀಗ ಅಹಿಂದ ನಾಯಕ ಸಿದ್ದರಾಮಯ್ಯ ಕಣ್ಣು ಹಾಕಿದ್ದು, ಪಕ್ಷಕ್ಕೆ ಸೆಳೆಯುವ ಯತ್ನ ಮಾಡಿದ್ದಾರೆ. ಕೆಲ ಮುಖಂಡರಿಗೆ ಮುಂದಿನ ಚುನಾವಣೆಯಲ್ಲಿ ಟಿಕೇಟ್ ಸೇರಿದಂತೆ ಸೂಕ್ತ ಸ್ಥಾನಮಾನಗಳನ್ನು ನೀಡುವ ಭರವಸೆ ನೀಡಿದ್ದಾರೆ ಎನ್ನಾಲಾಗಿದೆ.
ರಾಯಣ್ಣ ಬ್ರಿಗೇಡ್ನಲ್ಲಿದ್ದ ಬಿಬಿಎಂಪಿ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಅವರು ಬಿಜೆಪಿಯಲ್ಲಿ ಅಸಮಧಾನಹೊಂದಿದ್ದು, ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.