ರಾಷ್ಟ್ರೀಯ ಕರಾಟೆ ಸ್ಪರ್ಧೆ; ಮುಖ್ಯಮಂತ್ರಿಗೆ ಆಹ್ವಾನ
Team Udayavani, Oct 12, 2017, 9:56 AM IST
ಮಹಾನಗರ: ನೆಹರೂ ಮೈದಾನದಲ್ಲಿ ಇಂಡಿಯನ್ ಕರಾಟೆ ಚಾಂಪಿ ಯನ್‌ಶಿಪ್-2017 ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ ನ. 4 ಮತ್ತು 5ರಂದು ಜರಗಲಿದ್ದು, ಇದರ ಉದ್ಘಾಟನೆಗೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬುಧವಾರ ಮೇಯರ್ ಕವಿತಾ ಸನಿಲ್ ನೇತೃತ್ವದಲ್ಲಿ ಕರಾಟೆ ಸಂಘಟಕರು ಬೆಂಗಳೂರಿನಲ್ಲಿ ಭೇಟಿಯಾಗಿ ಆಹ್ವಾನ ನೀಡಿದರು.
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಇಂತಹ ಪಂದ್ಯಾಟ ಆಯೋಜಿಸಲಾಗಿದ್ದು, ತೆರೆದ ಕ್ರೀಡಾಂಗಣ (ಓಪನ್ ಗ್ರೌಂಡ್)ದಲ್ಲಿ ದೊಡ್ಡ ಮಟ್ಟದಲ್ಲಿ ಪಂದ್ಯಾಟ ಆಯೋಜನೆಗೊಳ್ಳುವುದು ಅಪರೂಪ. ಪಂದ್ಯಾಟದ ಕ್ಷಣ ಕ್ಷಣದ ಮಾಹಿತಿಗಾಗಿ ಎಲೆಕ್ಟ್ರಾನಿಕ್ಸ್ ಸ್ಕೋರ್ ಬೋರ್ಡ್‌ಗಳನ್ನು ಬಳಸಲಾಗುತ್ತಿದೆ. ಕರಾಟೆಗೆ ಮ್ಯಾಟ್ ಅಳವಡಿಸಿದ ಸ್ಟೇಜ್ ಲಭ್ಯವಾಗುತ್ತಿದ್ದು, ಇದರ ಮ್ಯಾಟನ್ನು ಚೀನದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಜತೆಗೆ ವಾರ್ಮ್ ಅಪ್ ಏರಿಯಾ, ಎನ್‌ಕ್ವೆರಿ ಸೆಕ್ಷನ್ (ವಿಚಾರಣಾ ವಿಭಾಗ)ಗಳು ಜಾಗತಿಕ ಪಂದ್ಯಾಟಗಳನ್ನು ನೆನಪಿಸಲಿವೆ. ಸಾವಿರಕ್ಕೂ ಅಧಿಕ ಕರಾಟೆ ಪಟುಗಳು ದೇಶದ ಬೇರೆ ಬೇರೆ ರಾಜ್ಯಗಳಿಂದ ಆಗಮಿಸಲಿದ್ದಾರೆ ಎಂದು ಸಂಘಟಕರು ಮುಖ್ಯಮಂತ್ರಿಗೆ ವಿವರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಕರಾಟೆ ಸಂಘಟಕ ಪ್ರಮುಖರಾದ ಸುರೇಂದ್ರ, ಸುರೇಶ್ ಶೆಟ್ಟಿ, ಸುಧೀರ್, ಮನೀಶ್ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.