ನಿತ್ಯಾನಂದ ಮಧುರೈ ಪ್ರವೇಶ ನಿರ್ಬಂಧ
Team Udayavani, Oct 12, 2017, 12:00 PM IST
ಚೆನ್ನೈ: ಮಧುರೈ ಅಧೀನಮ್ ಮಠಕ್ಕೆ ಪ್ರವೇಶಿದಂತೆ ಸ್ವಾಮಿ ನಿತ್ಯಾನಂದಗೆ ಮದ್ರಾಸ್ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಮಠಕ್ಕೆ ಪ್ರವೇಶಿಸಲು ಪೊಲೀಸ್ ಭದ್ರತೆಯನ್ನು ಒದಗಿಸಬೇಕು ಎಂದು ನಿತ್ಯಾನಂದ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಆರ್. ಮಹದೇವನ್ ಈ ಆದೇಶ ಹೊರಡಿಸಿದ್ದು, ನಿತ್ಯಾನಂದ ಹಾಗೂ ಅವರ ಭಕ್ತರು ಮಧುರೈ ಮಠದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ನಿರ್ದೇಶನ ನೀಡಿದೆ. ಅಲ್ಲದೆ ಈ ಸಂಬಂಧ ತಮಿಳುನಾಡಿನ ಮುಖ್ಯ ಕಾರ್ಯದರ್ಶಿ, ಹಿಂದು ಧಾರ್ಮಿಕ ಮತ್ತು ದತ್ತಿ ಕಮಿಷನರ್ ಹಾಗೂ ಮಧುರೈ ಜಿಲ್ಲಾಧಿಕಾರಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಮುಂದೂಡಿದೆ.
ಮಧುರೈ ಮಠಕ್ಕೆ ನೇಮಕಗೊಂಡಿದ್ದ ನಿತ್ಯಾನಂದ: 2012ರಲ್ಲಿ ಮಧುರೈ ಅಧೀನಮ್ ಪೀಠದ 293ನೇ ಸ್ವಾಮೀಜಿ
ಯನ್ನಾಗಿ ನಿತ್ಯಾನಂದರನ್ನು ಘೋಷಸಲಾಗಿತ್ತು. ಆದರೆ ಇದಕ್ಕೆ ಹಿರಿಯ ಶ್ರೀಗಳು ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಈ ನೇಮಕ ವನ್ನು ರದ್ದುಗೊಳಿಸಿದ್ದರು. ಈ ಹಿನ್ನೆಲೆ ಯಲ್ಲಿ ನಿತ್ಯಾನಂದ ಹೈಕೋರ್ಟ್ ಮೊರೆ ಹೋಗಿದ್ದು, ಮಠದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡುವಂತೆ ಆಗ್ರಹಿಸಿದ್ದರು. ಅಲ್ಲದೆ ಮಠಕ್ಕೆ ನೇಮಕಗೊಂಡ ನಂತರ ರದ್ದುಗೊಳಿಸಲಾಗದು ಎಂದು ನಿತ್ಯಾನಂದ ವಾದಿಸಿದ್ದರು.
ಆಸ್ತಿ ಕಬಳಿಸುವ ಹುನ್ನಾರ: ಈ ಮಧ್ಯೆ ಮಠಕ್ಕೆ ಹಿಂದಿನ ಬಾಗಿಲಿನಿಂದ ಪ್ರವೇಶಿಸಲು ನಿತ್ಯಾನಂದ ಪ್ರಯತ್ನಿಸಿದ್ದರು
ಎಂದು ಆರೋಪಿಸಲಾಗಿದೆ. ಮಠದ ಆಸ್ತಿಯನ್ನು ಕಬಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮಧುರೈ ಮಠದ ಆಡಳಿತ
ಮಂಡಳಿ ಪ್ರತ್ಯೇಕ ದೂರು ಸಲ್ಲಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
CT Ravi ಬಂಧನ ಪ್ರಕರಣ; ಗ್ರಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.