ಪುತ್ತೂರಿನಲ್ಲಿ ಪ್ರತಿಭಟನೆ
Team Udayavani, Oct 12, 2017, 12:04 PM IST
ಪುತ್ತೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಹಿಂದೂಗಳ ಧಮನವನ್ನೇ ಅಜೆಂಡವಾಗಿಟ್ಟುಕೊಂಡಿದೆ ಎಂದು ಬಜರಂಗದಳ ಜಿಲ್ಲಾ ಗೋರಕ್ಷ ಪ್ರಮುಖ್ ಮುರಳಿಕೃಷ್ಣ ಹಸಂತಡ್ಕ ಹೇಳಿದರು.
ರಾಜ್ಯ ಸರಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ, ವಿಶ್ವ ಹಿಂದೂ ಪರಿಷತ್, ಬಜರಂಗದಳದ ವತಿಯಿಂದ ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ಸಂಘಟನೆ ನಾಯಕರು, ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುವ ಮೂಲಕ ವಿನಾಕಾರಣ ಹಿಂದೂಗಳನ್ನು ಕೆಣಕುವ ಕೆಲಸ ಮಾಡಲಾಗುತ್ತಿದೆ. ಈಗ ಕಾಲ ಸನ್ನಿಹಿತವಾಗಿದೆ. ಸಿದ್ದರಾಮಯ್ಯ ಸರಕಾರದ ಪಾಪದ ಕೊಡ ತುಂಬಿ ಹೋಗಿದೆ. ಇನ್ನು ಆರು ತಿಂಗಳು ಮಾತ್ರವೇ ಕಾಂಗ್ರೆಸ್ ಅಧಿಕಾರ. ಅಲ್ಲಿ ತನಕ ನಾವು ಸಹಿಸಿಕೊಳ್ಳುತ್ತೇವೆ. ನೀವು ಮಾಡಿದ ಪಾಪದ ಫಲವಾಗಿ ತಕ್ಕ ಶಾಸ್ತಿ ಅನುಭವಿಸಲಿದ್ದೀರಿ. ರಾಜ್ಯದ ಜನತೆ ಕಿವಿಹಿಂಡಿ ಅ ಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದರು.
ಸವಾಲಾಗಿ ಸ್ವೀಕರಿಸಲು ಸಿದ್ಧ
ರಾಷ್ಟ್ರದ್ರೋಹಿ, ಮತಾಂಧರು ಅಡ್ಡಿ ಮಾಡಿದರೆ, ಇದನ್ನೇ ಸವಾಲಾಗಿ ಸ್ವೀಕರಿಸಿ ಎದುರಿಸಲು ಸಿದ್ಧರಿದ್ದೇವೆ. ಬಿ.ಸಿ. ರೋಡ್ ಹಾಗೂ ಪುತ್ತೂರಿನ ಚಿನ್ಮಯ್ ವಿರುದ್ಧ ದಾಖಲಾದ 307 ಪ್ರಕರಣದ ತನಿಖೆಯನ್ನು ಹೈಕೋರ್ಟ್ ತಡೆ ಹಿಡಿದಿದೆ. ಧರ್ಮವನ್ನು ರಕ್ಷಿಸಿದರೆ, ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂಬ ಮಾತು ಇಲ್ಲಿ ಸತ್ಯವಾಗಿದೆ. ಧರ್ಮದ ರಕ್ಷಣೆಗಾಗಿ ಯಾವ ತ್ಯಾಗಕ್ಕೂ ಸಿದ್ಧರಾಗಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.